SCO Summit: ಇಂದು ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು; ವಿದೇಶಾಂಗ ಸಚಿವ ಎಸ್​.ಜೈಶಂಕರ್​ ಭಾಗಿ

ಶಾಂಘೈ ಸಹಕಾರ ಸಂಘಟನೆ ಸ್ಥಾಪನೆಗೊಂಡು 20 ವರ್ಷ ಕಳೆದಿದೆ. ಈ ಬಾರಿ 20ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಈ ಶೃಂಗಸಭೆ ಇನ್ನಷ್ಟು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

SCO Summit: ಇಂದು ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು; ವಿದೇಶಾಂಗ ಸಚಿವ ಎಸ್​.ಜೈಶಂಕರ್​ ಭಾಗಿ
ಪ್ರಧಾನಿ ಮೋದಿ ಮತ್ತು ಎಸ್​.ಜೈಶಂಕರ್​
Follow us
TV9 Web
| Updated By: Lakshmi Hegde

Updated on:Sep 17, 2021 | 10:56 AM

ಇಂದು ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (SCO) 21ನೇ ಶೃಂಗಸಭೆ  (SCO Summit)ಇಂದು ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆಯಲಿದೆ. ಇದರಲ್ಲಿ ಭಾರತ ಪಾಲ್ಗೊಳ್ಳಲಿದ್ದು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈಶಂಕರ್​ ಈಗಾಗಲೇ ದುಶಾಂಬೆಯಲ್ಲಿ ಉಪಸ್ಥಿತರಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ (PM Modi)ಯವರು  ಭಾರತದ ನಿಯೋಗದ ನೇತೃತ್ವದ ವಹಿಸಿದ್ದು, ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಷಣ ಮಾಡಲಿದ್ದಾರೆ. ಭಾರತ  ಶಾಂಘೈ ಸಹಕಾರ ಸಂಘಟನೆಯ ಪೂರ್ಣ ಪ್ರಮಾಣದ ಸದಸ್ಯತ್ವ ವಹಿಸಿಕೊಂಡ ಬಳಿಕ ಭಾಗವಹಿಸುತ್ತಿರುವ ನಾಲ್ಕನೇ ಶೃಂಗಸಭೆ ಇದಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಶುರುವಾಗಿದ್ದು, ಅಲ್ಲಿನ ಸನ್ನಿವೇಶವೇ ಇಂದಿನ ಸಭೆಯಲ್ಲಿ ಚರ್ಚೆಯಾಗುವ ಮಹತ್ವದ ವಿಷಯವಾಗಿದೆ ಎನ್ನಲಾಗಿದೆ. 

ಈ ಎಸ್​ಸಿಒ ಶೃಂಗಸಭೆಯ ಹೊರತಾಗಿ ಭಾರತದ ವಿದೇಶಾಂಗ ಸಚಿವ ಜೈಶಂಕರ್​ ಅವರು ಇರಾನ್​, ಅರ್ಮೇನಿಯಾ, ಉಜಬೇಕಿಸ್ತಾನ್​​ ದೇಶಗಳ ವಿದೇಶಾಂಗ ವ್ಯವಹಾರಗಳ ಸಚಿವರನ್ನು ಇಂದು ಭೇಟಿಯಾಗಲಿದ್ದಾರೆ. ತಮ್ಮ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧ ವೃದ್ಧಿ ಮತ್ತು ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆಯೂ ಚರ್ಚಿಸಲಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.

ಶಾಂಘೈ ಸಹಕಾರ ಸಂಘಟನೆಗೆ 20 ವರ್ಷ ಇನ್ನು ಶಾಂಘೈ ಸಹಕಾರ ಸಂಘಟನೆ ಸ್ಥಾಪನೆಗೊಂಡು 20 ವರ್ಷ ಕಳೆದಿದೆ. ಈ ಬಾರಿ 20ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಈ ಶೃಂಗಸಭೆ ಇನ್ನಷ್ಟು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕಳೆದ ಎರಡು ದಶಕಗಳಲ್ಲಿ ಈ ಸಂಸ್ಥೆ ನಿರ್ವಹಿಸಿದ ಕಾರ್ಯಚಟುವಟಿಕೆಗಳ ಬಗ್ಗೆ ಶೃಂಗಸಭೆಯಲ್ಲಿ ಚರ್ಚೆ ನಡೆಯಲಿದೆ. ಹಾಗೇ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ 71ನೇ ಜನ್ಮದಿನವಾಗಿದ್ದು, ಇದೇ ದಿನ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದು ಇನ್ನೊಂದು ವಿಶೇಷ ಸಂಗತಿ.

ಇದನ್ನೂ ಓದಿ: ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

Happy Birthday Narendra Modi: ಪ್ರಧಾನಿ ನರೇಂದ್ರ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ ದೇವೇಗೌಡರು-ಹೆಚ್​ಡಿ ಕುಮಾರಸ್ವಾಮಿ

Published On - 9:42 am, Fri, 17 September 21

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ