AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು ಹೊಸ ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು, ಕಪ್ಪು ಕುಳಿ ಅಧ್ಯಯನಕ್ಕೆ ಉಪಗ್ರಹ ಉಡಾವಣೆ

ಹೊಸ ವರ್ಷದಂದು ಹೊಸ ಉತ್ಸಾಹದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವರ್ಷದ ಮೊದಲ ಬಾಹ್ಯಾಕಾಶ ಯಾತ್ರೆಗೆ ಸಿದ್ಧತೆ ನಡೆಸಿದೆ. ಕಪ್ಪುಕುಳಿ ಅಧ್ಯಯನಕ್ಕಾಗಿ ಇಂದು 9.10ರ ಸುಮಾರಿಗೆ ಎಕ್ಸ್​ ರೇ ಪೋಲಾರಿಮೀಟರ್​ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ವರ್ಷದ ಮೊದಲ ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಆರಂಭವಾಗಲಿದೆ.

ಹೊಸ ವರ್ಷದಂದು ಹೊಸ ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು, ಕಪ್ಪು ಕುಳಿ ಅಧ್ಯಯನಕ್ಕೆ ಉಪಗ್ರಹ ಉಡಾವಣೆ
ಉಪಗ್ರಹ
ನಯನಾ ರಾಜೀವ್
|

Updated on: Jan 01, 2024 | 8:40 AM

Share

ಹೊಸ ವರ್ಷದಂದು ಹೊಸ ಉತ್ಸಾಹದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವರ್ಷದ ಮೊದಲ ಬಾಹ್ಯಾಕಾಶ ಯಾತ್ರೆಗೆ ಸಿದ್ಧತೆ ನಡೆಸಿದೆ. ಕಪ್ಪುಕುಳಿ ಅಧ್ಯಯನಕ್ಕಾಗಿ ಇಂದು 9.10ರ ಸುಮಾರಿಗೆ ಎಕ್ಸ್​ ರೇ ಪೋಲಾರಿಮೀಟರ್​ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ವರ್ಷದ ಮೊದಲ ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಆರಂಭವಾಗಲಿದೆ.

ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ವಿಶೇಷ ಖಗೋಳ ವೀಕ್ಷಣಾಲಯವನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ವಿಶ್ವದ ಎರಡನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.

ಎಕ್ಸ್‌ಪೋಸ್ಯಾಟ್ ಒಂದು ರೀತಿಯ ವೀಕ್ಷಣಾಲಯವಾಗಿದೆ, ಇದು ಬಾಹ್ಯಾಕಾಶದಿಂದ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತದೆ.

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ 2021 ರಲ್ಲಿ ಇಮೇಜಿಂಗ್ ಎಕ್ಸ್-ರೇ ಪೋಲಾರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ಹೆಸರಿನ ಮಿಷನ್ ಅನ್ನು ಪ್ರಾರಂಭಿಸಿತು. ಇದರ ಮೂಲಕ ಕಪ್ಪು ಕುಳಿಗಳು ಮತ್ತು ಬಾಹ್ಯಾಕಾಶದಲ್ಲಿರುವ ಇತರ ವಿಷಯಗಳನ್ನು ಅಧ್ಯಯನ ಮಾಡಲಾಗುತ್ತಿದೆ.

2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಇಸ್ರೋ ಜತೆ ಸತತ ಸಂಪರ್ಕದಲ್ಲಿರಲು ಸಚಿವರಿಂದ ಸೂಚನೆ

ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಎಕ್ಸ್ ಪೋಸ್ಯಾಟ್ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ. ಪಿಎಸ್‌ಎಲ್‌ವಿ ರಾಕೆಟ್ ಮೂಲಕ ಎಕ್ಸೋಪಾಸ್ಯಾಟ್ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು. ಈ ಉಪಗ್ರಹವನ್ನು ಭೂಮಿಯ ಕೆಳಗಿನ ಕಕ್ಷೆಯಲ್ಲಿ ಸ್ಥಾಪಿಸಲಾಗುವುದು, ಅಲ್ಲಿಂದ ಭೂಮಿಗೆ 650 ಕಿ.ಮೀ ಅಂತರವಿರಲಿದೆ. ಉಡಾವಣೆಯು ಇಸ್ರೋದ ಅಧಿಕೃತ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದಲ್ಲಿ ನೇರ ಪ್ರಸಾರವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!