Chandrayaan-3: 2023ರ ಜೂನ್​ನಲ್ಲಿ ಚಂದ್ರಯಾನ-3 ಉಡಾವಣೆ: ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ.

Chandrayaan-3: 2023ರ ಜೂನ್​ನಲ್ಲಿ ಚಂದ್ರಯಾನ-3 ಉಡಾವಣೆ: ಇಸ್ರೋ
Somnath
Follow us
TV9 Web
| Updated By: ನಯನಾ ರಾಜೀವ್

Updated on:Oct 24, 2022 | 10:17 AM

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ. ಅಬಾರ್ಟ್ ಮಿಷನ್ ಯಶಸ್ವಿಯಾಗಿ ನಡೆಸಿದ ಬಳಿಕ 2024 ರ ಕೊನೆಯ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಕಕ್ಷೆಗೆ ಹಾರಿಸಲು ಇಸ್ರೋ ಯೋಜಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಚಂದ್ರಯಾನ-3 ಸಿದ್ಧವಾಗಿದೆ, ಇದು ಚಂದ್ರಯಾನ-2 ಪ್ರತಿರೂಪವಂತೂ ಅಲ್ಲವೇ ಅಲ್ಲ, ಇದರಲ್ಲಿ ಸಾಕಷ್ಟು ಬದಲಾವಣೆಗಳಿವೆ, ಇದರ ಎಂಜಿನಿಯರಿಂಗ್ ಗಮನಾರ್ಹವಾಗಿ ವಿಭಿನ್ನವಾಗಿದೆ. ಕಳೆದ ಬಾರಿಯಂತೆ ಯಾವುದೇ ಸಮಸ್ಯೆಯಾಗದಂತೆ ನಾವು ಅದನ್ನು ಹೆಚ್ಚು ಸದೃಢಗೊಳಿಸಿದ್ದೇವೆ ಎಂದು ಎಸ್. ಸೋಮನಾಥ್ ಹೇಳಿದ್ದಾರೆ.

2019ರಲ್ಲಿ ಕೈಗೊಳ್ಳಲಾಗಿದ್ದ ಚಂದ್ರಯಾನ -2 ಕಾರ್ಯಾಚರಣೆಯಲ್ಲಿ ರೋವರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಕೊನೇ ಕ್ಷಣದಲ್ಲಿ ವಿಫಲವಾಗಿತ್ತು. ಚಂದ್ರಯಾನ 3 ಇದೀಗ ಸಜ್ಜಾಗಿದೆ. ಇದು ಭವಿಷ್ಯದ ಅಂತರ-ಗ್ರಹ ಪರಿಶೋಧನೆಗಳಿಗೆ ನಿರ್ಣಾಯಕವಾಗಿದೆ.

ಮುಂದಿನ ವರ್ಷದ ಆರಂಭದಲ್ಲಿ ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನ ಯಾನಕ್ಕಾಗಿ ಅಬಾರ್ಟ್ ಮಿಷನ್ ನ ಮೊದಲ ಪರೀಕ್ಷಾರ್ಥ ಹಾರಾಟ ಮಾಡಲಾಗುತ್ತಿದೆ.

ಮುಂದಿನ ವರ್ಷ ಜೂನ್ ನಲ್ಲಿ ಮಾರ್ಕ್ -3 (ಎಲ್ ವಿಎಂ3) ಉಡಾವಣಾ ವಾಹಕದ ಮೂಲಕ ಚಂದ್ರಯಾನ-3 ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದು ಚಂದ್ರಯಾನ-2 ಪ್ರತಿರೂಪವಲ್ಲ, ರೋವರ್ ಇದೆ. ಎಂಜಿನಿಯರಿಂಗ್ ಗಮನಾರ್ಹವಾಗಿ ವಿಭಿನ್ನವಾಗಿದೆ. ಕಳೆದ ಬಾರಿಯಂತೆ ಸಮಸ್ಯೆಯಾಗದಂತೆ ಇನ್ನಷ್ಟು ಗಟ್ಟಿಗೊಳಿಸಿದ್ದೇವೆ ಎಂದು ಸೋಮನಾಥ್ ಹೇಳಿದರು. ಚಂದ್ರಯಾನ-2 ರ ಲ್ಯಾಂಡರ್ ಮತ್ತು ರೋವರ್ ಅಪಘಾತಕ್ಕೀಡಾಗಿದ್ದರೂ, ಆರ್ಬಿಟರ್ ಇನ್ನೂ ಚಂದ್ರನ ಮೇಲ್ಮೈ ಮೇಲೆಯೇ ಇದೆ ಮತ್ತು ಇಸ್ರೋ ಇದನ್ನು ಚಂದ್ರಯಾನ -3 ರೊಂದಿಗೆ ಬಳಸಲು ಯೋಜಿಸಿದೆ.

ಪ್ರಯಾಣಿಸಬೇಕಾದ ಎತ್ತರವನ್ನು ಲೆಕ್ಕಾಚಾರ ಮಾಡಲು, ಅಪಾಯ-ಮುಕ್ತ ಸ್ಥಳಗಳನ್ನು ಗುರುತಿಸಲು ಮತ್ತು ಉತ್ತಮ ಸಾಫ್ಟ್‌ವೇರ್ ಹೊಂದಲು ರೋವರ್ ಕೂ ವಿಭಿನ್ನ ವಿಧಾನಗಳನ್ನು ಹೊಂದಿರುತ್ತದೆ ಎಂದು ಇಸ್ರೋ ಮುಖ್ಯಸ್ಥರು ತಿಳಿಸಿದರು.

ಅನೇಕ ಬದಲಾವಣೆ ನಡೆದಿದೆ, ಇಂಪೆಕ್ಟ್ ಲೆಗ್​ಗಳು ಬಲವಾಗಿರುತ್ತವೆ. ಇದು ಉತ್ತಮವಾದ ಉಪಕರಣವನ್ನು ಹೊಂದಿರುತ್ತದೆ. ಏನಾದರೂ ವಿಫಲವಾದಲ್ಲಿ, ಬೇರೆ ಯಾವುದನ್ನಾದರೂ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:14 am, Mon, 24 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ