ತಕ್ಷಣಕ್ಕೆ ಪಾಕ್ ಮೇಲೆ ಆಕ್ರಮಣ ಇಲ್ಲ, ಒಂದಲ್ಲಾ ಒಂದು ದಿನ ಇಡೀ ಕಾಶ್ಮೀರ ಭಾರತಕ್ಕೆ ಸೇರಲಿದೆ: ವಾಯುಪಡೆ ಹಿರಿಯ ಅಧಿಕಾರಿ

ಒಂದಲ್ಲ ಒಂದು ದಿನ ಕಾಶ್ಮೀರವು ಸಂಪೂರ್ಣವಾಗಿ ಭಾರತದ ಸುಪರ್ದಿಗೆ ಸೇರಲಿದೆ ಎಂದು ವಾಯುಪಡೆಯ ಹಿರಿಯ ಅಧಿಕಾರಿ ಹೇಳಿದ್ದಾರೆ

ತಕ್ಷಣಕ್ಕೆ ಪಾಕ್ ಮೇಲೆ ಆಕ್ರಮಣ ಇಲ್ಲ, ಒಂದಲ್ಲಾ ಒಂದು ದಿನ ಇಡೀ ಕಾಶ್ಮೀರ ಭಾರತಕ್ಕೆ ಸೇರಲಿದೆ: ವಾಯುಪಡೆ ಹಿರಿಯ ಅಧಿಕಾರಿ
ಪಶ್ಚಿಮ ಏರ್ ಕಮಾಂಡ್​ನ ಕಮಾಂಡರ್ ಏರ್ ಮಾರ್ಷಲ್ ಅಮಿತ್ ದೇವ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 27, 2021 | 7:39 PM

ಶ್ರೀನಗರ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (Pakistan-occupied Kashmir – PoK) ಮೇಲೆ ದಾಳಿ ನಡೆಸುವ ಉದ್ದೇಶ ಭಾರತಕ್ಕೆ ಇಲ್ಲ. ಆದರೆ ಒಂದಲ್ಲ ಒಂದು ದಿನ ಕಾಶ್ಮೀರವು ಸಂಪೂರ್ಣವಾಗಿ ಭಾರತದ ಸುಪರ್ದಿಗೆ ಸೇರಲಿದೆ ಎಂದು ವಾಯುಪಡೆಯ ಹಿರಿಯ ಅಧಿಕಾರಿ ಹೇಳಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಈಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಯು ಮಹತ್ವ ಪಡೆದಿದೆ.

ಕಾಶ್ಮೀರ ಕಣಿವೆಯ ಇತಿಹಾಸದಲ್ಲಿ ಮಹತ್ವ ಪಡೆದಿರುವ ಬುದ್​ಗಮ್​ಗೆ ಸೇನೆಯ ಪ್ರವೇಶದ 75ನೇ ವರ್ಷಾಚರಣೆ ಸಮಾರಂಭದಲ್ಲಿ ಮಾತನಾಡಿದ ಪಶ್ಚಿಮ ಏರ್​ ಕಮಾಂಡ್​ನ ಏರ್​ ಆಫೀಸರ್​ ಕಮಾಂಡಿಂಗ್ ಇನ್ ಚೀಫ್ (AOC-in-C) ಏರ್​ ಮಾರ್ಷಲ್ ಅಮಿತ್ ದೇವ್, ಪಾಕಿಸ್ತಾನಿಯರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ನಾಗರಿಕರನ್ನು ನ್ಯಾಯ ಸಮ್ಮತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಹೇಳಿದರು.

27ನೇ ಅಕ್ಟೋಬರ್ 1947ರಂದು ಭಾರತೀಯ ವಾಯುಪಡೆ ಮತ್ತು ಸೇನೆ ನಡೆಸಿದ ಕಾರ್ಯಾಚರಣೆಗಳಿಂದ ಕಾಶ್ಮೀರದ ಈ ಭಾಗದಲ್ಲಿ ಶಾಂತಿ ನೆಲೆಸಿತು. ನನಗೆ ಖಾತ್ರಿಯಿದೆ ಮುಂದಿನ ಕೆಲವರ್ಷಗಳಲ್ಲಿ ಕಾಶ್ಮೀರ ಒಂದಾಗಲಿದೆ ಎಂದು ನುಡಿದರು. ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸುವ ಯಾವುದಾದರೂ ಪ್ರಸ್ತಾವ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ತಕ್ಷಣಕ್ಕೆ ಅಂಥ ಯಾವುದೇ ಯೋಜನೆ ರೂಪುಗೊಂಡಿಲ್ಲ ಎಂದಷ್ಟೇ ಪ್ರತಿಕ್ರಿಯಿಸಿದರು.

ಕಾಶ್ಮೀರ ಎನ್ನುವುದು ಸದಾ ಒಂದೇ ಆಗಿತ್ತು. ದೇಶವೂ ಸದಾ ಒಂದು. ಗಡಿಯ ಎರಡೂ ಭಾಗದಲ್ಲಿರುವ ಜನರು ಸಮಾನ ಭಾವನೆಗಳನ್ನು ಹೊಂದಿದ್ದಾರೆ. ಇಂದಲ್ಲದಿದ್ದರೆ ನಾಳೆ ಎರಡೂ ದೇಶಗಳು ಹತ್ತಿರವಾಗಲಿವೆ. ಇತಿಹಾಸ ಇದಕ್ಕೆ ಸಾಕ್ಷಿಯಾಗಲಿದೆ. ತಕ್ಷಣಕ್ಕೆ ಈ ಬಗ್ಗೆ ನಾವು ಯಾವುದೇ ಯೋಜನೆ ರೂಪಿಸಿಲ್ಲ. ಆದರೆ ದೇವರ ಚಿತ್ತಕ್ಕೆ ಬಂದಂತೆ ಆಗುತ್ತದೆ. ಯಾಕೆಂದರೆ ಪಾಕಿಸ್ತಾನೀಯರು ತಮ್ಮ ಅಧೀನದಲ್ಲಿರುವ ಕಾಶ್ಮೀರಿಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಹೇಳಿದರು.

ತಂತ್ರಜ್ಞಾನವು ಈಗ ವೇಗವಾಗಿ ಬದಲಾಗುತ್ತಿದೆ. ಬದಲಾವಣೆಯ ವೇಗಕ್ಕೆ ಹೊಂದಿಕೊಳ್ಳುವುದೇ ನಮ್ಮೆದುರಿನ ದೊಡ್ಡ ಸವಾಲು ಎಂದು ವಾಯುಪಡೆಯ ಕಮಾಂಡರ್ ಹೇಳಿದರು. ಆರ್ಥಿಕವಾಗಿ ಬೆಳೆಯಬೇಕು ಎನ್ನುವ ಆಸೆ ಹೊಂದಿರುವ ಯಾವುದೇ ದೇಶಕ್ಕೆ ಬಲಿಷ್ಠ ಮಿಲಿಟರಿ ಅಗತ್ಯ. ನಮ್ಮ ದೇಶವು ನಮಗೆ ವಹಿಸಿರುವ ಜವಾಬ್ದಾರಿಗಳನ್ನು ಮುಂದಿನ ದಿನಗಳಲ್ಲಿ ನಾವು ಸಂಪೂರ್ಣವಾಗಿ ನಿರ್ವಹಿಸಬೇಕು. ಎಂಥದ್ದೇ ಸವಾಲು ಎದುರಿಸಲು ವಾಯುಪಡೆ ಸನ್ನದ್ಧವಾಗಿದೆ ಎಂದರು.

ಈಚೆಗೆ ನಡೆಯುತ್ತಿರುವ ಡ್ರೋಣ್ ದಾಳಿಗಳ ಕುರಿತು ಪ್ರತಿಕ್ರಿಯಿಸಿದ ಅವರು, ಅದನ್ನು ಎದುರಿಸಲು ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಕೊಂಡಿದ್ದೇವೆ. ಡ್ರೋಣ್ ದಾಳಿಗಳಿಂದ ಹೆಚ್ಚಿನ ಹಾನಿ ಮಾಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ಸಮರ್ಥವಾಗಿ ನಿರ್ವಹಿಸುತ್ತೇವೆ ಎಂದರು. ಕಾಶ್ಮೀರದ ಮಹಾರಾಜ ಹರಿ ಸಿಂಗ್​ ಭಾರತದೊಂದಿಗೆ ವಿಲೀನವಾಗುವ ದಾಖಲೆಗೆ ಸಹಿ ಹಾಕಿದ ನಂತರ ಭಾರತೀಯ ಸೇನೆ ತುಕಡಿಗಳು ಪಾಕ್ ಬುಡಕಟ್ಟು ದಾಳಿಕೋರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದವು. ಈ ಮಹತ್ವದ ದಿನದ ನೆನಪಿಗಾಗಿ ಬುದ್​ಗಮ್ ದಿನವನ್ನು ದೇಶ ನೆನೆಯುತ್ತದೆ.

ಇದನ್ನೂ ಓದಿ: ಪಾಕ್ ವಿರುದ್ಧ ಭಾರತ ಪಂದ್ಯ ಸೋತ ಹಿನ್ನೆಲೆ; ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಪಂಜಾಬ್​ನಲ್ಲಿ ಹಲ್ಲೆ ಇದನ್ನೂ ಓದಿ: ‘ಜಮ್ಮು-ಕಾಶ್ಮೀರದ ಅಭಿವೃದ್ಧಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ’-ಬಹಿರಂಗ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ