ದೇಶಾದ್ಯಂತ ಹೆಚ್ಚಿನ ರಾಜ್ಯಗಳಲ್ಲಿ ತಾಪಮಾನ ಗಣನೀಯವಾಗಿ ಏರುತ್ತಿದೆ. ಉತ್ತರದಿಂದ ದಕ್ಷಿಣಕ್ಕೆ ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚಿನ ತಾಪಮಾನವು ವರದಿಯಾಗಿದೆ. ಉತ್ತರ ಪ್ರದೇಶ, ದೆಹಲಿ, ಬಿಹಾರದಲ್ಲಿ ಫೆಬ್ರವರಿಯಲ್ಲೇ ಏಪ್ರಿಲ್,ಮೇನಲ್ಲಿ ಕಾಣಿಸಿಕೊಳ್ಳುವಷ್ಟು ಸೆಕೆ ಇತ್ತು. ಈ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ಮಳೆಯಾಗಲಿದೆ, ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರ್ಯಾಣ ಹಾಗೂ ಗುಜರಾತ್ನಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ನಂತರ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಬಹುದು.
ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದ ಒಳಭಾಗ, ಗುಜರಾತ್ನ ಕೆಲವು ಭಾಗಗಳು, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ 35-37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ವಾಯುವ್ಯ ಮತ್ತು ಮಧ್ಯ ಭಾರತದ ರಾಜ್ಯಗಳಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ಮತ್ತಷ್ಟು ಓದಿ: Heatwave: ಭಾರತದಲ್ಲಿ ತೀವ್ರಗೊಳ್ಳುತ್ತಿದೆ ಉಷ್ಣ ಅಲೆ; ತಾಪಮಾನ ಏರಿಕೆಯಿಂದ ಅಪಾಯ ಕಟ್ಟಿಟ್ಟ ಬುತ್ತಿ
ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಲಘು ಮಳೆ ದಾಖಲಾಗಿದೆ.
ಹವಾಮಾನ ಇಲಾಖೆ ಪ್ರಕಾರ ಫೆಬ್ರವರಿ 28ರಿಂದ ಹಿಮಾಲಯ ಪ್ರದೇಶಗಳು ಮತ್ತು ವಾಯುವ್ಯ ರಾಜ್ಯಗಳಲ್ಲಿ ಮಳೆಯಾಗಲಿದೆ. ಹರ್ಯಾಣ ಹಾಗೂ ಚಂಡೀಗಢದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ, ಉತ್ತರಾಖಂಡದಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 1ರವರೆಗೆ 30-40 ಕಿ,ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ