
ನವದೆಹಲಿ, ಅಕ್ಟೋಬರ್ 31: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಅನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನಕ್ಕೆ ಬಲವಾದ ಸಂದೇಶದಲ್ಲಿ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಕೇವಲ 2 ದಿನಗಳ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಅವರ ಜೊತೆ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಇದ್ದರು.
“ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ” ಎಂದು ಅವರು ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನಕ್ಕೆ ನೀಡಿದ ಸಂದೇಶದಲ್ಲಿ ಹೇಳಿದ್ದಾರೆ. “ಎರಡು ದಿನಗಳ ಹಿಂದೆ ನಮ್ಮ ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಅವರ ಜೊತೆಗಿದ್ದವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್. ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ. ಡ್ರೋನ್ ದೀದಿಗಳಾಗುವ ಮೂಲಕ ಆಧುನಿಕ ಕೃಷಿಯನ್ನು ಉತ್ತೇಜಿಸುತ್ತಿದ್ದಾರೆ. ಇಂದು, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಮಹಿಳಾ STEM ಪದವೀಧರರನ್ನು ಹೊಂದಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇಂದು, ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಾಯಕತ್ವದ ಪಾತ್ರಗಳನ್ನು ವಹಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
#WATCH | Delhi: At the International Aryan Summit 2025, Prime Minister Narendra Modi says, “Last year, a special program was held in Gujarat at the birthplace of Dayanand Saraswati ji… Before that, right here in Delhi, I had the good fortune of inaugurating the 200th birth… pic.twitter.com/c7iTQQVGnw
— ANI (@ANI) October 31, 2025
ಇದನ್ನೂ ಓದಿ: https://tv9kannada.com/national
ಈ ಸಂದರ್ಭದಲ್ಲಿ, ಮಹರ್ಷಿ ದಯಾನಂದ ಸರಸ್ವತಿಯವರ 200ನೇ ಜನ್ಮ ದಿನಾಚರಣೆ ಮತ್ತು ಆರ್ಯ ಸಮಾಜದ ಸಮಾಜ ಸೇವೆಯ 150ನೇ ವರ್ಷಾಚರಣೆಯನ್ನು ಗುರುತಿಸುವ ಸ್ಮರಣಾರ್ಥ ಪ್ರಧಾನಿ ಮೋದಿ ನಾಣ್ಯಗಳನ್ನು ಬಿಡುಗಡೆ ಮಾಡಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ