Vande Bharat: 2024ರ ವೇಳೆಗೆ 102 ವಂದೇ ಭಾರತ್ ರೈಲು ಓಡಿಸುವ ಗುರಿ

2024ರ ಹೊತ್ತಿಗೆ ಒಟ್ಟು 102 ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆಗೆ ಅನುಗುಣವಾಗಿ ರೈಲ್ವೆ ಇಲಾಖೆ ಈ ಕ್ರಮ ಕೈಗೊಂಡಿದೆ.

Vande Bharat: 2024ರ ವೇಳೆಗೆ 102 ವಂದೇ ಭಾರತ್ ರೈಲು ಓಡಿಸುವ ಗುರಿ
ವಂದೇ ಭಾರತ್ ಎಕ್ಸ್​ಪ್ರೆಸ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 29, 2021 | 7:50 PM

ದೆಹಲಿ: ಭಾರತೀಯ ರೈಲ್ವೆಯು ಇನ್ನೂ 58 ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದೆ. ಮುಂದಿನ ವರ್ಷ ಆಗಸ್ಟ್​ 23ರ ಒಳಗೆ 75 ಹೊಸ ರೈಲುಗಳನ್ನು ಓಡಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. 2024ರ ಹೊತ್ತಿಗೆ ಒಟ್ಟು 102 ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75 ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದ 75ನೇ ವರ್ಷದಲ್ಲಿ ಪ್ರತಿ ವಾರಕ್ಕೊಂದರಂತೆ 75 ವಾರಗಳಲ್ಲಿ ಇಡೀ ದೇಶವನ್ನು ಸಂಪರ್ಕಿಸುವ ಮೂಲಕ ‘ಆಜಾದಿ ಕ ಅಮೃತ್ ಮಹೋತ್ಸವ್’ವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದ್ದರು.

ಈ ರೈಲುಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ, ಚೆನ್ನೈನ ಮಾಡರ್ನ್ ಕೋಚ್ ಫ್ಯಾಕ್ಟರಿ, ರಾಯ್​ಬರೇಲಿ ಮತ್ತು ಕಪುರ್ತಲಾದ ರೈಲ್ ಕೋಚ್ ಫ್ಯಾಕ್ಟರಿಗಳಲ್ಲಿ ನಿರ್ಮಿಸಲಾಗುವುದು. ಅಕ್ಟೋಬರ್ 20, 2021ಕ್ಕೆ ಈ ಟೆಂಡರ್​ ಅವಧಿ ಮುಗಿಯಲಿದೆ. ಟೆಂಡರ್​ಗಾಗಿ ಮಾಹಿತಿ ಪಡೆಯಲು ಸೆ.14 ಕೊನೆಯ ದಿನವಾಗಿದ್ದರೆ, ಸೆ.21ರಂದು ಟೆಂಡರ್​ಗೂ ಮೊದಲಿನ ಚರ್ಚೆಗಾಗಿ ಆಸಕ್ತರ ಸಭೆಯೊಂದು ನಡೆಯಲಿದೆ.

58 ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲುಗಳ ವಿನ್ಯಾಸ, ಅಭಿವೃದ್ಧಿ, ಉತ್ಪಾದನೆ, ಪರೀಕ್ಷೆ, ಸಂಯೋಜನೆ, ಎಲೆಕ್ಟ್ರಿಕಲ್ ಕೆಲಸಗಳಿಗಾಗಿ ಆಗಸ್ಟ್​ 28ರಂದು ಟೆಂಡರ್​ ಕರೆಯಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಭಾರತೀಯ ರೈಲ್ವೆಯು 44 ಸೆಮಿ ಹೈಸ್ಪೀಡ್ ವಂದೇ ಭಾರತ್ ರೈಲುಗಳ ನಿರ್ಮಾಣಕ್ಕಾಗಿ ಟೆಂಡರ್ ಕರೆದಿತ್ತು. ರೈಲು ನಿರ್ಮಾಣಕ್ಕೆ ಬಳಸುವ ಶೇ 75ರಷ್ಟು ಉತ್ಪನ್ನಗಳು ದೇಶೀಯವಾಗಿಯೇ ಉತ್ಪಾದನೆಯಾಗಿರಬೇಕು ಎಂಬ ಷರತ್ತು ವಿಧಿಸಲಾಗಿತ್ತು.

ಜೂನ್​ 2020ರ ನಂತರ ಹೊಸ ವಿನ್ಯಾಸದ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲುಗಳು ಸಂಚಾರ ಆರಂಭಿಸಬಹುದು ಎನ್ನಲಾಗಿದೆ. ಹೊವ ವಿನ್ಯಾಸದ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮಾರ್ಚ್ 2022ರಂದು ಸಂಚಾರ ಆರಂಭಿಸಲಿದೆ. ಜೂನ್ 2022ರ ವೇಳೆಗೆ ವಾಣಿಜ್ಯ ಸಂಚಾರ ಆರಂಭವಾಗಬಹುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಹೊಸ ವಿನ್ಯಾಸದ ರೈಲುಗಳಲ್ಲಿ ಪ್ರತಿ ಬೋಗಿಗಳಲ್ಲಿಯೂ ನಾಲ್ಕು ತುರ್ತು ನಿರ್ಗಮನ ದ್ವಾರಗಳಿವೆ. ತುರ್ತು ಬಳಕೆಯಲ್ಲಿ ಬಳಸಲು ಸಾಧ್ಯವಾಗುವ ಲೈಟ್​ಗಳು, ಹೆಚ್ಚುವರಿ ಎಮರ್ಜೆನ್ಸಿ ಪುಶ್ ಬಟನ್​ಗಳು ಇರುತ್ತವೆ.

ಈ ರೈಲುಗಳಲ್ಲಿ ಎಲೆಕ್ಟ್ರಿಕಲ್, ವಾತಾವರಣ ನಿಯಂತ್ರಣ ಮತ್ತು ಇತರ ಸೌಲಭ್ಯಗಳನ್ನು ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಿಯಂತ್ರಿಸಲು ಅವಕಾಶವಿದೆ. ಈ ರೈಲುಗಳ ಸೀಟುಗಳಿಗೆ ಪುಶ್​ಬ್ಯಾಕ್ ಸೌಲಭ್ಯವೂ ಇರುತ್ತದೆ. ಮೊದಲ ಎರಡು ಕೋಚ್​ಗಳಲ್ಲಿ ಪ್ರಯಾಣದ ಅನುಭವದ ಸುಧಾರಣೆಗೆ ಹಲವು ಮಹತ್ವದ ಸುಧಾರಣೆಗಳನ್ನು ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 15, 2019ರಂದು ನವದೆಹಲಿ-ವಾರಣಾಸಿ ಮಾರ್ಗದಲ್ಲಿ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. 2019ರ ಅಕ್ಟೋಬರ್ 3ರಂದು ನವದೆಹಲಿ-ಶ್ರೀ ಮಾತಾ ವೈಷ್ಣೋದೇವಿ ಕಟ್ರಾ ಮಾರ್ಗದಲ್ಲಿ 2ನೇ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದರು.

(Indian Railways float tender for 58 new Vande Bharat trains aims to run 102 trains by 2024)

ಇದನ್ನೂ ಓದಿ: ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ಸಂಚಾರ ವಿಸ್ತರಿಸಲು ಸಚಿವ ಎಂಟಿಬಿ ನಾಗರಾಜ್ ಮನವಿ

ಇದನ್ನೂ ಓದಿ: ರೈಲು ನಿಲ್ದಾಣದ ಫಲಕಗಳಲ್ಲಿ ಸಮುದ್ರ ಮಟ್ಟದಿಂದ ಇರುವ ಎತ್ತರವನ್ನು ಬರೆದಿರುತ್ತಾರೆ; ಏಕೆ ಗೊತ್ತೇ?

Published On - 7:49 pm, Sun, 29 August 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ