Indian Science Congress: ವಿಜ್ಞಾನ ಕ್ಷೇತ್ರದಲ್ಲಿ ವಿಶ್ವದ ಟಾಪ್ 10 ದೇಶಗಳಲ್ಲಿ ಭಾರತ ಸ್ಥಾನ ಪಡೆದಿದೆ; ಪ್ರಧಾನಿ ನರೇಂದ್ರ ಮೋದಿ

PM Narendra Modi Speech: 2023 ಅನ್ನು ಅಂತಾರಾಷ್ಟ್ರೀಯ ರಾಗಿ ವರ್ಷವೆಂದು ಘೋಷಿಸುವುದರೊಂದಿಗೆ, ವಿಜ್ಞಾನದ ಬಳಕೆಯಿಂದ ಭಾರತದ ರಾಗಿ ಮತ್ತು ಅವುಗಳ ಬಳಕೆಯನ್ನು ಇನ್ನಷ್ಟು ಸುಧಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Indian Science Congress: ವಿಜ್ಞಾನ ಕ್ಷೇತ್ರದಲ್ಲಿ ವಿಶ್ವದ ಟಾಪ್ 10 ದೇಶಗಳಲ್ಲಿ ಭಾರತ ಸ್ಥಾನ ಪಡೆದಿದೆ; ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 03, 2023 | 11:40 AM

ನವದೆಹಲಿ: ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುವುದು. ಮಹಿಳೆಯರ ಹೆಚ್ಚುತ್ತಿರುವ ಭಾಗವಹಿಸುವಿಕೆ ಸಮಾಜ ಮತ್ತು ವಿಜ್ಞಾನದ ಪ್ರಗತಿಯ ಪ್ರತಿಬಿಂಬವಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ ಭಾರತವು ವಿಶ್ವದ ಅಗ್ರ 10 ದೇಶಗಳಲ್ಲಿ ತನ್ನ ಸ್ಥಾನವನ್ನು ಕಂಡುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ನಾಗ್ಪುರ ವಿಶ್ವವಿದ್ಯಾಲಯವು (Nagpur University) ಆಯೋಜಿಸಿರುವ 4 ದಿನಗಳ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವರ್ಚುವಲ್ ಆಗಿ ಉದ್ಘಾಟಿಸಿ ಮೋದಿ ಮಾತನಾಡಿದ್ದಾರೆ.

108ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ISC) ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2015ರವರೆಗೆ 130 ದೇಶಗಳಲ್ಲಿ ಭಾರತವು ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ 81ನೇ ಸ್ಥಾನದಲ್ಲಿತ್ತು. 2022ರಲ್ಲಿ ನಾವು 40ನೇ ಸ್ಥಾನಕ್ಕೆ ಏರಿದ್ದೇವೆ. ಪಿಎಚ್‌ಡಿ ಮತ್ತು ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಭಾರತವು ಅಗ್ರ 3 ದೇಶಗಳಲ್ಲಿ ಒಂದಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Heeraben Modi Death: ಹೀರಾಬೆನ್ ಅಂತ್ಯಕ್ರಿಯೆ ಆರಂಭ; ತಾಯಿಯ ಮೃತದೇಹ ಹೊತ್ತು ಸಾಗಿದ ಪ್ರಧಾನಿ ಮೋದಿ

ಭಾರತದಲ್ಲಿ 21ನೇ ಶತಮಾನದಲ್ಲಿ ಡೇಟಾ ಮತ್ತು ತಂತ್ರಜ್ಞಾನ ಭಾರತದ ವಿಜ್ಞಾನವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲವು. ಡೇಟಾ ವಿಶ್ಲೇಷಣೆಯು ವೇಗವಾಗಿ ಮುಂದುವರಿಯುತ್ತಿದೆ. ಈ ಮಾಹಿತಿಯನ್ನು ಒಳನೋಟಕ್ಕೆ ಮತ್ತು ವಿಶ್ಲೇಷಣೆಯನ್ನು ಕ್ರಿಯಾಶೀಲ ಜ್ಞಾನವಾಗಿ ಪರಿವರ್ತಿಸಲು ಇದು ಸಹಾಯ ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.

ವಿಜ್ಞಾನ ಭಾರತವನ್ನು ಆತ್ಮನಿರ್ಭರ ಮಾಡಬೇಕು. ಪ್ರಯೋಗಾಲಯದಿಂದ ಭೂಮಿಗೆ ಹೋದಾಗ ಮಾತ್ರ ವಿಜ್ಞಾನದ ಪ್ರಯತ್ನಗಳು ಫಲ ನೀಡುತ್ತವೆ. 2023 ಅನ್ನು ಅಂತಾರಾಷ್ಟ್ರೀಯ ರಾಗಿ ವರ್ಷವೆಂದು ಘೋಷಿಸುವುದರೊಂದಿಗೆ, ವಿಜ್ಞಾನದ ಬಳಕೆಯಿಂದ ಭಾರತದ ರಾಗಿ ಮತ್ತು ಅವುಗಳ ಬಳಕೆಯನ್ನು ಇನ್ನಷ್ಟು ಸುಧಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: 108th Indian Science Congress: ನಾಗ್ಪುರದಲ್ಲಿ 108ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೇಂದ್ರ ಭೂ ವಿಜ್ಞಾನ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉದ್ಘಾಟನಾ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಅಧಿವೇಶನಗಳಲ್ಲಿ ಪ್ರಮುಖ ಭಾರತೀಯ ಮತ್ತು ವಿದೇಶಿ ಸಂಶೋಧಕರು ಮತ್ತು ನೊಬೆಲ್ ಪ್ರಶಸ್ತಿ ವಿಜೇತರು, ಬಾಹ್ಯಾಕಾಶ, ರಕ್ಷಣೆ, ಐಟಿ ಮತ್ತು ವೈದ್ಯಕೀಯ ಸಂಶೋಧನೆಯಂತಹ ಕ್ಷೇತ್ರಗಳ ತಜ್ಞರು ಮತ್ತು ತಂತ್ರಜ್ಞರು ಭಾಗವಹಿಸಲಿದ್ದಾರೆ.

ತಾಂತ್ರಿಕ ಅವಧಿಗಳು ಕೃಷಿ ಮತ್ತು ಅರಣ್ಯ ವಿಜ್ಞಾನಗಳು, ಪ್ರಾಣಿ, ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳು, ಮಾನವಶಾಸ್ತ್ರ ಮತ್ತು ವರ್ತನೆಯ ವಿಜ್ಞಾನಗಳು, ರಾಸಾಯನಿಕ ವಿಜ್ಞಾನಗಳು ಮತ್ತು ಭೂ ವ್ಯವಸ್ಥೆಯ ವಿಜ್ಞಾನಗಳಲ್ಲಿ ಅನ್ವಯಿಕ ಸಂಶೋಧನೆಗಳನ್ನು ಪ್ರದರ್ಶಿಸುತ್ತವೆ.

ಇವುಗಳೊಂದಿಗೆ, ಮಕ್ಕಳು ಮತ್ತು ಮಹಿಳೆಯರಲ್ಲಿ ವೈಜ್ಞಾನಿಕ ಆಸಕ್ತಿ ಮತ್ತು ಮನೋಧರ್ಮವನ್ನು ಉತ್ತೇಜಿಸಲು ಸಹಾಯ ಮಾಡಲು ರೈತರ ವಿಜ್ಞಾನ ಕಾಂಗ್ರೆಸ್ ಮತ್ತು ಮಹಿಳಾ ವಿಜ್ಞಾನ ಕಾಂಗ್ರೆಸ್ ಅನ್ನು ಸಹ ಆಯೋಜಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್