India Weather Updates: ದೆಹಲಿ-ಎನ್‌ಸಿಆರ್‌ನಲ್ಲಿ ಕಡಿಮೆಯಾಗಲಿದೆ ಬಿಸಿಗಾಳಿ, ಏಪ್ರಿಲ್ 20ರವರೆಗೆ ಕೇರಳದಲ್ಲಿ ಮಳೆ ಸಾಧ್ಯತೆ

ಏಪ್ರಿಲ್ 19 ರವರೆಗೆ ಪಶ್ಚಿಮ ಬಂಗಾಳದ ಗಂಗಾನದಿಯ ಕೆಲವು ಭಾಗಗಳಲ್ಲಿ ಬಿಸಿಗಾಳಿಯು ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ.

India Weather Updates: ದೆಹಲಿ-ಎನ್‌ಸಿಆರ್‌ನಲ್ಲಿ ಕಡಿಮೆಯಾಗಲಿದೆ ಬಿಸಿಗಾಳಿ, ಏಪ್ರಿಲ್ 20ರವರೆಗೆ ಕೇರಳದಲ್ಲಿ ಮಳೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
|

Updated on: Apr 17, 2023 | 9:27 AM

ದೆಹಲಿ: ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದು, ದೆಹಲಿ-ಎನ್‌ಸಿಆರ್‌ನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ (Heat Wave)ಕಡಿಮೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಜ್ಞರು ಭಾನುವಾರ ಹೇಳಿದ್ದಾರೆ. ಸದ್ಯಕ್ಕೆ ದೆಹಲಿ-ಎನ್‌ಸಿಆರ್‌ನಲ್ಲಿ ಶಾಖದ ಅಲೆ ಕಡಿಮೆ ಇರಲಿದೆ. ಆದರೆ ತಾಪಮಾನವು (Temperature) ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಎಂದು ಐಎಂಡಿ ತಜ್ಞ ನರೇಶ್ ಕುಮಾರ್ ಹೇಳಿದ್ದಾರೆ. ಪ್ರಸ್ತುತ ದೆಹಲಿ ಸೇರಿದಂತೆ ವಾಯುವ್ಯದಲ್ಲಿ ತಾಪಮಾನ ಸ್ವಲ್ಪ ಹೆಚ್ಚಾಗಿದೆ. ಹಾಗಾಗಿ, ಎರಡು ದಿನಗಳವರೆಗೆ ಹೆಚ್ಚಿನ ಬಿಸಿಲು ಗಾಳಿ ಇರುತ್ತದೆ. ಅಂದರೆ ತಾಪಮಾನವು ಸಾಮಾನ್ಯಕ್ಕಿಂತ 4.5-5 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಬಹುದು ಎಂದು ಅವರು ಹೇಳಿದ್ದಾರೆ.

ವಾಯುವ್ಯ ಭಾರತದಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚಿನ ತಾಪಮಾನ ಕುಸಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದರು. ಪೂರ್ವ ಭಾರತ, ಕರಾವಳಿ ಆಂಧ್ರಪ್ರದೇಶ ಮತ್ತು ಬಿಹಾರದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ನಾಲ್ಕೈದು ದಿನಗಳ ಕಾಲ ಇರಲಿದೆ. ನಾವು ಪಶ್ಚಿಮ ಬಂಗಾಳಕ್ಕೆ ಆರೆಂಜ್ ಅಲರ್ಟ್ ಕೂಡ ನೀಡಿದ್ದೇವೆ ಎಂದು ಕುಮಾರ್ ಹೇಳಿದರು. ಪಂಜಾಬ್ ಮತ್ತು ಹರ್ಯಾಣದಲ್ಲಿ ಶಾಖ ತರಂಗ ಪರಿಸ್ಥಿತಿಗಳು ಸಹ ಇರಬಹುದೆಂದು ನಿರೀಕ್ಷಿಸಲಾಗಿದೆ. ಗುರುವಾರ ಮುಂಜಾನೆ, ಹವಾಮಾನ ಕಚೇರಿ ಪ್ರಕಾರ, ದೆಹಲಿಯ ಕೆಲವು ಭಾಗಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಬಂಗಾಳದ ಕೆಲವು ಭಾಗಗಳಲ್ಲಿ ಏಪ್ರಿಲ್ 19 ರವರೆಗೆ ಬಿಸಿಗಾಳಿ

ಏಪ್ರಿಲ್ 19 ರವರೆಗೆ ಪಶ್ಚಿಮ ಬಂಗಾಳದ ಗಂಗಾನದಿಯ ಕೆಲವು ಭಾಗಗಳಲ್ಲಿ ಬಿಸಿಗಾಳಿಯು ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ. ಪಶ್ಚಿಮ ಬರ್ಧನ್‌ಮನ್‌ನಲ್ಲಿರುವ ಪನಾಗರ್ಹ್‌ನಲ್ಲಿ ದಿನದ ಅತ್ಯಧಿಕ ತಾಪಮಾನ 42.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕೋಲ್ಕತ್ತಾದ ಗರಿಷ್ಠ ತಾಪಮಾನ 39.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಗಂಗಾನದಿಯ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳನ್ನು ಮುನ್ಸೂಚಿಸಿರುವ ಹವಾಮಾನ ಇಲಾಖೆಯು ದಕ್ಷಿಣದ ಜಿಲ್ಲೆಗಳಲ್ಲಿ ಹಗಲಿನ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಇದು ಈಗಾಗಲೇ ಹಲವಾರು ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಶಿಯಸ್ ಮಾರ್ಕ್‌ಗಿಂತ ಮೇಲಿರುತ್ತದೆ.

ಕೇರಳದಲ್ಲಿ ಮಳೆ ಸಾಧ್ಯತೆ

ಏಪ್ರಿಲ್ 20 ರವರೆಗೆ ಕೇರಳದ ಕೆಲವು ಜಿಲ್ಲೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಈ ಅವಧಿಯಲ್ಲಿ ದಕ್ಷಿಣ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. IMD ಏಪ್ರಿಲ್ 21 ರಿಂದ 27 ರವರೆಗೆ ರಾಜ್ಯದಾದ್ಯಂತ ಸಾಮಾನ್ಯ ಮಳೆಯಾಗಿದೆ. ಕೆಲವು ಜಿಲ್ಲೆಗಳು ಭಾನುವಾರದಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗಿದ್ದು, ಬಿಸಿಲಿನ ಬೇಗೆ ಕಡಿಮೆಯಾಗಿಲ್ಲ

ಏತನ್ಮಧ್ಯೆ, ಶುಕ್ರವಾರ ಪಾಲಕ್ಕಾಡ್ ಮತ್ತು ತ್ರಿಶ್ಶೂರ್ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ನಲ್ಲಿ ತಾಪಮಾನ ದಾಖಲಾಗಿದ್ದು. ಪಾಲಕ್ಕಾಡ್‌ನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದರೆ, ತ್ರಿಶೂರ್‌ನಲ್ಲಿ 36.1 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಏಪ್ರಿಲ್ 20 ರವರೆಗೆ ದಕ್ಷಿಣ ಜಿಲ್ಲೆಗಳು ಮತ್ತು ಪಾಲಕ್ಕಾಡ್‌ನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಐಎಂಡಿ ಹೇಳಿದೆ. ಏಪ್ರಿಲ್ 21 ಮತ್ತು 27 ರ ನಡುವೆ, ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟದ ಕೆಲವು ಪ್ರದೇಶ ಹೊರತುಪಡಿಸಿ ರಾಜ್ಯದಾದ್ಯಂತ ತಾಪಮಾನವು ಸಾಮಾನ್ಯವಾಗಿರಬಹುದು.

ಇದನ್ನೂ ಓದಿ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭ ನೋಡಲು ಬಂದಿದ್ದ 11 ಮಂದಿ ಬಿಸಿಲಿನ ತಾಪಕ್ಕೆ ಬಲಿ

ಬೇಸಿಗೆಯ ಮಳೆಯು ಏಪ್ರಿಲ್ 21 ರ ವೇಳೆಗೆ ಹೆಚ್ಚಾಗುವ ಸಾಧ್ಯತೆಯಿದೆ. ಮಳೆಯು ಶುಷ್ಕವಾಗಿ ಉಳಿದಿರುವ ಉತ್ತರ ಭಾಗಗಳನ್ನು ಒಳಗೊಂಡಂತೆ ಹೆಚ್ಚಿನ ಪ್ರದೇಶಗಳನ್ನು ಆವರಿಸುತ್ತದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹವಾಮಾನಶಾಸ್ತ್ರಜ್ಞ ರಾಜೀವನ್ ಎರಿಕ್ಕುಳಂ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ