AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​: ಕದನವಿರಾಮ ಉಲ್ಲಂಘಿಸಿದ ಪಾಕ್​ಗೆ ತಕ್ಕ ಉತ್ತರ ಕೊಟ್ಟ ಭಾರತೀಯ ಸೇನೆ

ಪೂಂಚ್​ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್​ ಸೈನಿಕರಿಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಟ್ಟಿದೆ, ಇದರ ಪರಿಣಾಮ ಹಲವು ಪಾಕ್ ಸೈನಿಕರು ಹತರಾಗಿದ್ದಾರೆ. ಭಾರತದ ಗಡಿಯಲ್ಲಿರುವ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ತನ್ನ ದುಷ್ಕೃತ್ಯಗಳನ್ನು ನಿಲ್ಲಿಸುತ್ತಿಲ್ಲ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಮೇಲೆ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿತು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದರು. ಭದ್ರತಾ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ.

ಪೂಂಚ್​: ಕದನವಿರಾಮ ಉಲ್ಲಂಘಿಸಿದ ಪಾಕ್​ಗೆ ತಕ್ಕ ಉತ್ತರ ಕೊಟ್ಟ ಭಾರತೀಯ ಸೇನೆ
ಭಾರತೀಯ ಸೇನೆ-ಸಾಂದರ್ಭಿಕ ಚಿತ್ರImage Credit source: Deccan Herald
ನಯನಾ ರಾಜೀವ್
|

Updated on: Feb 13, 2025 | 8:05 AM

Share

ಪೂಂಚ್​ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್​ ಸೈನಿಕರಿಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಟ್ಟಿದೆ, ಇದರ ಪರಿಣಾಮ ಹಲವು ಪಾಕ್ ಸೈನಿಕರು ಹತರಾಗಿದ್ದಾರೆ. ಭಾರತದ ಗಡಿಯಲ್ಲಿರುವ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ತನ್ನ ದುಷ್ಕೃತ್ಯಗಳನ್ನು ನಿಲ್ಲಿಸುತ್ತಿಲ್ಲ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಮೇಲೆ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿತು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದರು. ಭದ್ರತಾ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ.

ಪಾಕಿಸ್ತಾನದ ಕಡೆಯ ಸಾವುನೋವುಗಳ ಪ್ರಮಾಣ ತಕ್ಷಣಕ್ಕೆ ತಿಳಿದುಬಂದಿಲ್ಲ, ಆದರೆ ಶತ್ರು ಪಡೆಗಳು ಭಾರೀ ನಷ್ಟ ಅನುಭವಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತೀಯ ಸೇನೆಯು ಈ ಮಾಹಿತಿಯನ್ನು ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲ. ಜಮ್ಮು ಜಿಲ್ಲೆಯ ಅಖ್ನೂರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಶಂಕಿತ ಉಗ್ರರು ನಡೆಸಿದ ಐಇಡಿ ಸ್ಫೋಟದಲ್ಲಿ ಕ್ಯಾಪ್ಟನ್ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ ಒಂದು ದಿನದ ನಂತರ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 25, 2021 ರಂದು ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ನವೀಕರಿಸಿದ ನಂತರ ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘನೆಯ ಘಟನೆಗಳು ಬಹಳ ಕಡಿಮೆ ದಾಖಲಾಗಿವೆ.

ಮತ್ತಷ್ಟು ಓದಿ: ಜಮ್ಮು ಕಾಶ್ಮೀರದ ಅಖ್ನೂರ್‌ನಲ್ಲಿ ಐಇಡಿ ಸ್ಫೋಟ; ಇಬ್ಬರು ಸೈನಿಕರು ಸಾವು

ಪಾಕಿಸ್ತಾನಿ ಸೇನಾ ಅಧಿಕಾರಿಯೊಬ್ಬರು ತಮ್ಮ ಮೃತ ಸೈನಿಕರಿಗೆ ಗೌರವ ಸಲ್ಲಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಈ ವೀಡಿಯೊದಲ್ಲಿ ದಿನಾಂಕವನ್ನು ಉಲ್ಲೇಖಿಸಲಾಗಿಲ್ಲ. ಅಧಿಕಾರಿಗಳ ಪ್ರಕಾರ, ಕಳೆದ ವಾರದಿಂದ ಗಡಿಯುದ್ದಕ್ಕೂ ಶತ್ರುಗಳ ಚಟುವಟಿಕೆ ಹೆಚ್ಚಾಗಿದ್ದು, ಇದರಿಂದಾಗಿ ಎಲ್‌ಒಸಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಈ ವರ್ಷ ಇದು ಮೊದಲ ಕದನ ವಿರಾಮ ಉಲ್ಲಂಘನೆಯಾಗಿದ್ದು, ಐದು ದಿನಗಳಲ್ಲಿ ನಾಲ್ಕನೇ ಗಡಿಯಾಚೆಗಿನ ಘಟನೆಯಾಗಿದೆ.

ಫೆಬ್ರವರಿ 11ರಂದು ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಎಂದು ಭಾರತೀಯ ಸೇನೆ ತಿಳಿಸಿದೆ. ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ಬೇಲಿ ಗಸ್ತು ತಿರುಗುತ್ತಿದ್ದಾಗ ಐಇಡಿ ಸಾಧನ ಸ್ಫೋಟ ವರದಿಯಾಗಿದ್ದು, ಇದರ ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದಾರೆ.. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ 3.50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದಾಗ ಸೈನಿಕರು ಗಸ್ತು ತಿರುಗುತ್ತಿದ್ದ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ