ಆಪರೇಷನ್ ಸಿಂಧೂರ್: ವಾರ್ ರೂಂನಿಂದ ಪಾಕ್ ಮೇಲೆ ಕಣ್ಣಿಟ್ಟಿದ್ದ ಮೂರು ಸೇನಾ ಮುಖ್ಯಸ್ಥರು, ಫೋಟೋ ಬಿಡುಗಡೆ
ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದ್ದಾಗ, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಯುದ್ಧ ಕೋಣೆಯಲ್ಲಿ ಉಪಸ್ಥಿತರಿದ್ದರು.ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು.

ನವದೆಹಲಿ, ಮೇ 27: ಆಪರೇಷನ್ ಸಿಂಧೂರ್(Operation Sindoor) ನಡೆದು 20 ದಿನಗಳು ಕಳೆದಿವೆ. ಅದಕ್ಕೆ ಸಂಬಂಧಿಸಿದ ಚಿತ್ರಗಳು ಇನ್ನೂ ಬಿಡುಗಡೆಯಾಗುತ್ತಲೇ ಇವೆ. ಇಲ್ಲಿಯವರೆಗೆ ಈ ಕಾರ್ಯಾಚರಣೆಯ ಹಲವು ಚಿತ್ರಗಳು ದೇಶದ ಜನರಲ್ಲಿ ಮತ್ತಷ್ಟು ಉತ್ಸಾಹ ಮೂಡುವಂತೆ, ದೇಶದ ಮೇಲೆ ಹೆಮ್ಮೆ ಬರುವಂತೆ ಮಾಡಿವೆ. ವಾರ್ ರೂಂನಲ್ಲಿ ಮೂರು ಸೇನೆಗಳ ಮುಖ್ಯಸ್ಥರು ‘ಆಪರೇಷನ್ ಸಿಂಧೂರ್’ ಅನ್ನು ಒಟ್ಟಿಗೆ ವೀಕ್ಷಿಸುವುದನ್ನು ಕಾಣಬಹುದು.
ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದ್ದಾಗ, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಯುದ್ಧ ಕೋಣೆಯಲ್ಲಿ ಉಪಸ್ಥಿತರಿದ್ದರು.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಭಾರತೀಯ ಸೇನೆಯು ಮೇ 7 ರಂದು ಭಯೋತ್ಪಾದಕರ ವಿರುದ್ಧ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿತು.
ಪಹಲ್ಗಾಮ್ ದಾಳಿಯ ಮರುದಿನವೇ, ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತು. ಏಪ್ರಿಲ್ 23 ರಂದು ಎನ್‌ಐಎ ತಂಡವು ಈ ಭಯೋತ್ಪಾದಕ ದಾಳಿಯ ತನಿಖೆಯನ್ನು ಪ್ರಾರಂಭಿಸಿತ್ತು. ತನಿಖಾ ತಂಡವು ಬೈಸರನ್ ಕಣಿವೆಯನ್ನು ತಲುಪಿ ಅಪರಾಧದ ಸ್ಥಳವನ್ನು ಪರಿಶೀಲಿಸಿತು ಮತ್ತು ವಿಚಾರಣೆ ನಡೆಸಿತು.
ಮತ್ತಷ್ಟು ಓದಿ: ಪಹಲ್ಗಾಮ್ ದಾಳಿಗೆ ಒಂದು ತಿಂಗಳು, ಆಪರೇಷನ್ ಸಿಂಧೂರ್ನಿಂದ ಸರ್ವಪಕ್ಷ ಸಂಸದರ ನಿಯೋಗ ರಚನೆವರೆಗೆ ಇಲ್ಲಿದೆ ಮಾಹಿತಿ
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ಮತ್ತು ಪಾಕಿಸ್ತಾನದಲ್ಲಿರುವ ಅವರ ಕಮಾಂಡರ್ಗಳ ನಡುವಿನ ಸಂಪರ್ಕಗಳು ಸಂಬಂಧ ಹೊಂದಿವೆ ಎಂದು ವಿದೇಶಾಂಗ ಸಚಿವಾಲಯವು ಸಂಸದೀಯ ಸ್ಥಾಯಿ ಸಮಿತಿಗೆ ತಿಳಿಸಿದೆ.
ಹಲ್ಗಾಮ್ ಭಯೋತ್ಪಾದಕ ದಾಳಿಯ ಮರುದಿನವೇ, ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು. ಏಪ್ರಿಲ್ 23 ರಂದು ನಡೆದ ಈ ಸಭೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದದ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿತು. ಈ ಮಾಹಿತಿಯನ್ನು ಪಾಕಿಸ್ತಾನಕ್ಕೂ ನೀಡಲಾಗಿತ್ತು.
ಸಿಸಿಎಸ್ ಸಭೆಯಲ್ಲಿಯೇ ಭಾರತ ಮತ್ತೊಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿತ್ತು. ಅಟ್ಟಾರಿ ಗಡಿಯನ್ನು ಮುಚ್ಚುವುದಾಗಿ ಭಾರತದ ಕಡೆಯಿಂದ ಘೋಷಿಸಲಾಯಿತು. ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚುವುದಾಗಿ ಘೋಷಿಸಿದ ಭಾರತ, ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೀಸಾಗಳನ್ನು ರದ್ದುಗೊಳಿಸಿತು.
Indian Army releases booklet on #OperationSindoor — reveals Ops Room where top brass including Army Chief Gen Upendra Dwivedi, Navy Chief Admiral Dinesh K Tripathi & IAF Chief ACM AP Singh monitored the mission. Unprecedented transparency in military ops! Jai Hind 🇮🇳 pic.twitter.com/izluWnRFQ2
— Navika Kumar (@navikakumar) May 26, 2025
ಪಾಕ್ ರಾಯಭಾರಿಗಳಿಗೆ ಏಳು ದಿನಗಳಲ್ಲಿ ಭಾರತವನ್ನು ತೊರೆಯುವಂತೆ ಸುಚಿಸಲಾಗಿತ್ತು. ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿ ಅಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರನ್ನು ಮೇ 13 ರಂದು ಭಾರತವನ್ನು ತೊರೆಯುವಂತೆ ಕೇಳಿಕೊಂಡಿತು. ಮೇ 21 ರಂದು, ಪಹಲ್ಗಾಮ್ ದಾಳಿಯ ಒಂದು ತಿಂಗಳು ಪೂರ್ಣಗೊಳ್ಳುವ ಕೇವಲ ಒಂದು ದಿನ ಮೊದಲು, ಭಾರತವು ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ಕೇಳಿಕೊಂಡಿತ್ತು.
ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಸರ್ಕಾರ ಸೇನೆಗೆ ಸ್ವಾತಂತ್ರ್ಯ ನೀಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರೊಂದಿಗೆ ನಿರಂತರ ಸಭೆಗಳನ್ನು ನಡೆಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:03 am, Tue, 27 May 25








