India Weather Updates: ಮುಂದಿನ 6 ದಿನಗಳವರೆಗೆ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

|

Updated on: Mar 14, 2023 | 8:00 AM

ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್​ ಎರಡನೇ ವಾರ ನಡೆಯುತ್ತಿದೆ, ಹವಾಮಾನವು ವೇಗವಾಗಿ ಬದಲಾಗುತ್ತಿದೆ, ಉಷ್ಣಗಾಳಿಯೂ ಹೆಚ್ಚುತ್ತಿದೆ.

India Weather Updates: ಮುಂದಿನ 6 ದಿನಗಳವರೆಗೆ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ
Image Credit source: Healthline
Follow us on

ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್​ ಎರಡನೇ ವಾರ ನಡೆಯುತ್ತಿದೆ, ಹವಾಮಾನವು ವೇಗವಾಗಿ ಬದಲಾಗುತ್ತಿದೆ, ಉಷ್ಣಗಾಳಿಯೂ ಹೆಚ್ಚುತ್ತಿದೆ. ಹಗಲಿನಲ್ಲಿ ಮನೆಯಲ್ಲೂ ಇರಲಾರದ ಪರಿಸ್ಥಿತಿ ಕೆಲವೆಡೆ ಇದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ

ಈ ನಡುವೆ ಕೆಲವು ರಾಜ್ಯಗಳಲ್ಲಿ, ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಮಾರ್ಚ್​ 14-16ರವರೆಗೆ ಗಿಲ್ಗಿಟ್, ಮುಜಾಫರಾಬಾದ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲಪ್ರದೇಶ, ಉತ್ತರಾಖಂಡ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ದಕ್ಷಿಣ ಭಾರತ, ಪೂರ್ವ ಭಾರತ ಹಾಗೂ ಮಧ್ಯ ಭಾರತದಲ್ಲಿ ಮಾರ್ಚ್​ 15-17ರವರೆಗೆ ಮಳೆಯಾಗಲಿದೆ. ಅದರಂತೆ ದೇಶದ ವಿವಿಧೆಡೆ ಮುಂದಿನ 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯಪ್ರದೇಶದಲ್ಲಿ ಇಂದು ಮಳೆಯಾಗಲಿದೆ, ಅರುಣಾಚಲಪ್ರದೇಶ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಮಣಿಪುರದ ಕೆಲವು ಭಾಗಗಳಲ್ಲಿ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಇದೆಲ್ಲದರ ನಡುವೆ ಈಗಾಗಲೇ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶದ ಹಲವು ಪ್ರದೇಶಗಳಲ್ಲಿ ತೀವ್ರ ಬಿಸಿಲಿನ ಝಳ ಕಾಣಿಸಿಕೊಂಡಿದೆ. ಅನೇಕ ಪ್ರದೇಶಗಳಲ್ಲಿ, ಇಂದು ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು. MID ಪ್ರಕಾರ, ಪ್ರಸ್ತುತ ಹೆಚ್ಚಿನ ರಾಜ್ಯಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿಗಳಷ್ಟು ಹೆಚ್ಚಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ