1.89 ಕೋಟಿ ಡೋಸ್ ಬಳಕೆಯಾಗದ ಕೊವಿಡ್ ಲಸಿಕೆ ರಾಜ್ಯಗಳಲ್ಲಿವೆ: ಕೇಂದ್ರ ಆರೋಗ್ಯ ಇಲಾಖೆ

ಹೊಸ ನಿಯಮಗಳು ಅನುಷ್ಠಾನಕ್ಕೆ ಬಂದ ಮೊದಲ 72 ಗಂಟೆಗಳಲ್ಲಿ ಸುಮಾರು 2 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

1.89 ಕೋಟಿ ಡೋಸ್ ಬಳಕೆಯಾಗದ ಕೊವಿಡ್ ಲಸಿಕೆ ರಾಜ್ಯಗಳಲ್ಲಿವೆ: ಕೇಂದ್ರ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 24, 2021 | 10:49 PM

ದೆಹಲಿ: ರಾಜ್ಯಗಳ ಬಳಿ 1.89 ಕೋಟಿಗೂ ಅಧಿಕ ಡೋಸ್ ಕೊವಿಡ್-19 ಲಸಿಕೆ ರಾಜ್ಯಗಳ ಬಳಿಯಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಗುರುವಾರ ತಿಳಿಸಿದೆ. ಕೊವಿಡ್ ಲಸಿಕಾ ಕಾರ್ಯಾಕ್ರಮದ ಹೊಸ ನಿಯಮಾವಳಿಗಳು ಜೂನ್ 21ರಿಂದ ಅನುಷ್ಠಾನಕ್ಕೆ ಬಂದಿವೆ. ಹೊಸ ನಿಯಮಗಳು ಅನುಷ್ಠಾನಕ್ಕೆ ಬಂದ ಮೊದಲ 72 ಗಂಟೆಗಳಲ್ಲಿ ಸುಮಾರು 2 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು 30 ಕೋಟಿ ಡೋಸ್ ಲಸಿಕೆಗಳನ್ನು ವಿತರಿಸಿದೆ. ಈ ಪೈಕಿ 28,43,40,936 ಡೋಸ್​ಗಳನ್ನು ಜನರಿಗೆ ನೀಡಲಾಗಿದೆ. 1.89 ಕೋಟಿಗೂ ಹೆಚ್ಚು (1,89,86,504) ಡೋಸ್​ ಲಸಿಕೆಗಳು ರಾಜ್ಯಗಳ ಬಳಿ ಲಭ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈಗಾಗಲೇ ವಿವಿಧ ಲಸಿಕಾ ತಯಾರಿಕೆ ಕಂಪನಿಗಳಿಗೆ ಕೇಂದ್ರ ಸರ್ಕಾರ ಬೇಡಿಕೆ ಸಲ್ಲಿಸಿರುವ 21,05,010 (21 ಲಕ್ಷ) ಲಸಿಕೆಗಳು ಇನ್ನು ಮೂರು ದಿನಗಳ ಒಳಗೆ ಕೇಂದ್ರ ಸರ್ಕಾರದ ಸುಪರ್ದಿಗೆ ಸಿಗಲಿದೆ. ದೇಶಾದ್ಯಂತ ಕೊವಿಡ್-19 ಲಸಿಕಾ ಅಭಿಯಾನಕ್ಕೆ ಹೊಸ ವೇಗ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಹೆಚ್ಚಿನ ಸಂಖ್ಯೆಯ ಲಸಿಕೆಗಳನ್ನು ರಾಜ್ಯಗಳಿಗೆ ಒದಗಿಸುವ ಮೂಲಕ, ಮುಂಚಿತವಾಗಿ ಇಂತಿಷ್ಟು ಲಸಿಕೆಗಳು ಸಿಗುತ್ತವೆ ಎಂಬ ಮಾಹಿತಿ ನೀಡುವ ಮೂಲಕ ಲಸಿಕಾ ಅಭಿಯಾನವನ್ನು ಇನ್ನಷ್ಟು ವ್ಯವಸ್ಥಿತವಾಗಿ ನಡೆಸಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ನರವಾಗುತ್ತಿದೆ. ಜೂನ್ 21ರ ನಂತರ ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಗಳನ್ನು ಉಚಿತವಾಗಿ ಒದಗಿಸುತ್ತದೆ. ದೇಶದಲ್ಲಿ ಉತ್ಪಾದನೆಯಾಗುತ್ತಿರುವ ಒಟ್ಟು ಲಸಿಕೆಗಳ ಪೈಕಿ ಶೇ 75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಖರೀದಿಸಿ, ರಾಜ್ಯಗಳಿಗೆ ನೀಡುತ್ತಿದೆ.

(Indian Government Says Over 1.89 Crore Unutilised Covid Vaccine Doses Available With Various States)

ಇದನ್ನೂ ಓದಿ: ಡೆಲ್ಟಾ ಪ್ಲಸ್ ವೈರಸ್ ವಿರುದ್ಧ ಕೊವಿಶೀಲ್ಡ್ ಲಸಿಕೆ ಹೆಚ್ಚು ಪರಿಣಾಮಕಾರಿಯಲ್ಲ: ಲ್ಯಾನ್ಸೆಟ್ ವರದಿ

ಇದನ್ನೂ ಓದಿ: Delta Plus Variant ಕೊರೊನಾ ಲಸಿಕೆಗಿದೆಯಂತೆ ಡೆಲ್ಟಾ ಪ್ಲಸ್ ಓಡಿಸುವ ಶಕ್ತಿ.. ಲಸಿಕೆ ಪಡೆದ್ರೆ ಸೋಂಕಿನಿಂದ ಮುಕ್ತ

Published On - 10:47 pm, Thu, 24 June 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ