ಭಾರತದಲ್ಲಿ ಕೊವಿಡ್ ಸೋಂಕು ಎಂಡೆಮಿಕ್ ಹಂತವನ್ನು ತಲುಪಲಿದೆ; ತಜ್ಞರ ಅಭಿಪ್ರಾಯವೇನು? ಇಲ್ಲಿದೆ ವಿವರ

Corona Virus: ಆರೋಗ್ಯ ಸೇವೆಗಳನ್ನು ಸುಲಭವಾಗಿ ನೀಡಬಹುದಾದ ಮಟ್ಟಿಗೆ ಕೊರೊನಾ ಬಾಧೆ ಕುಗ್ಗಲಿದೆ ಎಂದು ತಿಳಿಸಿದ್ದಾರೆ. ಕೇರಳದಲ್ಲಿ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿವೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕೊವಿಡ್ ಸೋಂಕು ಎಂಡೆಮಿಕ್ ಹಂತವನ್ನು ತಲುಪಲಿದೆ; ತಜ್ಞರ ಅಭಿಪ್ರಾಯವೇನು? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Sep 15, 2021 | 7:50 PM

ದೆಹಲಿ: ಕೊರೊನಾ ಸೋಂಕು ಭಾರತದಲ್ಲಿ ಮುಂದಿನ ಆರು ತಿಂಗಳಿನಲ್ಲಿ ಎಂಡೆಮಿಕ್ ಹಂತವನ್ನು ತಲುಪಲಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದರೆ, ಕೊವಿಡ್19 ಹೊಸ ರೂಪಾಂತರಿಗಳು ಕೊರೊನಾ ಮೂರನೇ ಅಲೆಯನ್ನು ತರಲಾರವು ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಸುಜೀತ್ ಸಿಂಗ್ ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕೊವಿಡ್ ಸೋಂಕು ಎಂಡೆಮಿಕ್ ಹಂತ ತಲುಪುತ್ತಿದೆ. ಅಂದರೆ, ಕೊರೊನಾ ಸೋಂಕನ್ನು ಇನ್ನು ಹೆಚ್ಚು ಉತ್ತಮವಾಗಿ ನಿರ್ವಹಿಸಬಹುದು. ಆರೋಗ್ಯ ಸೇವೆಗಳನ್ನು ಸುಲಭವಾಗಿ ನೀಡಬಹುದಾದ ಮಟ್ಟಿಗೆ ಕೊರೊನಾ ಬಾಧೆ ಕುಗ್ಗಲಿದೆ ಎಂದು ತಿಳಿಸಿದ್ದಾರೆ. ಕೇರಳದಲ್ಲಿ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿವೆ ಎಂದು ಅವರು ಹೇಳಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ ಆಗಲಿದೆ.

ಕೊವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಮುಖ್ಯ ಅಸ್ತ್ರವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಭಾರತದಲ್ಲಿ ಸುಮಾರು 75 ಕೋಟಿ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆಯ ಪರಿಣಾಮಕಾರಿತ್ವ ಶೇಕಡಾ 70 ಆದರೆ, ಭಾರತದಲ್ಲಿ ಸುಮಾರು 50 ಕೋಟಿ ಮಂದಿ ರೋಗನಿರೋಧಕ ಶಕ್ತಿ ಪಡೆದಂತೆ ಎಂದು ಅವರು ತಿಳಿಸಿದ್ದಾರೆ.

ಕೊವಿಡ್ ಲಸಿಕೆಯ ಸಿಂಗಲ್ ಡೋಸ್ 30 ರಿಂದ 31 ಶೇಕಡಾ ರೋಗನಿರೋಧಕ ಶಕ್ತಿ ನೀಡುತ್ತದೆ. ಹಾಗಾಗಿ, ಲಸಿಕೆಯ ಮೊದಲ ಡೋಸ್ ಪಡೆದಿರುವ 30 ಕೋಟಿ ಮಂದಿ ಕೂಡ ರೋಗನಿರೋಧಕ ಶಕ್ತಿ ಪಡೆದುಕೊಂಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಆದರೆ, ಲಸಿಕೆ ಪಡೆದ ಬಳಿಕವೂ ಜನರು ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. ಒಮ್ಮೆ ಸೋಂಕಿಗೆ ಒಳಗಾದವರಿಗೆ ಅಥವಾ ಲಸಿಕೆ ಪಡೆದವರೂ ಕೊರೊನಾಗೆ ತುತ್ತಾಗುವ ಸಾಧ್ಯತೆಯ ಪ್ರಮಾಣ 20 ರಿಂದ 30 ಶೇಕಡಾ ಇದೆ ಎಂದು ಡಾ. ಸಿಂಗ್ ತಿಳಿಸಿದ್ದಾರೆ.

ಹೊಸ ಅಥವಾ ರೂಪಾಂತರಿ ಕೊರೊನಾ ವೈರಾಣುಗಳಿಂದ ಕೊವಿಡ್​ಗೆ ಮರಳಿ ತುತ್ತಾಗುವ ಸಾಧ್ಯತೆ ಇರುತ್ತದೆ ಎಂದು ಅವರು ವಿವರಿಸಿದ್ದಾರೆ. ಅಷ್ಟೇ ಅಲ್ಲದೆ, ಲಸಿಕೆಯ ರೋಗನಿರೋಧಕ ಶಕ್ತಿ ಲಸಿಕೆ ಪಡೆದ 70 ರಿಂದ 100 ದಿನಗಳ ಅವಧಿಯ ನಂತರ ಕುಂಠಿತವಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಸುಜೀತ್ ಸಿಂಗ್ ಪ್ರಕಾರ ಭಾರತದಲ್ಲಿ ಯಾವುದೇ ಹೊಸ ರೂಪಾಂತರಿ ಕೊರೊನಾ ವೈರಾಣು ಕಂಡುಬಂದಿಲ್ಲ. ಸದ್ಯ ಜಗತ್ತಿನಲ್ಲಿ ಕೊಂಚ ಆತಂಕ ಸೃಷ್ಟಿಸಿರುವ C1.2 ಮತ್ತು Mu ಕೊರೊನಾ ವೈರಾಣುಗಳು ಭಾರತದಲ್ಲಿ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹೊಸ ಕೊರೊನಾ ರೂಪಾಂತರಿ ಒಂದೇ ಮೂರನೇ ಅಲೆ ಸೃಷ್ಟಿಸಲು ಸಾಧ್ಯವಿಲ್ಲ. ಆದರೆ, ಹಬ್ಬಗಳ ಸೀಸನ್ ಇರುವುದರಿಂದ ಸ್ವಲ್ಪ ಎಚ್ಚರಿಕೆಯೂ ಅಗತ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಕೊರೊನಾ ಇನ್ನು ಸ್ಥಳೀಯ ಜಾಡ್ಯ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್

ಇದನ್ನೂ ಓದಿ: ಕೊರೊನಾ ಸಂಕಷ್ಟ ಮುಗಿಯುತ್ತಿದ್ದಂತೆ ಕೊರೊನಾ ವಾರಿಯರ್ಸ್ಗೆ ಕರ್ತವ್ಯದಿಂದ ಮುಕ್ತಿಗೊಳಿಸಲು ಮುಂದಾದ ಆರೋಗ್ಯ ಇಲಾಖೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್