AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹೆಣ್ಣುಮಕ್ಕಳು ಯುದ್ಧವಿಮಾನವನ್ನೂ ಹಾರಿಸುತ್ತಿದ್ದಾರೆ; ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಸಂದೇಶ

ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿ ಪಾಕಿಸ್ತಾನಕ್ಕೆ ನೀಡಿದ ಸಂದೇಶದಲ್ಲಿ ಶಿವಾಂಗಿ ಸಿಂಗ್ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. 2 ದಿನಗಳ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಆಗ ಅವರೊಂದಿಗೆ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಕೂಡ ಇದ್ದರು. ಇದೇ ಶಿವಾಂಗಿ ಸಿಂಗ್ ಅವರನ್ನು ಸೆರೆಹಿಡಿದಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪಾಕ್​ಗೆ ಸಂದೇಶ ರವಾನಿಸಿರುವ ಪ್ರಧಾನಿ ಮೋದಿ "ಇಂದು, ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.

ಭಾರತದ ಹೆಣ್ಣುಮಕ್ಕಳು ಯುದ್ಧವಿಮಾನವನ್ನೂ ಹಾರಿಸುತ್ತಿದ್ದಾರೆ; ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಸಂದೇಶ
Modi In Delhi
ಸುಷ್ಮಾ ಚಕ್ರೆ
|

Updated on: Oct 31, 2025 | 8:10 PM

Share

ನವದೆಹಲಿ, ಅಕ್ಟೋಬರ್ 31: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಅನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನಕ್ಕೆ ಬಲವಾದ ಸಂದೇಶದಲ್ಲಿ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಕೇವಲ 2 ದಿನಗಳ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಅವರ ಜೊತೆ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಇದ್ದರು.

“ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ” ಎಂದು ಅವರು ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನಕ್ಕೆ ನೀಡಿದ ಸಂದೇಶದಲ್ಲಿ ಹೇಳಿದ್ದಾರೆ. “ಎರಡು ದಿನಗಳ ಹಿಂದೆ ನಮ್ಮ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಅವರ ಜೊತೆಗಿದ್ದವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್. ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ. ಡ್ರೋನ್ ದೀದಿಗಳಾಗುವ ಮೂಲಕ ಆಧುನಿಕ ಕೃಷಿಯನ್ನು ಉತ್ತೇಜಿಸುತ್ತಿದ್ದಾರೆ. ಇಂದು, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಮಹಿಳಾ STEM ಪದವೀಧರರನ್ನು ಹೊಂದಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇಂದು, ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಾಯಕತ್ವದ ಪಾತ್ರಗಳನ್ನು ವಹಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: https://tv9kannada.com/national

ಈ ಸಂದರ್ಭದಲ್ಲಿ, ಮಹರ್ಷಿ ದಯಾನಂದ ಸರಸ್ವತಿಯವರ 200ನೇ ಜನ್ಮ ದಿನಾಚರಣೆ ಮತ್ತು ಆರ್ಯ ಸಮಾಜದ ಸಮಾಜ ಸೇವೆಯ 150ನೇ ವರ್ಷಾಚರಣೆಯನ್ನು ಗುರುತಿಸುವ ಸ್ಮರಣಾರ್ಥ ಪ್ರಧಾನಿ ಮೋದಿ ನಾಣ್ಯಗಳನ್ನು ಬಿಡುಗಡೆ ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ