ಅಂತರರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಜುಲೈ 31ರ ವರೆಗೆ ವಿಸ್ತರಿಸಿದ ಭಾರತ ಸರ್ಕಾರ

DGCA: ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ 2020 ರ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತರರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೆ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಅಂತರರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಜುಲೈ 31ರ ವರೆಗೆ ವಿಸ್ತರಿಸಿದ ಭಾರತ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 30, 2021 | 2:17 PM

ದೆಹಲಿ: ಭಾರತ ಸರ್ಕಾರವು ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸಂಚಾರ ನಿರ್ಬಂಧವನ್ನು ಜುಲೈ 31 ರವರೆಗೆ ವಿಸ್ತರಿಸಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಸುತ್ತೋಲೆಯಲ್ಲಿ ತಿಳಿಸಿದೆ. 15 ತಿಂಗಳ ಅಂತರದ ನಂತರ ಜೂನ್ 30 ರಂದು ನಿಗದಿತ ಸಾಗರೋತ್ತರ ವಿಮಾನಗಳ ಸಂಚಾರ ನಿರ್ಬಂಧ ಕೊನೆಗೊಳ್ಳಬೇಕಿತ್ತು. ಮೀಸಲಾದ ಸರಕು ವಿಮಾನಗಳು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ನಿಯಮಗಳ ಅಡಿಯಲ್ಲಿ ವಿಮಾನಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ತಿಳಿಸಿದೆ.

ಆದಾಗ್ಯೂ, ಆಯ್ದ ಮಾರ್ಗಗಳಲ್ಲಿ ಪ್ರಾಧಿಕಾರವು ಕೇಸ್ ಟು ಕೇಸ್ ಆಧಾರದ ಮೇಲೆ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು ಎಂದು ಸುತ್ತೋಲೆಯಲ್ಲಿ ಹೇಳಿದೆ.

ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ 2020 ರ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತರರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೆ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ “ಏರ್ ಬಬಲ್” ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ: Delta Plus variant: ಡೆಲ್ಟಾ ಪ್ಲಸ್ ರೂಪಾಂತರಿ ಅಪಾಯಕಾರಿಯೇ? ಹೊಸ ಕೊವಿಡ್ ರೂಪಾಂತರಿ ಬಗ್ಗೆ ತಜ್ಞರು ಹೇಳುವುದೇನು?

ಇದನ್ನೂ ಓದಿ: ಮತ್ತೆ ಪ್ರಯಾಣಿಕರಿಂದ ಜೀವಕಳೆ ಪಡೆದುಕೊಂಡ ಕೆಂಪೇಗೌಡ ವಿಮಾನ ನಿಲ್ದಾಣ; ಟ್ಯಾಕ್ಸಿ ಚಾಲಕರ ಮೊಗದಲ್ಲಿ ಮಂದಹಾಸ