ಭಾರತದ ಆರ್ಥಿಕತೆ ಅತ್ಯದ್ಭುತವಾಗಿ ಸಾಗಲಿದೆ.. 5 ಟ್ರಿಲಿಯನ್ ಡಾಲರ್​ ಎಕಾನಮಿ ಸಾಧಿಸುವುದು ಖಚಿತ -ಮುಖೇಶ್ ಅಂಬಾನಿ

2021ರ ಅಂತ್ಯದ ಒಳಗೆ ಭಾರತದಲ್ಲಿ 5ಜಿ ಆರಂಭವಾಗಲಿದೆ. ಅದಕ್ಕೆ ಬೇಕಾದ ಸಕಲ ಸಿದ್ಧತೆಗಳೂ ಆಗುತ್ತಿದೆ. ಭಾರತ ಪ್ರಗತಿ ಹೊಂದುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೊನಾ ಸಹ ಭಾರತವನ್ನು ತಡೆದು ನಿಲ್ಲಿಸಲಾರದು ಎಂದು ಮುಕೇಶ್ ಅಂಬಾನಿ ಹೇಳಿದ್ದಾರೆ.

ಭಾರತದ ಆರ್ಥಿಕತೆ ಅತ್ಯದ್ಭುತವಾಗಿ ಸಾಗಲಿದೆ.. 5 ಟ್ರಿಲಿಯನ್ ಡಾಲರ್​ ಎಕಾನಮಿ ಸಾಧಿಸುವುದು ಖಚಿತ -ಮುಖೇಶ್ ಅಂಬಾನಿ
ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
Follow us
Skanda
|

Updated on:Dec 10, 2020 | 2:37 PM

ದೆಹಲಿ: ಭಾರತದ ಆರ್ಥಿಕತೆ ಅತಿ ಶೀಘ್ರ ಪುಟಿದೇಳಲಿದೆ. ಯಾರೂ ಊಹಿಸದ ರೀತಿಯಲ್ಲಿ ಆರ್ಥಿಕ ಪ್ರಗತಿಗೆ ಭಾರತ ಸಾಕ್ಷಿಯಾಗಲಿದೆ. ಆರ್ಥಿಕತೆ ನೆಲಕಚ್ಚಲಿದೆ ಎಂಬ ಸಿನಿಕತನದ ಹೇಳಿಕೆಗಳು ಸುಳ್ಳಾಗಲಿದೆ ಎಂದು ಭಾರತದ ಶ್ರೀಮಂತ ಉದ್ಯಮಿ, ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಮೊಬೈಲ್​ ಕಾಂಗ್ರೆಸ್ (IMC) 2020 ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಾನಿ, ಭಾರತದಲ್ಲಿ ಆದಾಯ, ಉದ್ಯೋಗ, ಜೀವನ ಸ್ಥಿತಿ ಎಲ್ಲವೂ ಉನ್ನತ ಮಟ್ಟಕ್ಕೆ ಏರಲಿದೆ. ಸಮಾನತೆಯ ಭಾರತಕ್ಕೆ ನಾವು ಸಾಕ್ಷಿಯಾಗಲಿದ್ದು, 5 ಲಕ್ಷ ಡಾಲರ್ ಆರ್ಥಿಕತೆಯ ಗುರಿಯನ್ನು ಭಾರತ ಅತ್ಯಂತ ವೇಗವಾಗಿ ತಲುಪಲಿದೆ ಎಂದು ಹೇಳಿದ್ದಾರೆ.

ಡಿಜಿಟಲ್​ ಕ್ರಾಂತಿ ಭಾರತೀಯರಲ್ಲಿ ಹೊಸ ಬದಲಾವಣೆಯನ್ನು ತಂದಿದೆ. ಡಿಜಿಟಲ್ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಸೃಷ್ಟಿಯಾಗಿದೆ. ವಿಶ್ವದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಡಿಜಿಟಲ್ ಕ್ಷೇತ್ರದಲ್ಲಿ ಸಶಕ್ತವಾಗಿದೆ ಮತ್ತು ವೇಗವಾಗಿ ಸಾಗುತ್ತಿದೆ. ಪ್ರತಿಯೊಬ್ಬ ಭಾರತೀಯನೂ ಡಿಜಿಟಲ್​ ಲೋಕಕ್ಕೆ ತೆರೆದುಕೊಳ್ಳುವ ಮೂಲಕ ದೇಶದ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

2021ರ ಅಂತ್ಯದ ಒಳಗೆ ಭಾರತದಲ್ಲಿ 5ಜಿ ಆರಂಭವಾಗಲಿದೆ. ಅದಕ್ಕೆ ಬೇಕಾದ ಸಕಲ ಸಿದ್ಧತೆಗಳೂ ಆಗುತ್ತಿದೆ. ಭಾರತ ಪ್ರಗತಿ ಹೊಂದುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೊನಾ ಸಹ ಭಾರತವನ್ನು ತಡೆದು ನಿಲ್ಲಿಸಲಾರದು ಎಂದು ಹೇಳುವ ಮೂಲಕ ಭಾರತದ ಆರ್ಥಿಕತೆ ಪಾತಾಳಕ್ಕೆ ತಲುಪಿದೆ ಎನ್ನುತ್ತಿರುವವರನ್ನು ಪರೋಕ್ಷವಾಗಿ ಕಾಲೆಳೆದಿದ್ದಾರೆ.

ದೆಹಲಿ ಚಲೋ ಆರ್ಥಿಕತೆಗಷ್ಟೇ ಅಲ್ಲ.. ಮುಂದೆ ದೇಶದ ಭದ್ರತೆಗೇ ಧಕ್ಕೆ ತರಲಿದೆ: ಅಮರೀಂದರ್ ಎಚ್ಚರಿಕೆ

Published On - 2:22 pm, Thu, 10 December 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ