ಈಶಾನ್ಯ ರಾಜ್ಯಗಳಲ್ಲಿ ಫೆಬ್ರವರಿ 21 ರಿಂದ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ, ಜತೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರದಲ್ಲೂ ಸುಮಾರು ಐದು ದಿನಗಳ ಕಾಲ ಚದುರಿದ ಮಳೆಯಾಗುವ ನಿರೀಕ್ಷೆ ಇದೆ.
ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲೂ ಇದೇ ವಾತಾವರಣ ಇರಲಿದೆ, ಅಸ್ಸಾಂ, ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ ಗುಜರಾತ್ನ ಹಲವು ಭಾಗಗಳಲ್ಲಿ ಗರಿಷ್ಠ ತಾಮಾನ 36-38 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ ಇದೆ.
ಮತ್ತಷ್ಟು ಓದಿ:Karnataka Weather Today: ಚಳಿಗೆ ಬೆಂಗಳೂರು ಗಡಗಡ; ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಶೀತ ಅಲೆ
ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ, ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ