AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಕೋಮಾದಲ್ಲಿರುವ ಭಾರತೀಯ ವಿದ್ಯಾರ್ಥಿನಿ ಭೇಟಿಗೆ ತುರ್ತು ವೀಸಾ; ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ

ಭಾರತದ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಿದ ನಂತರ, ಗಾಯಗೊಂಡ ಭಾರತೀಯ ವಿದ್ಯಾರ್ಥಿಯ ಕುಟುಂಬಕ್ಕೆ ಅಮೆರಿಕದಲ್ಲಿ ವೀಸಾ ವಿತರಣೆಗೆ ತ್ವರಿತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕ್ಯಾಲಿಫೋರ್ನಿಯಾದಲ್ಲಿ 35 ವರ್ಷದ ಭಾರತೀಯ ವಿದ್ಯಾರ್ಥಿನಿ ನೀಲಂ ಶಿಂಧೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆಕೆಗೆ ಅಗತ್ಯ ವೈದ್ಯಕೀಯ ಸೌಲಭ್ಯ ಒಗದಿಸಲು ಅವರ ಕುಟುಂಬಕ್ಕೆ ತುರ್ತಾಗಿ ಅಮೆರಿಕದ ವೀಸಾಗಳು ಬೇಕಾಗಿದ್ದವು. ಇದೀಗ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಿ, ವೀಸಾ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಮೆರಿಕದ ಅಧಿಕಾರಿಗಳನ್ನು ಸಂಪರ್ಕಿಸಿತು. ಕುಟುಂಬವು ಶೀಘ್ರದಲ್ಲೇ ಅಮೆರಿಕಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ಅಮೆರಿಕದಲ್ಲಿ ಕೋಮಾದಲ್ಲಿರುವ ಭಾರತೀಯ ವಿದ್ಯಾರ್ಥಿನಿ ಭೇಟಿಗೆ ತುರ್ತು ವೀಸಾ; ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ
Neelam Shinde
ಸುಷ್ಮಾ ಚಕ್ರೆ
|

Updated on:Feb 27, 2025 | 4:29 PM

Share

ನವದೆಹಲಿ (ಫೆಬ್ರವರಿ 27): ಅಮೆರಿಕದಲ್ಲಿ ಕೋಮಾದಲ್ಲಿರುವ ಭಾರತೀಯ ವಿದ್ಯಾರ್ಥಿನಿ ನೀಲಂ ಶಿಂಧೆ ಅವರ ಕುಟುಂಬವು ಅವರನ್ನು ಭೇಟಿ ಮಾಡಲು ವೀಸಾ ಕೋರುತ್ತಿದೆ. ಅವರು ಮೊದಲು ಅಮೆರಿಕದಲ್ಲಿ (United States) ಅಪಘಾತಕ್ಕೀಡಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಈ ವಿಷಯದಲ್ಲಿ ಭಾರತದ ವಿದೇಶಾಂಗ ಸಚಿವಾಲಯ (MEA) ಮಧ್ಯಪ್ರವೇಶಿಸಿದೆ ಎಂದು ವರದಿಯಾಗಿದೆ. ಗಾಯಗೊಂಡ 35 ವರ್ಷದ ಭಾರತೀಯ ಮಹಿಳೆ ನೀಲಂ ತಾನಾಜಿ ಶಿಂಧೆ ಅವರ ಕುಟುಂಬಕ್ಕೆ ಸಾಧ್ಯವಾದಷ್ಟು ಬೇಗ ಅಮೆರಿಕಕ್ಕೆ ಪ್ರಯಾಣಿಸಲು ಅನುವು ಮಾಡಿಕೊಡಲು ಅಮೆರಿಕದ ಅಧಿಕಾರಿಗಳು ತುರ್ತು ವೀಸಾ ಪ್ರಕ್ರಿಯೆಯನ್ನು ಚುರುಕುಗೊಳಿಸುತ್ತಿದ್ದಾರೆ.

ವಿದೇಶಾಂಗ ಸಚಿವಾಲಯದ ಅಮೆರಿಕದ ವಿಭಾಗವು ಸಂಬಂಧಿತ ಅಮೆರಿಕದ ಅಧಿಕಾರಿಗಳನ್ನು ಸಂಪರ್ಕಿಸಿದೆ, ಅವರು ನೀಲಂ ಅವರ ಕುಟುಂಬಕ್ಕೆ ವೀಸಾ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಗತ್ಯವಿರುವ ಕಾರ್ಯವಿಧಾನಗಳನ್ನು ಪರಿಶೀಲಿಸುತ್ತಿದ್ದಾರೆ. ಸದ್ಯದಲ್ಲೇ ಅವರಿಗೆ ಅಮೆರಿಕಕ್ಕೆ ಪ್ರಯಾಣಿಸಲು ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನೀಲಂ ಅವರ ಕುಟುಂಬವು ಅಮೆರಿಕದ ವೀಸಾವನ್ನು ತ್ವರಿತವಾಗಿ ಪಡೆಯಲು ಕೇಂದ್ರದ ಸಹಾಯವನ್ನು ಕೋರುತ್ತಿತ್ತು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಅಮೆರಿಕಕ್ಕೆ ಹೋಗಲು ಇಬಿ-5 ವೀಸಾ ಬದಲು ಹೊಸ ಗೋಲ್ಡ್ ಕಾರ್ಡ್: ಬೆಲೆ 5 ಮಿಲಿಯನ್ ಡಾಲರ್

ಫೆಬ್ರವರಿ 14ರಂದು ಕ್ಯಾಲಿಫೋರ್ನಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೂಳೆ ಮುರಿತಕ್ಕೊಳಗಾದ ನಂತರ ಕೋಮಾದಲ್ಲಿರುವ ಭಾರತೀಯ ವಿದ್ಯಾರ್ಥಿನಿ ನೀಲಂ ಶಿಂಧೆ (35) ಅವರ ಕುಟುಂಬವು ಆಕೆಯೊಂದಿಗೆ ಇರಲು ವೀಸಾಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಮಹಾರಾಷ್ಟ್ರದ ಸತಾರದವರಾದ ನೀಲಂ ಶಿಂಧೆ ಅವರ ಎದೆ ಮತ್ತು ತಲೆಗೆ ಗಾಯಗಳಾಗಿವೆ. ಇದಾದ ಎರಡು ದಿನಗಳ ನಂತರ ಅವರ ಕುಟುಂಬಕ್ಕೆ ಅಪಘಾತದ ಬಗ್ಗೆ ತಿಳಿದುಬಂದಿದೆ. ಆಸ್ಪತ್ರೆಯು ಅವರ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲು ಅನುಮತಿ ಕೋರಿದೆ. ಇದೀಗ ನೀಲಂ ಕೋಮಾದಲ್ಲಿದ್ದಾರೆ. ಹೀಗಾಗಿ, ಆಕೆಯ ಕುಟುಂಬಸ್ಥರು ತುರ್ತಾಗಿ ಅಮೆರಿಕಕ್ಕೆ ತೆರಳಬೇಕಾದ ಅನಿವಾರ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Thu, 27 February 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ