ಭಾರತದ ಮಧ್ಯ ಹಾಗೂ ಪಶ್ಚಿಮ ಭಾಗಗಳಲ್ಲಿ ಹೋಳಿ ಹಬ್ಬದಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ, ಪಶ್ಚಿಮ ಹಿಮಾಲಯ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ದೆಹಲಿ, ಲಡಾಖ್ನಲ್ಲಿ ಮಳೆಯಾಗಲಿದೆ.
ಮುಂದಿನ 5 ದಿನಗಳ ಕಾಲ ಅರುಣಾಚಲಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ, ಮಾರ್ಚ್ 7 ಹಾಗೂ 9ರ ನಡುವೆ ಜಾರ್ಖಂಡ್, ಒಡಿಶಾದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಕಾರವಾರದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಚಿಕ್ಕನಾಯಕನಹಳ್ಳಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಶಾಖದ ಅಲೆ ಏಳುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: India Weather Updates: ಈ 4 ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹಾಗೂ ಮುಂದಿನ 48 ಗಂಟೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ