ಕೊರೊನಾದಿಂದ ವಿದೇಶಗಳಿಗೆ ಹೋಗಲಾಗದೇ ಇರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ ನೀಡಲು ವಿದೇಶಾಂಗ ಇಲಾಖೆ ಸೂಚನೆ

ವಿದ್ಯಾರ್ಥಿಗಳು ಇಲಾಖೆಗೆ ಮಾಹಿತಿ ನೀಡಲು ವಿಧಾನವನ್ನು ಕೂಡ ವಿದೇಶಾಂಗ ಇಲಾಖೆ ಹೇಳಿದೆ. us.oia2@mea.gov.in ಇ ಮೇಲ್​ಗೆ ಮೇಲ್ ಮಾಡಲು ವಿದೇಶಾಂಗ ಇಲಾಖೆ ತಿಳಿಸಿದೆ.

ಕೊರೊನಾದಿಂದ ವಿದೇಶಗಳಿಗೆ ಹೋಗಲಾಗದೇ ಇರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ ನೀಡಲು ವಿದೇಶಾಂಗ ಇಲಾಖೆ ಸೂಚನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Jun 05, 2021 | 5:12 PM

ದೆಹಲಿ: ವಿದೇಶಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ ನೀಡಿ ಎಂದು ಭಾರತೀಯ ವಿದೇಶಾಂಗ ಇಲಾಖೆ ಸೂಚನೆ ನೀಡಿದೆ. ಕೊರೊನಾದಿಂದ ವಿದೇಶಗಳಿಗೆ ಹೋಗಲಾಗದೇ ಇರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ‌ ನೀಡಬೇಕು. ವಿದೇಶಾಂಗ ಇಲಾಖೆಗೆ ಇ‌ ಮೇಲ್ ಮೂಲಕ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಇಲಾಖೆಗೆ ಮಾಹಿತಿ ನೀಡಲು ವಿಧಾನವನ್ನು ಕೂಡ ವಿದೇಶಾಂಗ ಇಲಾಖೆ ಹೇಳಿದೆ. us.oia2@mea.gov.in ಇ ಮೇಲ್​ಗೆ ಮೇಲ್ ಮಾಡಲು ವಿದೇಶಾಂಗ ಇಲಾಖೆ ತಿಳಿಸಿದೆ.

ಆದ್ಯತಾ ಗುಂಪಿನ ಕೋಟಾದಲ್ಲಿ ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ಮಂಗಳವಾರದಿಂಲೇ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೊವಿಡ್ ಕಾರ್ಯಪಡೆ ಅಧ್ಯಕ್ಷರಾದ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ್ ನಾರಾಯಣ ಈ ಮೊದಲು ತಿಳಿಸಿದ್ದರು.

ಬೆಂಗಳೂರಿನಲ್ಲಿ ಮೇ 31ರಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುವುದು. ಅವಶ್ಯಕತೆ ಇದ್ದವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದ್ದರು.

ಸದ್ಯದ ಸಂದರ್ಭದಲ್ಲಿ ವಿದೇಶಕ್ಕೆ ಹೋಗಬೇಕಾದರೆ ಲಸಿಕೆ ಪಡೆಯಲೇಬೇಕು ಹಾಗೂ ಆ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಹಾಗೂ ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಈಗ ಸರಕಾರ ಅವರ ಬೇಡಿಕೆಯನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು ಎಂದು ತಿಳಿಸಿದ್ದರು.

ಲಸಿಕೆ ಪಡೆಯಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯ. ಅಲ್ಲದೆ, ಸದ್ಯಕ್ಕೆ ಕೋವಿಶೀಲ್ಡ್ ಮೊದಲ ಡೋಸ್ ಪಡೆದವರ ಎರಡನೇ ಡೋಸ್ ಅಂತರವನ್ನು ಇವರ ಅನುಕೂಲಕ್ಕಾಗಿ 12 ವಾರಗಳಿಂದ ಒಂದು ತಿಂಗಳಕ್ಕೆ ಕುಗ್ಗಿಸಲಾಗಿದೆ. ಇದು ಇವರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದರು.

ಮುಖ್ಯವಾಗಿ ವ್ಯಾಕ್ಸಿನ್ ನೀಡಿದ ಬಗ್ಗೆ ಇವರಿಗೆ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು. ಅದು ಎರಡನೇ ಡೋಸ್ ಪಡೆದಾಕ್ಷಣ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಹೇಳಿದ್ದರು.

ಇದನ್ನೂ ಓದಿ: ಲಸಿಕೆ ಪ್ರವಾಸೋದ್ಯಮ: ವಿದೇಶಿಯರಿಗೆ ರಷ್ಯಾಕ್ಕೆ ಆಗಮಿಸಿ ಲಸಿಕೆ ಪಡೆಯಲು ಅವಕಾಶ ನೀಡಿದ ಅಧ್ಯಕ್ಷ ಪುಟಿನ್

ವಿದೇಶಿ ಲಸಿಕಾ ಕಂಪನಿಗಳಿಗೆ ಕೋರ್ಟ್ ಕೇಸ್​ಗಳಿಂದ ರಕ್ಷಣೆಗೆ ಒಪ್ಪಿಗೆ; ಜುಲೈ ವೇಳೆಗೆ ಭಾರತಕ್ಕೆ ಫೈಜರ್ ಲಸಿಕೆ ಸಾಧ್ಯತೆ

Published On - 5:11 pm, Sat, 5 June 21

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM