ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡುವುದಿಲ್ಲ: ಭಾರತ ವಿದೇಶಾಂಗ ಸಚಿವಾಲಯ

ಭಾರತ ಮತ್ತು ಪಾಕ್ ನಡುವೆ ಕದನ ವಿರಾಮ ಘೋಷಣೆ ನಂತರ ಅನೇಕ ಬೆಳವಣಿಗೆ ನಡೆದಿದೆ. ಆದರೆ ಈ ಹಿಂದೆ ತಗೆದುಕೊಂಡಿದ 5 ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದರಲ್ಲಿ ಸಿಂಧೂ ಜಲ ಒಪ್ಪಂದ ರದ್ದು, ಅದನ್ನು ಕಾಯ್ದುಕೊಂಡಿದೆ. ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಪಾಕಿಸ್ತಾನದಿಂದ ಈ ಕರೆ ಬಂದಿದೆ. ಸಿಂಧೂ ಜಲ ಒಪ್ಪಂದವು ಅಮಾನತಿನಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿದೆ.

ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡುವುದಿಲ್ಲ: ಭಾರತ ವಿದೇಶಾಂಗ ಸಚಿವಾಲಯ
ಸಿಂಧೂ ನದಿ
Edited By:

Updated on: May 10, 2025 | 7:16 PM

ಭಾರತ ಮತ್ತು ಪಾಕಿಸ್ತಾನ (india-Pakista) ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆಯನ್ನು ಮಾಡಿದೆ. ಈ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಜೈಶಂಕರ್​​ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ ಈಗಾಗಲೇ ಸಿಂಧೂ ನದಿ ಪಾಕ್​​ಗೆ ಹೋಗದಂತೆ (Indus water) ಬಂದ್​​​ ಮಾಡಲಾಗಿದೆ. ಅದನ್ನು ಯಾವುದೇ ಕಾರಣಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಪಾಕಿಸ್ತಾನದಿಂದ ಈ ಕರೆ ಬಂದಿದೆ. ಸಿಂಧೂ ಜಲ ಒಪ್ಪಂದವು ಅಮಾನತಿನಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿದೆ. ಒಂದು ಹಂತದಲ್ಲಿ ಭಾರತ ಯಾವುದೇ ಮಿಲಿಟರಿ ದಾಳಿಗಳನ್ನು ನಡೆಸುವುದಿಲ್ಲ. ಆದರೆ ಪಂಚ ನಿರ್ಧಾರಗಳನ್ನು ಕಾಯ್ದುಕೊಂಡಿದೆ.

ಭಾರತೀಯ ಸಮಯ 5 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿನ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಎರಡೂ ಕಡೆಯವರು ನಿಲ್ಲಿಸುವುದಾಗಿ ಮಿಶ್ರಿ ಖಚಿತಪಡಿಸಿದ್ದಾರೆ.ಪಾಕಿಸ್ತಾನದ ಡಿಜಿಎಂಒ ಇಂದು ಮಧ್ಯಾಹ್ನ 3:35ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದರು. ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿನ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಎರಡೂ ಕಡೆಯವರು ನಿಲ್ಲಿಸುವುದಾಗಿ ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು. ಈ ನಿಯಮವನ್ನು ಜಾರಿಗೆ ತರಲು ಎರಡೂ ಕಡೆಯಿಂದಲೂ ಸೂಚನೆಗಳನ್ನು ನೀಡಲಾಗಿದೆ. ಎರಡೂ ದೇಶಗಳ ನಡುವೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಯಲಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಪಾಕ್ ಕದನ ವಿರಾಮ ಘೋಷಣೆ: ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ, ನಮ್ಮ ನಿಲುವು ಸ್ಪಷ್ಟ: ಜೈಶಂಕರ್

ಇನ್ನೂ ಸಿಂಧೂ ನದಿಯ ನೀರನ್ನು ಭಾರತ ಯಾವುದೇ ಕಾರಣಕ್ಕೆ ಬಿಡುವುದಿಲ್ಲ ಎಂದು ಹೇಳಿದೆ. ಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ಐದು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಇದೀಗ ಕದನ ವಿರಾಮ ಘೋಷಣೆ ನಂತರ ಎಲ್ಲ ಮುಕ್ತವಾಗುವುದಿಲ್ಲ. ಹಾಗಾಗಿ ಈ ಐದು ನಿರ್ಧಾರಗಳು ಸ್ಥಿರವಾಗಿರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 19, 1960 ರಂದು ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ), ಗಡಿಯಾಚೆಗಿನ ನೀರು ಹಂಚಿಕೆಗೆ ಒಂದು ಪ್ರಮುಖ ಉದಾಹರಣೆ ಎಂದೇ ಹೇಳಬಹುದು. ಒಂಬತ್ತು ವರ್ಷಗಳ ಮಾತುಕತೆಗಳ ನಂತರ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯೂಬ್ ಖಾನ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆ ಒಪ್ಪಂದವನ್ನು ಮುರಿತ್ತು. ಇದೀಗ ಅದನ್ನು ಮುಂದುವರಿಸುತ್ತೇವೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Sat, 10 May 25