ಮುಂದಿನ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಸೇರಿದಂತೆ ಒಟ್ಟು 6 ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಶುಷ್ಕ, ಬಿಸಿಲಿನ ವಾತಾವರಣವಿರಲಿದೆ, ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಶನಿವಾರ ಮತ್ತು ಭಾನುವಾರದಂದು ಚದುರಿದ ಹಿಮಪಾತ ಅಥವಾ ಮಳೆ ಬೀಳುವ ನಿರೀಕ್ಷೆಯಿದೆ ಎಂದು IMD ಹೇಳಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಮಾರ್ಚ್ 8ರಂದು ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಮುನ್ಸೂಚನೆಯ ಪ್ರಕಾರ, ದೆಹಲಿಯು ಸಾಮಾನ್ಯ ತಾಪಮಾನಕ್ಕಿಂತ ಮೂರು ಡಿಗ್ರಿಗಳಷ್ಟು ಹೆಚ್ಚಿನ ತಾಪಮಾನವನ್ನು ಹೊಂದುವ ನಿರೀಕ್ಷೆಯಿದೆ, ಅಂದರೆ ದೆಹಲಿಯ ಜನರು ಬಲವಾದ ಸೂರ್ಯನ ಬೆಳಕು ಮತ್ತು ಬಿಸಿ ವಾತಾವರಣದ ನಡುವೆ ಹೋಳಿ ಆಚರಿಸಬೇಕಾಗುತ್ತದೆ.
ದೆಹಲಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇತ್ತು, ಇದು ಸಾಮಾನ್ಯಕ್ಕಿಂತ ನಾಲ್ಕು ಡಿಗ್ರಿ, ಕನಿಷ್ಠ ತಾಪಮಾನವು 16.3 ಡಿಗ್ರಿ ಸೆಲ್ಸಿಯಸ್, ಇದು ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ.
ಹೋಳಿ ನಂತರ ಮಾರ್ಚ್ 9 ರಿಂದ 11 ರವರೆಗೆ ದೆಹಲಿಯಲ್ಲಿ ಗರಿಷ್ಠ ತಾಪಮಾನವು 32-33 ಡಿಗ್ರಿಗಳ ನಡುವೆ ಇರುತ್ತದೆ ಎಂದು IMD ಮತ್ತಷ್ಟು ಹೇಳಿದೆ, ಆದರೆ ಕನಿಷ್ಠ ತಾಪಮಾನವು 14 ಡಿಗ್ರಿಗಳಷ್ಟು ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಮಾರ್ಚ್ 11ರವರೆಗೆ ದೆಹಲಿಯಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ.
ಇನ್ನು ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಪಣಂಬೂರಿನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ