AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ 1,200ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿತ್ತು. ಇಂದು ಭಾರತೀಯ ವಿಮಾನಯಾನ ಸಂಸ್ಥೆಗಳು ಗಲ್ಫ್ ಪ್ರದೇಶಕ್ಕೆ 58 ವಿಮಾನಗಳನ್ನು ಹಾರಾಟ ನಡೆಸಲು ಯೋಜಿಸಿವೆ. ಯುಎಸ್, ಇಸ್ರೇಲ್ ಮತ್ತು ಇರಾನ್ ಒಳಗೊಂಡ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟು ಈ ಪ್ರದೇಶದಲ್ಲಿ ಕೆಲವು ವಾಯುಪ್ರದೇಶಗಳನ್ನು ಮುಚ್ಚಿರುವುದರಿಂದ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ.

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು
Flight
ಸುಷ್ಮಾ ಚಕ್ರೆ
|

Updated on: Mar 04, 2026 | 11:06 AM

Share

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ.

“ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ, ವಿಮಾನಯಾನ ಸಂಸ್ಥೆಗಳು ಅಗತ್ಯವಿರುವ ಕಡೆ ಹೆಚ್ಚುವರಿ ವಿಮಾನಗಳನ್ನು ನಿಯೋಜಿಸುತ್ತಿವೆ. ಈ ಅವಧಿಯಲ್ಲಿ ಟಿಕೆಟ್ ಬೆಲೆಗಳಲ್ಲಿ ಅನಗತ್ಯ ಏರಿಕೆಯಾಗದಂತೆ ನೋಡಿಕೊಳ್ಳಲು ವಿಮಾನ ದರಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ

ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದು ಇಂಡಿಗೋದಿಂದ 30 ಮತ್ತು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ 23 ಸೇರಿದಂತೆ 58 ವಿಮಾನಗಳನ್ನು ಗಲ್ಫ್ ರಾಷ್ಟ್ರಗಳಿಗೆ ಕಳುಹಿಸುತ್ತಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ ಸಿಲುಕಿರುವ ಭಾರತೀಯ ಪ್ರಯಾಣಿಕರನ್ನು ಮರಳಿ ಕರೆತರಲು ಸ್ಪೈಸ್‌ಜೆಟ್ ಇಂದು ಯುಎಇಯಿಂದ 8 ವಿಶೇಷ ವಿಮಾನಗಳನ್ನು ನಿರ್ವಹಿಸಲಿದೆ. ಇದರಲ್ಲಿ 4 ದೆಹಲಿಗೆ, 3 ಮುಂಬೈಗೆ ಮತ್ತು 1 ಕೊಚ್ಚಿಗೆ ಸೇರಿವೆ.

ಇದನ್ನೂ ಓದಿ: ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಇಲ್ಲಿಯವರೆಗೆ, ಭಾರತೀಯ ವಿಮಾನಯಾನ ಸಂಸ್ಥೆಗಳ 1,221 ವಿಮಾನಗಳು ಮತ್ತು ವಿದೇಶಿ ವಿಮಾನಯಾನ ಸಂಸ್ಥೆಗಳ 388 ವಿಮಾನಗಳು ರದ್ದಾಗಿವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಫೆಬ್ರವರಿ 28ರಿಂದ ಸಚಿವಾಲಯ ಒದಗಿಸಿದ ಅಂಕಿ-ಅಂಶಗಳ ಪ್ರಕಾರ ಮಂಗಳವಾರ ಭಾರತೀಯ ವಿಮಾನಯಾನ ಸಂಸ್ಥೆಗಳು 104 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ