ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭಾರತೀಯ ಸೇನೆ
ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ಜಮ್ಮು-ಕಾಶ್ಮೀರದ ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಕುಪ್ವಾರ ಪೊಲೀಸರು ಮತ್ತು ಸೇನೆ ಜಂಟಿಯಾಗಿ ಕಾರ್ಯಚರಣೆ ನಡೆಸಿದೆ. ಕಾರ್ಯಚರಣೆ ವೇಳೆ ಒಳನುಸುಳಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಶ್ರೀನಗರ, ಸೆ.30: ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ಜಮ್ಮು-ಕಾಶ್ಮೀರದ (jammu and kashmir) ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಕುಪ್ವಾರ ಪೊಲೀಸರು ಮತ್ತು ಸೇನೆ ಜಂಟಿಯಾಗಿ ಕಾರ್ಯಚರಣೆ ನಡೆಸಿದ್ದಾರೆ. ಈ ಕಾರ್ಯಚರಣೆ ವೇಳೆ ಒಳನುಸುಳಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇದೀಗ ಈ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕುಪ್ವಾರ ಜಿಲ್ಲಾ ಪೊಲೀಸ್ ಇಲಾಖೆ Xನಲ್ಲಿ (ಹಿಂದಿನ ಟ್ವಿಟರ್) ತಿಳಿಸಿದೆ. ಇದರ ಜತೆಗೆ ಭದ್ರತಾ ಪಡೆಗಳು ಪಾಕಿಸ್ತಾನದ ಪಿಸ್ತೂಲ್ ಜೊತೆಗೆ ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಹಾಗೂ ಪಾಕಿಸ್ತಾನದ ಕರೆನ್ಸಿಯಲ್ಲಿ 2,100 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಇಲ್ಲಿಯವರೆಗೆ 02 ಅಕ್ಸ್, 4 ಎಕೆಮ್ಯಾಗ್‌ಗಳು, 90ನೇ ಶತಮಾನದ 01 ಪಾಕ್ ಪಿಸ್ತೂಲ್, 01 ಪೌಚ್ ಮತ್ತು 2100 ರೂ. ಪಾಕ್ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಟಿಟರ್ ಫೋಸ್ಟ್ ಇಲ್ಲಿದೆ
So far, 02 Aks, 4AKMags, 90rds, 01 Pak Pistol, 01 Pouch and Rs. 2100 Pak currency etc has been recovered from encounter site. Search continues. https://t.co/b8hLTv8a45
— DISTRICT POLICE KUPWARA. (@KupwaraCops) September 30, 2023
ಇನ್ನು ಈ ಮಧ್ಯೆ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರದ ಪೊಲೀಸರು ಪುಲ್ವಾಮಾದ ಗುಲ್ಶನ್‌ಪೋರಾ ಟ್ರಾಲ್‌ನ ನಾಗಬಾಲ್ ಅರಣ್ಯ ಪ್ರದೇಶದಲ್ಲಿ ಎರಡು ಭಯೋತ್ಪಾದಕರ ಅಡಗುತಾಣಗಳನ್ನು ಭೇದಿಸಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ನೆಲೆಸಿದರು ಎಂಬ ಪುರಾವೆಗಳು ಕೂಡ ಸಿಕ್ಕಿವೇ. ಇನ್ನು ಪ್ರದೇಶವನ್ನು ಸೇನೆ ಸುತ್ತುವರಿದಿದ್ದು, ಕಾರ್ಯಚರಣೆಯನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:43 pm, Sat, 30 September 23