India Weather Updates: ದೆಹಲಿಯಲ್ಲಿ ಭಾರಿ ಮಳೆ, ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನಲ್ಲೂ ಮಳೆಯಾಗುವ ಸಾಧ್ಯತೆ

ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಕಾದಿದ್ದ ಭೂಮಿ ತಂಪಾಗಿದೆ. ದೆಹಲಿಯಲ್ಲಿ ಮಾರ್ಚ್​1 ರಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

India Weather Updates: ದೆಹಲಿಯಲ್ಲಿ ಭಾರಿ ಮಳೆ, ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನಲ್ಲೂ ಮಳೆಯಾಗುವ ಸಾಧ್ಯತೆ
ಮಳೆImage Credit source: Britannica
Follow us
|

Updated on: Mar 02, 2023 | 7:40 AM

ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಕಾದಿದ್ದ ಭೂಮಿ ತಂಪಾಗಿದೆ. ದೆಹಲಿಯಲ್ಲಿ ಮಾರ್ಚ್​1 ರಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇನ್ನು, ಹಿಮಾಚಲಪ್ರದೇಶದಲ್ಲಿ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 120 ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಾರ್ಚ್​ 2 ಹಾಗೂ 4 ರಂದು ಬಯಲು ಪ್ರದೇಶ ಹೊರತುಪಡಿಸಿ ಗುಡ್ಡಗಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬುಧವಾರ ಗೊಂಡಾಲಾದಲ್ಲಿ 6 ಸೆಂ.ಮೀ, ಕಲ್ಪಾದಲ್ಲಿ 5.5 ಸೆಂ.ಮೀ, ಖದ್ರಾಲ, ಕೀಲಾಂಗ್ ಹಾಗೂ ಕುಕುಮ್ಸೇರಿಯಲ್ಲಿ 4 ಸೆಂ.ಮೀ, ಕೋಠಿಯಲ್ಲಿ 3 ಸೆಂ.ಮೀ ಹಾಗೂ ಉದಯಪುರದಲ್ಲಿ 2 ಸೆಂ.ಮೀ ಹಿಮಪಾತವಾಗಿದೆ.

ಸ್ಕೈಮೆಟ್ ವರದಿ ಪ್ರಕಾರ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿಗಳಷ್ಟು ಇಳಿಕೆಯಾಗಬಹುದು ಎಂದು ಹೇಳಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ, ಲಕ್ಷದ್ವೀಪ, ಅಸ್ಸಾಂ, ಅರುಣಾಚಲಪ್ರದೇಶ, ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ, ಅಷ್ಟೇ ಅಲ್ಲದೆ ಪಂಜಾಬ್​ನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: India Weather Updates: ಮಾರ್ಚ್​ ಮೊದಲ ವಾರದಲ್ಲಿ ಈ ರಾಜ್ಯಗಳಲ್ಲಿ 37 ಡಿಗ್ರಿ ಸೆಲ್ಸಿಯಸ್​ಗಿಂತಲೂ ಹೆಚ್ಚಲಿದೆ ಗರಿಷ್ಠ ತಾಪಮಾನ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಚಳಿಯ ವಾತಾವರಣ ಶುರುವಾಗಿದೆ. ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 11.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ. 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ