AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ದಾಳಿಯನ್ನು ನಿಲ್ಲಿಸದಿದ್ದರೆ ಭಾರತ ಉತ್ತರ ಕೊಡುತ್ತಲೇ ಇರುತ್ತದೆ; ವಿದೇಶಾಂಗ ಸಚಿವಾಲಯ

ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ 16 ಜೀವಗಳು ಬಲಿಯಾಗಿವೆ. ಹೀಗಾಗಿ, ಭಾರತ ಪ್ರತೀಕಾರ ತೀರಿಸಿಕೊಳ್ಳಬೇಕಾಯಿತು. ಪಾಕಿಸ್ತಾನ ನಮ್ಮ ಹಲವಾರು ನಗರಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆದರೆ ಎಲ್ಲಾ ಪ್ರಯತ್ನಗಳು ವಿಫಲವಾದವು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿದೆ. ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ 25 ನಿಮಿಷಗಳ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾಗೆ ಸೇರಿದಂತೆ 9 ಉಗ್ರರ ನೆಲೆಗಳನ್ನು ನಾಶಪಡಿಸಿದವು. ಇದಾದ ನಂತರ ಪಾಕಿಸ್ತಾನವು LOC ಬಳಿ ಅಪ್ರಚೋದಿತ ಗುಂಡಿನ ದಾಳಿಯನ್ನು ಹೆಚ್ಚಿಸಿದೆ, 15 ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ ಎಂದು ಭಾರತೀಯ ಸೇನೆ ಹೇಳಿದೆ.

ಪಾಕಿಸ್ತಾನ ದಾಳಿಯನ್ನು ನಿಲ್ಲಿಸದಿದ್ದರೆ ಭಾರತ ಉತ್ತರ ಕೊಡುತ್ತಲೇ ಇರುತ್ತದೆ; ವಿದೇಶಾಂಗ ಸಚಿವಾಲಯ
Mea Press Conference
ಸುಷ್ಮಾ ಚಕ್ರೆ
|

Updated on: May 08, 2025 | 6:35 PM

Share

ನವದೆಹಲಿ, ಮೇ 8: ಪಾಕಿಸ್ತಾನದ ಮೇಲೆ ಭಾರತ ನಡೆಸಿದ 2ನೇ ದಾಳಿಯ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ಸೇನೆ ಮಾಹಿತಿ ನೀಡಿದೆ. ಪಾಕಿಸ್ತಾನವು ಸೇನಾ ನೆಲೆಗಳನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸದಿದ್ದರೆ ಭಾರತವು ಅದಕ್ಕೆ ಸೂಕ್ತ ಉತ್ತರವನ್ನು ನೀಡುತ್ತಲೇ ಇರುತ್ತದೆ ಎಂದು ವಿದೇಶಾಂಗ ಸಚಿವಾಲಯ (MEA) ಇಂದು ಸ್ಪಷ್ಟಪಡಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ನೇತೃತ್ವದ ‘ಆಪರೇಷನ್ ಸಿಂಧೂರ್‘ ಕುರಿತಾದ MEA ಪತ್ರಿಕಾಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು MEA ವಕ್ತಾರ ರಣಧೀರ್ ಜೈಸ್ವಾಲ್ ಕೂಡ ಭಾಗವಹಿಸಿದ್ದರು. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ, “ಇಂದು ಬೆಳಿಗ್ಗೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು ಹೇಳಿದರು. ಲಾಹೋರ್‌ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನವು ಕದನ ವಿರಾಮ ಉಲ್ಲಂಘನೆಯನ್ನು ತೀವ್ರಗೊಳಿಸಿದೆ. ಇದರ ಪರಿಣಾಮವಾಗಿ 16 ಜೀವಗಳು ಬಲಿಯಾಗಿವೆ. ಪಾಕಿಸ್ತಾನವೇ ಭಾರತವನ್ನು ಪ್ರತೀಕಾರಕ್ಕೆ ಒತ್ತಾಯಿಸಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಪೂಂಚ್, ಮೆಂಧರ್ ಮತ್ತು ರಾಜೌರಿ ವಲಯಗಳಲ್ಲಿನ ಪ್ರದೇಶಗಳಲ್ಲಿ ಪಾಕಿಸ್ತಾನವು ನಿಯಂತ್ರಣ ರೇಖೆಯಾದ್ಯಂತ ತನ್ನ ಅಪ್ರಚೋದಿತ ಗುಂಡಿನ ದಾಳಿಯ ತೀವ್ರತೆಯನ್ನು ಹೆಚ್ಚಿಸಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ
Image
12 ಡ್ರೋನ್​ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್: ಭಾರತ ಹೇಳಿದ್ದೇನು?
Image
ಭಾರತ ಪಾಕ್​ ಮೇಲೆ ನಡೆಸಿದ ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ
Image
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
Image
ಪಾಕಿಸ್ತಾನದ ಮೇಲೆ ಭಾರತದ ದಾಳಿಗೂ ಮುನ್ನ, ನಂತರದ ಸ್ಯಾಟಲೈಟ್​ ಚಿತ್ರಗಳು

ಇದನ್ನೂ ಓದಿ: ಪಾಕಿಸ್ತಾನದ ಮೇಲಿನ ದಾಳಿ ಬೆನ್ನಲ್ಲೇ ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ

“ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಪೂಂಚ್, ಮೆಂಧರ್ ಮತ್ತು ರಾಜೌರಿ ವಲಯಗಳಲ್ಲಿನ ಪ್ರದೇಶಗಳಲ್ಲಿ ಮಾರ್ಟರ್‌ಗಳು ಮತ್ತು ಹೆವಿ-ಕ್ಯಾಲಿಬರ್ ಫಿರಂಗಿಗಳನ್ನು ಬಳಸಿಕೊಂಡು ನಿಯಂತ್ರಣ ರೇಖೆಯಾದ್ಯಂತ ತನ್ನ ಅಪ್ರಚೋದಿತ ಗುಂಡಿನ ದಾಳಿಯ ತೀವ್ರತೆಯನ್ನು ಹೆಚ್ಚಿಸಿದೆ. ಪಾಕಿಸ್ತಾನದ ಗುಂಡಿನ ದಾಳಿಯಿಂದಾಗಿ ಮೂವರು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ ಹದಿನಾರು ಅಮಾಯಕರು ಬಲಿಯಾಗಿದ್ದಾರೆ. ಪಾಕಿಸ್ತಾನದ ಗುಂಡಿನ ದಾಳಿಯಿಂದ ಮೂವರು ಮಹಿಳೆಯರು ಮತ್ತು 5 ಮಕ್ಕಳು ಸೇರಿದಂತೆ 16 ಅಮಾಯಕ ಜೀವಗಳು ಬಲಿಯಾಗಿವೆ. ಪಾಕಿಸ್ತಾನದಿಂದ ಬಂದಿರುವ ಮಾರ್ಟರ್ ಮತ್ತು ಫಿರಂಗಿ ಗುಂಡಿನ ದಾಳಿಯನ್ನು ನಿಲ್ಲಿಸಲು ಭಾರತವು ಪ್ರತಿಕ್ರಿಯಿಸಬೇಕಾಯಿತು” ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

“ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಹಲ್ಗಾಮ್ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ, ಪಾಕಿಸ್ತಾನವು ಟಿಆರ್‌ಎಫ್ (ದಿ ರೆಸಿಸ್ಟೆನ್ಸ್ ಫ್ರಂಟ್) ಪಾತ್ರವನ್ನು ವಿರೋಧಿಸಿತು. ದಾಳಿಯ ಹೊಣೆಯನ್ನು ಟಿಆರ್‌ಎಫ್ ಒಮ್ಮೆ ಅಲ್ಲ, ಎರಡು ಬಾರಿ ಹೊತ್ತುಕೊಂಡ ನಂತರ ಪಾಕಿಸ್ತಾನ ಆ ದಾಳಿಯನ್ನು ವಿರೋಧಿಸಿತು. ನಮ್ಮ ಉದ್ದೇಶವು ವಿಷಯಗಳನ್ನು ಉಲ್ಬಣಗೊಳಿಸುವುದಲ್ಲ. ನಮ್ಮ ಮೇಲಿನ ದಾಳಿಗೆ ಮಾತ್ರ ಪ್ರತಿಕ್ರಿಯಿಸುತ್ತಿದ್ದೇವೆ. ನಾವು ಯಾವುದೇ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿಲ್ಲ/ ಪಾಕಿಸ್ತಾನದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಮಾತ್ರ ಹೊಡೆಯಲಾಗಿದೆ. ಆದರೆ, ಪಾಕಿಸ್ತಾನ ಉಗ್ರರ ಮೃತದೆಹಗಳಿಗೆ ಸರ್ಕಾರಿ ಗೌರವ ನೀಡಿ ಅಂತ್ಯಕ್ರಿಯೆ ನೆರವೇರಿಸಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ