ದೇಶದಲ್ಲಿ ಮತ್ತೆ ಕೊರೊನಾತಂಕ: ನಿನ್ನೆಗಿಂತಲೂ ಇಂದು ಹೆಚ್ಚು ಕೇಸ್​ಗಳು ದಾಖಲು..ಸಾವಿನ ಸಂಖ್ಯೆಯಲ್ಲೂ ಏರಿಕೆ

24 ಗಂಟೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರುವಲ್ಲಿ ಮುಖ್ಯವಾಗಿ ಮಹಾರಾಷ್ಟ್ರ, ಕೇರಳ, ಪಂಜಾಬ್​, ಕರ್ನಾಟಕ, ಗುಜರಾತ್​ ರಾಜ್ಯಗಳ ಪಾಲು ಜಾಸ್ತಿ ಇದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಮತ್ತೆ ಕೈ ಮೀರುತ್ತಿದ್ದು, ಈಗಾಗಲೇ ಹಲವು ನಗರಗಳಲ್ಲ ಲಾಕ್​ಡೌನ್​ ಹೇರಲಾಗಿದೆ.

ದೇಶದಲ್ಲಿ ಮತ್ತೆ ಕೊರೊನಾತಂಕ: ನಿನ್ನೆಗಿಂತಲೂ ಇಂದು ಹೆಚ್ಚು ಕೇಸ್​ಗಳು ದಾಖಲು..ಸಾವಿನ ಸಂಖ್ಯೆಯಲ್ಲೂ ಏರಿಕೆ
ಕೊರೊನಾ ಟೆಸ್ಟ್​
Follow us
Lakshmi Hegde
|

Updated on:Mar 14, 2021 | 2:20 PM

ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕಳೆದ 24 ಗಂಟೆಯಲ್ಲಿ 25,320 ಹೊಸ ಕೇಸ್​​ಗಳು ಪತ್ತೆಯಾಗಿದ್ದು, ನಿನ್ನೆ (ಶನಿವಾರ)ಗೆ ಹೋಲಿಸಿದರೆ ಇಂದು ಸುಮಾರು 500ರಷ್ಟು ಹೆಚ್ಚಾಗಿದೆ. ನಿನ್ನೆ ಒಟ್ಟು 24,882ಕೇಸ್​ಗಳು ದಾಖಲಾಗಿದ್ದವು. ಈ ವರ್ಷದಲ್ಲೇ ಇದು ಹೆಚ್ಚು ಎಂದು ಆರೋಗ್ಯ ಇಲಾಖೆ ಹೇಳಿತ್ತು. ಆದರೆ ಇಂದು ನಿನ್ನೆಗಿಂತಲೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಕಳೆದ ಮೂರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಒಂದು ದಿನದಲ್ಲಿ ಇಷ್ಟು 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇಂದು ಪತ್ತೆಯಾದಂತಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,13,59,048ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಯಲ್ಲಿ 161 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,58,607ಕ್ಕೆ ಏರಿಕೆಯಾಗಿದೆ. ಕಳೆದ 44 ದಿನಗಳಲ್ಲಿ ಒಂದು ದಿನದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇಂದೇ ಹೆಚ್ಚು ಎಂದೂ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 2,10,544ಕ್ಕೆ ತಲುಪಿದ್ದು, ಚೇತರಿಕೆಯ ಪ್ರಮಾಣ ಶೇ.96.7 ಇದೆ. 2021ರ ಡಿಸೆಂಬರ್​ 20ರಂದು 26,624 ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಅದಾದ ಮೇಲೆ ಇಳಿಕೆಯಾಗುತ್ತ ಬಂದಿತ್ತು. ಆದರೆ ಇಂದು ಮತ್ತೆ 25ಸಾವಿರಕ್ಕೂ ಹೆಚ್ಚು ಕೊವಿಡ್​ ಸೋಂಕಿತರು ಪತ್ತೆಯಾಗಿದ್ದಾರೆ.

24 ಗಂಟೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರುವಲ್ಲಿ ಮುಖ್ಯವಾಗಿ ಮಹಾರಾಷ್ಟ್ರ, ಕೇರಳ, ಪಂಜಾಬ್​, ಕರ್ನಾಟಕ, ಗುಜರಾತ್​ ರಾಜ್ಯಗಳ ಪಾಲು ಜಾಸ್ತಿ ಇದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಮತ್ತೆ ಕೈ ಮೀರುತ್ತಿದ್ದು, ಈಗಾಗಲೇ ಹಲವು ನಗರಗಳಲ್ಲ ಲಾಕ್​ಡೌನ್​ ಹೇರಲಾಗಿದೆ. ನೈಟ್​ ಕರ್ಫ್ಯೂ ಕೂಡ ಜಾರಿ ಮಾಡಲಾಗಿದೆ. ಇನ್ನೂ ಕೆಲವು ರಾಜ್ಯಗಳು ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಿಧಿಸಲು ಮುಂದಾಗುತ್ತಿವೆ.

ಇದನ್ನೂ ಓದಿ: ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ.. ಕೊರೊನಾ ತಡೆಯಲು ಜನರ ಸಹಕಾರ ಬೇಕು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೊರೊನಾ​ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳು; ಕೊವಿಡ್​-19 ತಾಂತ್ರಿಕ ಸಲಹಾ ಸಮಿತಿಯಿಂದ ಅಧಿಕಾರಿಗಳಿಗೆ ಹೊಸ ಸುತ್ತೋಲೆ

Published On - 2:18 pm, Sun, 14 March 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ