AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Helicopter Crash: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನ

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.

Army Helicopter Crash: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Mar 16, 2023 | 2:51 PM

Share

ಭಾರತೀಯ ಸೇನೆಯ (Indian Army) ಚೀತಾ ಹೆಲಿಕಾಪ್ಟರ್ (Cheetah helicopter) ಗುರುವಾರ ಅರುಣಾಚಲ ಪ್ರದೇಶದ (Arunachal Pradesh) ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ 09:15ರ ಸುಮಾರಿಗೆ ಅರುಣಾಚಲ ಪ್ರದೇಶದ ಬೊಮ್‌ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದ್ದು ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು  ಗುವಾಹಟಿ ಡಿಫೆನ್ಸ್ ಪಿಆರ್​​ಒ  ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಈ ದುರ್ಘಟನೆಯಲ್ಲಿ  ಒಬ್ಬ ಲೆಫ್ಟಿನೆಂಟ್ ಕರ್ನಲ್  ಮೇಜರ್  ಕಾಣೆಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ವಾಯುಪಡೆ  ಮತ್ತು ಸೇನೆಯಲ್ಲಿರುವ ಚೇತಕ್ ಮತ್ತು ಚೀತಾ ಹೆಲಿಕಾಪ್ಟರ್‌ಗಳು ಅತಿ ಎತ್ತರದ ಪ್ರದೇಶಗಳಲ್ಲಿ ಪಡೆಗಳ ಜೀವಸೆಲೆಯಾಗಿ ರೂಪುಗೊಂಡಿದ್ದರೂ ಸಹ, ಅವುಗಳಿಗೆ ಬದಲಿ ಅಗತ್ಯವಿದೆ. ಪ್ರಸ್ತುತ ಸುಮಾರು 200 ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳು ಸೇವೆಯಲ್ಲಿವೆ ಕಳೆದ ತಿಂಗಳು, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಸೇನೆಯು ತನ್ನ ಒಟ್ಟಾರೆ ಯುದ್ಧ ವಿಮಾನಯಾನ ಪ್ರೊಫೈಲ್ ಅನ್ನು ಹೆಚ್ಚಿಸುವ ಭಾಗವಾಗಿ ಭವಿಷ್ಯದಲ್ಲಿ ಸುಮಾರು 95 ಲಘು ಯುದ್ಧ ಹೆಲಿಕಾಪ್ಟರ್‌ಗಳು ಮತ್ತು 110 ಲೈಟ್ ಯುಟಿಲಿಟಿ ಹೆಲಿಕಾಪ್ಟರ್‌ಗಳ (LUH) ಸೇರ್ಪಡೆಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Thu, 16 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್