AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ಮುಂದಿನ 3 ದಿನಗಳ ಕಾಲ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ, ಕೆಲವು ಕಡೆ ಬಿಸಿಲ ಝಳವೂ ಹೆಚ್ಚಳ

ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ.

India Weather Updates: ಮುಂದಿನ 3 ದಿನಗಳ ಕಾಲ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ, ಕೆಲವು ಕಡೆ ಬಿಸಿಲ ಝಳವೂ ಹೆಚ್ಚಳ
ಮಳೆImage Credit source: Indian Express
Follow us
ನಯನಾ ರಾಜೀವ್
|

Updated on: Feb 26, 2023 | 7:07 AM

ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್​ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಹಾರಾಷ್ಟ್ರ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ತಾಪಮಾನವು 35-37 ಡಿಗ್ರಿ ಸೆಲ್ಸಿಯಸ್ ನಡುವೆ ಇದೆ. ಅಸ್ಸಾಂ, ಮೇಘಾಲಯ, ಸಿಕ್ಕಿಂ, ತಮಿಳುನಾಡು, ಪುದುಚೇರಿ, ಕಾರೈಕಲ್​ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಗುಜರಾತ್​ನಲ್ಲಿ ಮುಂದಿನ 2 ದಿನ ಹವಾಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ನಂತರ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಇನ್ನು ಮಹಾರಾಷ್ಟ್ರದಲ್ಲಿ ಮುಂದಿನ 3 ದಿನಗಳಲ್ಲಿ ಎರಡು ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಬಹುದು. ಫೆಬ್ರವರಿ 26-28ರ ನಡುವೆ ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮತ್ತಷ್ಟು ಓದಿ: Heat Wave: ವಿವಿಧ ರಾಜ್ಯಗಳಲ್ಲಿ ಶಾಖದ ಅಲೆಯ ಎಚ್ಚರಿಕೆ, ಗರಿಷ್ಠ ಉಷ್ಣಾಂಶ 3-5 ಡಿಗ್ರಿಗಳಷ್ಟು ಹೆಚ್ಚಳ ಸಾಧ್ಯತೆ

ಫೆಬ್ರವರಿ 28ರಿಂದ ಮಾರ್ಚ್​ 2ರವರೆಗೆ ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯಾಗಲಿದೆ. ಫೆಬ್ರವರಿ 28ರಂದು ಕಾಶ್ಮೀರ ಕಣಿವೆಯಲ್ಲಿ ಹಾಗೂ ಮಾರ್ಚ್​ 1 ರಂದು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರ್ನಾಟಕದ ಬಾಗಲಕೋಟೆಯಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ