ಹರ್ದೀಪ್​ ಸಿಂಗ್ ನಿಜ್ಜರ್ ಓರ್ವ ಹಂತಕ, ಧಾರ್ಮಿಕ ಮುಖಂಡನಲ್ಲ: ಭಾರತೀಯ ಗುಪ್ತಚರ ಸಂಸ್ಥೆ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಓರ್ವ ಹಂತಕ, ಧಾರ್ಮಿಕ ಮುಖಂಡನಲ್ಲ ಎಂದು ಭಾರತೀಯ ಗುಪ್ತಚರ ಸಂಸ್ಥೆ ಹೇಳಿದೆ. ಖಲಿಸ್ತಾನ್ ಟೈಗರ್ ಫೋರ್ಸ್​ನ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿತ್ತು ಆದರೆ ಇದುವರೆಗೆ ಯಾವುದೇ ಪುರಾವೆಯನ್ನು ಒದಗಿಸಿಲ್ಲ. ಕೆನಡಾದ ಸರ್ರೆಯಲ್ಲಿರುವ ಗುರುನಾನಕ್ ಗುರುದ್ವಾರದ ಬಳಿ ಹರ್ದೀಪ್​ಸಿಂಗ್​ನನ್ನು ಹತ್ಯೆ ಮಾಡಲಾಗಿತ್ತು.

ಹರ್ದೀಪ್​ ಸಿಂಗ್ ನಿಜ್ಜರ್ ಓರ್ವ ಹಂತಕ, ಧಾರ್ಮಿಕ ಮುಖಂಡನಲ್ಲ: ಭಾರತೀಯ ಗುಪ್ತಚರ ಸಂಸ್ಥೆ
ಹರ್ದೀಪ್​ ಸಿಂಗ್ ನಿಜ್ಜರ್Image Credit source: Swarajya
Follow us
|

Updated on:Sep 23, 2023 | 8:32 AM

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಓರ್ವ ಹಂತಕ, ಧಾರ್ಮಿಕ ಮುಖಂಡನಲ್ಲ ಎಂದು ಭಾರತೀಯ ಗುಪ್ತಚರ ಸಂಸ್ಥೆ ಹೇಳಿದೆ. ಖಲಿಸ್ತಾನ್ ಟೈಗರ್ ಫೋರ್ಸ್​ನ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿತ್ತು ಆದರೆ ಇದುವರೆಗೆ ಯಾವುದೇ ಪುರಾವೆಯನ್ನು ಒದಗಿಸಿಲ್ಲ. ಕೆನಡಾದ ಸರ್ರೆಯಲ್ಲಿರುವ ಗುರುನಾನಕ್ ಗುರುದ್ವಾರದ ಬಳಿ ಹರ್ದೀಪ್​ಸಿಂಗ್​ನನ್ನು ಹತ್ಯೆ ಮಾಡಲಾಗಿತ್ತು.

ಭಾರತೀಯ ಗುಪ್ತಚರ ಸಂಸ್ಥೆ ಒಟ್ಟುಗೂಡಿಸಿರುವ ಮಾಹಿತಿ ಪ್ರಕಾರ ತನ್ನ ಸ್ವಂತ ಸೋದರಸಂಬಂಧಿ ಮತ್ತು ದೇವಾಲಯದ ಮಾಜಿ ಅಧ್ಯಕ್ಷ ರಘಬೀರ್ ಸಿಂಗ್ ನಿಜ್ಜಾರ್​ಗೆ ಬೆದರಿಕೆ ಹಾಕಿ ಸಿಖ್ ದೇವಾಲಯದ ಮುಖ್ಯಸ್ಥನಾಗಿದ್ದ ಎಂದು ಹೇಳಿದೆ.

ನಿಜ್ಜರ್, ಖಲಿಸ್ತಾನ್ ಕಮಾಂಡೋ ಫೋರ್ಸ್ (ಕೆಸಿಎಫ್) ಭಯೋತ್ಪಾದಕ ಗುರ್ದೀಪ್ ಸಿಂಗ್ ಅಕಾ ದೀಪಾ ಹೆರನ್‌ವಾಲಾ ಅವರ ಹಳೆಯ ಸಹವರ್ತಿಯಾಗಿದ್ದು, ಅವರು 1980 ರ ದಶಕದ ಕೊನೆಯಲ್ಲಿ ಮತ್ತು 1990 ರ ದಶಕದ ಆರಂಭದಲ್ಲಿ ಪಂಜಾಬ್‌ನಲ್ಲಿ 200 ಕ್ಕೂ ಹೆಚ್ಚು ಹತ್ಯೆಗಳಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ಓದಿ: ಭಾರತದ ವಿರುದ್ಧ ವಿಶ್ವಾಸಾರ್ಹ ಸಾಕ್ಷ್ಯಗಳಿವೆ ಎಂದ ಟ್ರುಡೊ ಆದರೆ ಬಹಿರಂಗಪಡಿಸಲು ಹಿಂದೇಟು

ನಿಜ್ಜರ್ 1996 ರಲ್ಲಿ ರವಿ ಶರ್ಮಾ ಎಂಬ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್‌ನಲ್ಲಿ ಕೆನಡಾಕ್ಕೆ ಪರಾರಿಯಾಗಿದ್ದಾನೆ ಮತ್ತು ಟ್ರಕ್ ಡ್ರೈವರ್ ಮತ್ತು ಪ್ಲಂಬರ್ ಆಗಿ ತನ್ನ ಪ್ರೊಫೈಲ್ ಬದಲಿಸಿಕೊಂಡಿದ್ದ. ಪಾಕಿಸ್ತಾನ ಮೂಲದ ಕೆಟಿಎಫ್ ಮುಖ್ಯಸ್ಥ ಜಗತಾರ್ ಸಿಂಗ್ ತಾರಾ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ, ಏಪ್ರಿಲ್ 2012 ರಲ್ಲಿ ಬೈಸಾಖಿ ಜಾಥಾ ಸದಸ್ಯ ಎಂಬ ನೆಪದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ, 2012 ಮತ್ತು 2013 ರಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ತರಬೇತಿಯನ್ನು ನೀಡಲಾಗಿತ್ತು.

ಆಗಲೇ ಆತನ ವಿರುದ್ಧ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಇತ್ತು ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಆತ ಖಲಿಸ್ತಾನ ಪರ ಹೋರಾಟಗಾರ, ಸಿಖ್‌ ಸಮುದಾಯಕ್ಕಾಗಿ ಪ್ರತ್ಯೇಕ ದೇಶ ಬೇಕು ಎಂದು ಹೇಳುತ್ತಲೇ ಬಂದಿದ್ದ. ವ್ಯಾಂಕೋವರ್‌ನಲ್ಲಿ ಜೂನ್ 19ರಂದು ಸಿಖ್ ದೇಗುಲದ ಹೊರಗೆ ಇಬ್ಬರು ಅಪರಿಚಿತ ದುಷ್ಕರ್ಮಿಗಳ ಗುಂಡಿನ ದಾಳಿಗೆ ಸಿಲುಕಿ ಮೃತಪಟ್ಟಿದ್ದ. ಆತನಿಗೆ 45 ವರ್ಷ ವಯಸ್ಸಾಗಿತ್ತು.

ನಿಜ್ಜರ್ 2007ರಲ್ಲಿ ಪಂಜಾಬ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ. ಈ ದಾಳಿಯಲ್ಲಿ ಆರು ಜನ ಮೃತಪಟ್ಟಿದ್ದು, 40 ಜನ ಗಾಯಗೊಂಡಿದ್ದರು. ಇದೇ ರೀತಿ 2009ರಲ್ಲಿ ಸಿಖ್ ರಾಜಕಾರಣಿ ರುಲ್ದಾ ಸಿಂಗ್‌ ಹತ್ಯೆಯಲ್ಲೂ ಈತ ಭಾಗಿಯಾಗಿದ್ದ. 2021ರಲ್ಲಿ ಜಲಂಧರ್‌ನಲ್ಲಿ ಹಿಂದು ಪುರೋಹಿತರೊಬ್ಬರ ಹತ್ಯೆ ಪ್ರಕರಣದಲ್ಲೂ ಭಾಗಿಯಾಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:31 am, Sat, 23 September 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ