ಭಾರತೀಯ ಸೇನೆ ಪಿಎಂ ಮೋದಿಯ ಪಾದಗಳಿಗೆ ನಮಸ್ಕರಿಸಿತು; ಮಧ್ಯಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ
ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ಜಬಲ್ಪುರದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ಬಗ್ಗೆ ನೀಡಿದ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಮಧ್ಯಪ್ರದೇಶದ ಸಚಿವ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನಂತರ, ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. "ಭಾರತೀಯ ಸೇನೆ ಮತ್ತು ಸೈನಿಕರು ಸೇರಿದಂತೆ ಇಡೀ ರಾಷ್ಟ್ರವು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳಿಗೆ ನಮಸ್ಕರಿಸುತ್ತಿದೆ" ಎಂದು ದೇವ್ಡಾ ಹೇಳಿದ್ದಾರೆ.

ನವದೆಹಲಿ, ಮೇ 16: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ (Pahalgam Terror Attack) ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸುವ ಭರದಲ್ಲಿ ಮಧ್ಯಪ್ರದೇಶದ ಡಿಸಿಎಂ ಜಗದೀಶ್ ದೇವ್ಡಾ (Jagdish Devda) ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಭಯೋತ್ಪಾದನೆಯ ವಿರುದ್ಧ ಮೋದಿಯವರ ಬಲವಾದ ನಿಲುವಿಗಾಗಿ ದೇಶ ಮಾತ್ರವಲ್ಲ, ಇಡೀ ಸೇನೆಯೂ ಮೋದಿ ಅವರ ಪಾದಗಳಿಗೆ ನಮಸ್ಕರಿಸುತ್ತಿದೆ” ಎಂದು ದೇವ್ಡಾ ಹೇಳಿದ್ದಾರೆ. ಪ್ರಧಾನ ಮಂತ್ರಿಯವರ ನಾಯಕತ್ವವನ್ನು ಶ್ಲಾಘಿಸುವಂತೆ ಪ್ರೇಕ್ಷಕರನ್ನು ಒತ್ತಾಯಿಸಿದ ಅವರು ಭಯೋತ್ಪಾದಕ ಗುಂಪುಗಳ ವಿರುದ್ಧ ಮೋದಿಯವರ (PM Narendra Modi) ನಿರ್ಣಾಯಕ ಕ್ರಮಗಳಿಗೆ ಎಷ್ಟೇ ಹೊಗಳಿದರೂ ಸಾಲದು. ಪ್ರಧಾನಿಯವರು ಪಾಕಿಸ್ತಾನ ಮೂಲದ ಉಗ್ರರ ವಿರುದ್ಧದ ಹೋರಾಟವನ್ನು ಮುನ್ನಡೆಸಿದ್ದಾರೆ ಎಂದಿದ್ದಾರೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಧರ್ಮದ ಆಧಾರದ ಮೇಲೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ದೇವ್ಡಾ ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ಕ್ರೌರ್ಯವನ್ನು ಜಗದೀಶ್ ದೇವ್ಡಾ ನೆನಪಿಸಿಕೊಂಡರು. ಭಯೋತ್ಪಾದಕರು ಉದ್ದೇಶಪೂರ್ವಕವಾಗಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ ಅವರು “ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಅವರ ಕುಟುಂಬಗಳ ಮುಂದೆ ಗುಂಡು ಹಾರಿಸುವ ಮೊದಲು ಅವರ ಧರ್ಮವನ್ನು ಕೇಳಿದರು. ಮಹಿಳೆಯರನ್ನು ಬೇರ್ಪಡಿಸಲಾಯಿತು. ಪುರುಷರನ್ನು ಅವರ ಮಕ್ಕಳು ಮತ್ತು ಸಂಬಂಧಿಕರ ಕಣ್ಣೆದುರೇ ಕೊಲ್ಲಲಾಯಿತು” ಎಂದು ಅವರು ಹೇಳಿದರು. ಅಂತಹ ದೌರ್ಜನ್ಯಗಳಿಗೆ ಉತ್ತರಿಸದೆ ಇರಲು ಸಾಧ್ಯವಿಲ್ಲ. ಪ್ರತಿಯೊಬ್ಬ ಉಗ್ರಗಾಮಿ ಮತ್ತು ಅವರ ಬೆಂಬಲಿಗರನ್ನು ನಿರ್ಮೂಲನೆ ಮಾಡುವವರೆಗೆ ದೇಶವು ವಿಶ್ರಾಂತಿ ಪಡೆಯುವುದಿಲ್ಲ ಎಂದು ದೇವ್ಡಾ ಪ್ರತಿಪಾದಿಸಿದರು.
ಇದನ್ನೂ ಓದಿ: ಕೇವಲ 23 ನಿಮಿಷದಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಸರ್ವನಾಶ; ಐಎಎಫ್ ಸಾಧನೆಗೆ ರಾಜನಾಥ್ ಸಿಂಗ್ ಶ್ಲಾಘನೆ
BREAKING NEWS 🚨
BJP Dy CM Jagdish Devda has crossed all the limits of shamelessness
He has insulted the Indian army 💔
“The Indian army bowed down at the feet of Narendra Modi ”
What should be done with such clown? pic.twitter.com/0hRDmI7dgj
— Amock_ (@Amockx2022) May 16, 2025
ಭಾರತೀಯ ಸೇನೆಯ ಬಗ್ಗೆ ಜಗದೀಶ್ ದೇವ್ಡಾ ಅವರ ಹೇಳಿಕೆಗಳು ವಿರೋಧ ಪಕ್ಷಗಳಿಂದ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಹೇಳಿಕೆಯನ್ನು “ಅತ್ಯಂತ ನಾಚಿಕೆಗೇಡಿನ ಮತ್ತು ದುರದೃಷ್ಟಕರ” ಎಂದು ಕರೆದಿದ್ದಾರೆ. ಮೊದಲು ಮಧ್ಯಪ್ರದೇಶದ ಸಚಿವರೊಬ್ಬರು ಮಹಿಳಾ ಸೈನಿಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಈಗ ಉಪಮುಖ್ಯಮಂತ್ರಿ ನಮ್ಮ ಸಶಸ್ತ್ರ ಪಡೆಗಳನ್ನು ಅವಮಾನಿಸಿದ್ದಾರೆ. ನಮ್ಮ ಸೈನಿಕರ ಶೌರ್ಯದ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ, ಆದರೆ ಬಿಜೆಪಿ ನಾಯಕರು ನಿರಂತರವಾಗಿ ಅವರನ್ನು ಅಗೌರವಿಸುತ್ತಿದ್ದಾರೆ. ಅಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಬಿಜೆಪಿ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ನಮ್ಮ ಸೈನಿಕರಿಗೆ ಮತ್ತು ಈ ದೇಶದ ಜನರಿಗೆ ಯಾವ ಸಂದೇಶವನ್ನು ಕಳುಹಿಸಲು ಪ್ರಯತ್ನಿಸುತ್ತಿದೆ?” ಎಂದು ಪ್ರಿಯಾಂಕಾ ವಾದ್ರಾ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಸಚಿವರು ಜವಾಬ್ದಾರಿಯಿಂದಿರಬೇಕು; ಸೋಫಿಯಾ ಖುರೇಷಿ ಕುರಿತ ವಿವಾದಾತ್ಮಕ ಹೇಳಿಕೆಗೆ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ
ಬುಧವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ, “ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ನಾವು ಅವರ ಸಹೋದರಿಯನ್ನು ಮುಂದಿಟ್ಟುಕೊಂಡು ತಕ್ಕ ತಿರುಗೇಟು ನೀಡಿದ್ದೇವೆ. ಅವರು ಹಿಂದೂಗಳನ್ನು ವಿವಸ್ತ್ರಗೊಳಿಸಿ ಕೊಂದರು. ಅವರಿಗೆ ಉತ್ತರ ನೀಡಲು ಮೋದಿ ಅವರ ಸಹೋದರಿಯನ್ನೇ ಕಳುಹಿಸಿದರು. ನಾವು ಪಾಕಿಸ್ತಾನದವರನ್ನು ವಿವಸ್ತ್ರಗೊಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಅವರ ಸಮುದಾಯದ ಮಗಳನ್ನು ಅವರ ಮೇಲಿನ ದಾಳಿಗೆ ಕಳುಹಿಸಿದ್ದೇವೆ. ನಿಮ್ಮದೇ ಸಮುದಾಯದ ಸಹೋದರಿ ನಿಮ್ಮನ್ನು ವಿವಸ್ತ್ರಗೊಳಿಸುತ್ತಾಳೆ. ನಿಮ್ಮ ಜಾತಿಯ ಹೆಣ್ಣುಮಕ್ಕಳನ್ನು ಸೇಡು ತೀರಿಸಿಕೊಳ್ಳಲು ಪಾಕಿಸ್ತಾನಕ್ಕೆ ಕಳುಹಿಸಬಹುದು ಎಂದು ಮೋದಿ ಸಾಬೀತುಪಡಿಸಿದ್ದಾರೆ” ಎಂದು ಹೇಳಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








