ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

|

Updated on: Oct 01, 2023 | 11:23 AM

ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​​ ತುರ್ತು ಭೂಸ್ಪರ್ಶಿಸಿದೆ. ಭಾರತೀಯ ವಾಯುಪಡೆಯ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಭಾನುವಾರ ಮಧ್ಯಪ್ರದೇಶದ ಭೋಪಾಲ್ ಬಳಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಲು ತಜ್ಞರ ತಂಡವು ದಾರಿಯಲ್ಲಿದೆ.

ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ
ಹೆಲಿಕಾಪ್ಟರ್
Image Credit source: IndiaToday
Follow us on

ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​​ ತುರ್ತು ಭೂಸ್ಪರ್ಶಿಸಿದೆ. ಭಾರತೀಯ ವಾಯುಪಡೆಯ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಭಾನುವಾರ ಮಧ್ಯಪ್ರದೇಶದ ಭೋಪಾಲ್ ಬಳಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಲು ತಜ್ಞರ ತಂಡವು ದಾರಿಯಲ್ಲಿದೆ. ಹೆಲಿಕಾಪ್ಟರ್‌ನಲ್ಲಿ ಆರು ಸೇನಾ ಸಿಬ್ಬಂದಿ ಇದ್ದರು.
ಭೋಪಾಲ್‌ನಿಂದ 60 ಕಿಮೀ ದೂರದಲ್ಲಿರುವ ಬೆರಾಸಿಯಾದ ಹಳ್ಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ