ಶ್ರೀಲಂಕಾದ ಮಾಜಿ ಪ್ರಧಾನಿ ಭಾರತಕ್ಕೆ ಪಲಾಯನದ ಸುದ್ದಿ ತಳ್ಳಿ ಹಾಕಿದ ರಾಯಭಾರ ಕಚೇರಿ

ಆರ್ಥಿಕ ಬಿಕ್ಕಟ್ಟಿನಿಂದ ಹೈರಾಣಾಗಿರುವ ಶ್ರೀಲಂಕಾದ ಜನತೆ, ಹಿಂದೆಂದೂ ಕಂಡುಕೇಳರಿಯದಷ್ಟು ತೀವ್ರವಾಗಿ ಸರ್ಕಾರ ವಿರೋಧಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಶ್ರೀಲಂಕಾದ ಮಾಜಿ ಪ್ರಧಾನಿ ಭಾರತಕ್ಕೆ ಪಲಾಯನದ ಸುದ್ದಿ ತಳ್ಳಿ ಹಾಕಿದ ರಾಯಭಾರ ಕಚೇರಿ
ಶ್ರೀಲಂಕಾದಲ್ಲಿ ಪ್ರತಿಭಟನೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 11, 2022 | 8:23 AM

ದೆಹಲಿ: ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದ ಜನರು (Srilanka Economic Crisis) ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ (Mahinda Rajapaksa) ಮತ್ತು ಅವರ ಕುಟುಂಬ ಸದಸ್ಯರು ಭಾರತಕ್ಕೆ ಪಲಾನಯ ಮಾಡಿದ್ದಾರೆ ಎನ್ನುವ ಸ್ಥಳೀಯ ಮಾಧ್ಯಮಗಳ ವರದಿಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಮತ್ತು ಶ್ರೀಲಂಕಾದಲ್ಲಿರುವ ಭಾರತದ ರಾಯಭಾರ ಕಚೇರಿ ನಿರಾಕರಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಹೈರಾಣಾಗಿರುವ ಶ್ರೀಲಂಕಾದ ಜನತೆ, ಹಿಂದೆಂದೂ ಕಂಡುಕೇಳರಿಯದಷ್ಟು ತೀವ್ರವಾಗಿ ಸರ್ಕಾರ ವಿರೋಧಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ದೇಶದೆಲ್ಲೆಡೆ ಹಿಂಸಾಚಾರ ವ್ಯಾಪಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ಹೆಣಗಾಡುತ್ತಿದೆ.

ಜನರ ಒತ್ತಡಕ್ಕೆ ಮಣಿದು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜನಾಕ್ರೋಶಕ್ಕೆ ಹೆದರಿರುವ ರಾಜಪಕ್ಸ ಮತ್ತು ಅವರ ಕುಟುಂಬದ ಸದಸ್ಯರು ಜೀವ ಉಳಿಸಿಕೊಳ್ಳಲು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎನ್ನುವ ಸಾಮಾಜಿಕ ಮಾಧ್ಯಮ ಪೋಸ್ಟ್​ಗಳು ಹಾಗೂ ಸ್ಥಳೀಯ ಮಾಧ್ಯಮಗಳ ವರದಿಗಳನ್ನು ಭಾರತದ ರಾಯಭಾರ ಕಚೇರಿ ತಳ್ಳಿಹಾಕಿದೆ. ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೋಮವಾರ ತಮ್ಮ ಅಧಿಕೃತ ನಿವಾಸದಿಂದ ಹೊರನಡೆದಿರುವ ಮಹಿಂದಾ ರಾಜಪಕ್ಸ ಪ್ರಸ್ತುತ ಎಲ್ಲಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕೊಲಂಬೋದಲ್ಲಿ ಟೆಂಪಲ್ ಟ್ರೀಸ್ ಎನ್ನಲಾಗುವ ಪ್ರಧಾನಿಯ ಅಧಿಕೃತ ನಿವಾಸ ಮತ್ತು ಕಚೇರಿಯಿಂದ ಮಹಿಂದಾ ರಾಜಪಕ್ಸ ಹೊರ ನಡೆದಿದ್ದರು.

ಪ್ರಧಾನಿ ರಾಜೀನಾಮೆಯ ನಂತರ ಶ್ರೀಲಂಕಾ ವಿದ್ಯಮಾನಗಳ ಕುರಿತು ಮೊದಲ ಬಾರಿಗೆ ಭಾರತ ಸರ್ಕಾರದ ಪರವಾಗಿ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದ ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರ ಅರಿಂಧಂ ಬಾಗ್​ಚಿ, ‘ಶ್ರೀಲಂಕಾದ ಹಿತವನ್ನು ಭಾರತ ಸದಾ ಬಯಸುತ್ತದೆ. ದ್ವೀಪ ರಾಷ್ಟ್ರದ ಆರ್ಥಿಕ ಚೇತರಿಕೆ, ಪ್ರಜಾಪ್ರಭುತ್ವ ಮತ್ತು ಸ್ಥಿರತೆ ಕಾಪಾಡಲು ಬೇಕಿರುವ ಎಲ್ಲ ರೀತಿಯ ನೆರವು ಒದಗಿಸುತ್ತದೆ’ ಎಂದು ಹೇಳಿದ್ದರು. ಶ್ರೀಲಂಕಾದಿಂದ ಯಾವುದೇ ಪ್ರಭಾವಿ ವ್ಯಕ್ತಿಯನ್ನು ಅಕ್ರಮವಾಗಿ ಬೇರೆ ದೇಶಕ್ಕೆ ನಾನು ಸಾಗಿಸಿಲ್ಲ. ನನ್ನ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಶ್ರೀಲಂಕಾದ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಧಾನ ನಿರ್ದೇಶಕ ಕ್ಯಾಪ್ಟನ್ ತೆಮಿಯಾ ಅಬೆವಿಕ್ರಮ್ ತಿಳಿಸಿದ್ದಾರೆ.

ತಮ್ಮ ಬೆಂಬಲಿಗರು ಸರ್ಕಾರಿ ವಿರೋಧಿ ಹೋರಾಟಗಾರರ ಮೇಲೆ ದಾಳಿ ನಡೆಸಿದ ನಂತರ 76ರ ಹರೆಯದ ಮಹಿಂದಾ ರಾಜಪಕ್ಸ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬೆಳವಣಿಗೆಯ ನಂತರ ದೇಶವ್ಯಾಪಿ ಹಿಂಸಾಚಾರ ಹೆಚ್ಚಾಯಿತು. ರಾಷ್ಟ್ರದಲ್ಲಿ ಕರ್ಫ್ಯೂ ಜಾರಿಗೊಳಿಸಿ, ರಾಜಧಾನಿಗೆ ಸೇನೆಯನ್ನು ನಿಯೋಜಿಸಲಾಯಿತು. ರಾಜಪಕ್ಸ ಬೆಂಬಲಿಗ ರಾಜಕಾರಿಣಿಗಳ ವಿರುದ್ಧವೂ ಪ್ರತಿಭಟನೆ ತೀವ್ರಗೊಂಡಿತು.

ಮಹಿಂದಾ ರಾಜಪಕ್ಸ ಆಶ್ರಯ ಪಡೆದಿರಬಹುದು ಎಂದು ಪೂರ್ವ ಬಂದರು ಜಿಲ್ಲೆ ತ್ರಿನ್​ಕೊಮಲೀ ನೌಕಾನೆಲೆಗೆ ಪ್ರತಿಭಟನಾಕಾರರ ಗುಂಪು ಮುತ್ತಿಗೆ ಹಾಕಿತು. ಮಹಿಂದಾ ಎಲ್ಲಿದ್ದರೂ ಬಿಡಬಾರದು. ಅವರನ್ನು ತಕ್ಷಣ ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು. ಅಧ್ಯಕ್ಷ ಗೊಟಬಾಯ ರಾಜಪಕ್ಸ ರಾಜೀನಾಮೆ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ತೀವ್ರಗೊಂಡ ನಂತರ ಈವರೆಗೆ 8 ಮಂದಿ ಮೃತಪಟ್ಟಿದ್ದು, 250 ಜನರು ಗಾಯಗೊಂಡಿದ್ದಾರೆ. ಆಡಳಿತ ಪಕ್ಷದ ರಾಜಕಾರಿಣಿಗಳಿಗೆ ಸೇರಿದ ಆಸ್ತಿಪಾಸ್ತಿಗಳಿಗೆ ಬೆಂಕಿ ಹಾಕಲಾಗಿದೆ.

ಕಂಡಲ್ಲಿ ಗುಂಡಿಕ್ಕಲು ರಕ್ಷಣಾ ಸಚಿವಾಲಯ ಆದೇಶ

ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದಲ್ಲಿ(Sri Lanka) ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುವ ಅಥವಾ ಇತರರಿಗೆ ಹಾನಿ ಮಾಡುವ ವ್ಯಕ್ತಿಗಳು ಯಾರೇ ಆದರೂ ಅವರಿಗೆ ಗುಂಡು ಹಾರಿಸುವಂತೆ ಶ್ರೀಲಂಕಾದ ರಕ್ಷಣಾ ಸಚಿವಾಲಯ(Ministry of Defence) ಮಂಗಳವಾರ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿಗೆ ಆದೇಶಿಸಿದೆ. ಸಹ ನಾಗರಿಕರ ವಿರುದ್ಧ “ಹಿಂಸಾಚಾರ ಮತ್ತು ಸೇಡಿನ ಕ್ರಮಗಳನ್ನು” ನಿಲ್ಲಿಸುವಂತೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ (Gotabaya Rajapaksa) ಜನರಲ್ಲಿ ಮನವಿ ಮಾಡಿದ್ದು, ರಾಷ್ಟ್ರವು ಎದುರಿಸುತ್ತಿರುವ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಪ್ರತಿಜ್ಞೆ ಮಾಡಿದ ನಂತರ ಈ ಆದೇಶ ಬಂದಿದೆ. ಶ್ರೀಲಂಕಾದ ರಕ್ಷಣಾ ಪ್ರಧಾನ ಕಾರ್ಯದರ್ಶಿ (ನಿವೃತ್ತ) ಕಮಲ್ ಗುಣರತ್ನೆ ಮಂಗಳವಾರ ಪ್ರತಿಭಟನಾಕಾರರನ್ನು ಶಾಂತವಾಗಿರಲು ಹೇಳಿದ್ದು ಹಿಂಸಾಚಾರಕ್ಕೆ ಮುಂದಾಗದಂತೆ ಒತ್ತಾಯಿಸಿದರು. ಲೂಟಿ ಮತ್ತು ಆಸ್ತಿ ಹಾನಿ ಮುಂದುವರಿದರೆ, ಉಲ್ಲಂಘಿಸುವವರ ವಿರುದ್ಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಕ್ಷಣಾ ಸಚಿವಾಲಯವನ್ನು ಒತ್ತಾಯಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದರು. ಯುವಕರು ಮತ್ತು ಯುವತಿಯರು ಹಿಂಸಾಚಾರದಲ್ಲಿ ತೊಡಗದಂತೆ ನಾನು ಮನವಿ ಮಾಡುತ್ತೇನೆ. ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಬೆಂಕಿ ಹಚ್ಚಬೇಡಿ. ನಿಮ್ಮ ಹೋರಾಟದಲ್ಲಿ ಪ್ರಜಾಪ್ರಭುತ್ವ ಮತ್ತು ಶಾಂತಿ ಕಾಪಾಡಿ. ಶಾಂತಿಯುತ ಪ್ರತಿಭಟನೆಯ ನೆಪದಲ್ಲಿ ಲೂಟಿಕೋರರು ಅಪರಾಧ ಎಸಗಲು ಅವಕಾಶವನ್ನು ಬಳಸಿಕೊಂಡಿದ್ದಾರೆ ಎಂದು ರಕ್ಷಣಾ ಕಾರ್ಯದರ್ಶಿ ಎಚ್ಚರಿಸಿದ್ದಾರೆ, ಇದು ಅತ್ಯಂತ ದುರದೃಷ್ಟಕರ ಪರಿಸ್ಥಿತಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Sri Lanka Crisis ಶ್ರೀಲಂಕಾ: ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಗೆ ಕಂಡಲ್ಲಿ ಗುಂಡಿಕ್ಕಲು ರಕ್ಷಣಾ ಸಚಿವಾಲಯ ಆದೇಶ

ಇದನ್ನೂ ಓದಿ: ಶ್ರೀಲಂಕಾದಲ್ಲಿ ಹಿಂಸಾಚಾರ; ಶಾಸಕರ ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ ಸರ್ಕಾರ ವಿರೋಧಿ ಪ್ರತಿಭಟನಾಕಾರರು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ