AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ಹೋಳಿ ಹಬ್ಬದಂದು ಈ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ

ಭಾರತದ ಮಧ್ಯ ಹಾಗೂ ಪಶ್ಚಿಮ ಭಾಗಗಳಲ್ಲಿ ಹೋಳಿ ಹಬ್ಬದಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

India Weather Updates: ಹೋಳಿ ಹಬ್ಬದಂದು ಈ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ
ಮಳೆImage Credit source: Mint
ನಯನಾ ರಾಜೀವ್
|

Updated on: Mar 06, 2023 | 7:34 AM

Share

ಭಾರತದ ಮಧ್ಯ ಹಾಗೂ ಪಶ್ಚಿಮ ಭಾಗಗಳಲ್ಲಿ ಹೋಳಿ ಹಬ್ಬದಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ, ಪಶ್ಚಿಮ ಹಿಮಾಲಯ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ದೆಹಲಿ, ಲಡಾಖ್​ನಲ್ಲಿ ಮಳೆಯಾಗಲಿದೆ.

ಮುಂದಿನ 5 ದಿನಗಳ ಕಾಲ ಅರುಣಾಚಲಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ, ಮಾರ್ಚ್​ 7 ಹಾಗೂ 9ರ ನಡುವೆ ಜಾರ್ಖಂಡ್, ಒಡಿಶಾದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಕಾರವಾರದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಚಿಕ್ಕನಾಯಕನಹಳ್ಳಿಯಲ್ಲಿ 13 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಶಾಖದ ಅಲೆ ಏಳುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: India Weather Updates: ಈ 4 ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್​ ಹಾಗೂ ಮುಂದಿನ 48 ಗಂಟೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ