ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಾರಾಜಿಸಿತು ಭಾರತೀಯ ತ್ರಿವರ್ಣ ಧ್ವಜ

ಭಾರತವು, 2021 ಆಗಸ್ಟ್​ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ರಾಷ್ಟ್ರವಾಗಲಿದೆ. ಹಾಗೂ 2022ರ ಸಭೆಯಲ್ಲೂ ಭಾಗವಹಿಸಲಿದೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಾರಾಜಿಸಿತು ಭಾರತೀಯ ತ್ರಿವರ್ಣ ಧ್ವಜ
ಅಮೆರಿಕ-ಭಾರತ ಬಾವುಟ
Follow us
TV9 Web
| Updated By: ganapathi bhat

Updated on:Apr 06, 2022 | 11:01 PM

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಸೋಮವಾರ ಭವ್ಯವಾಗಿ ಹಾರಿಸಲಾಯಿತು. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಎರಡು ವರ್ಷಗಳ ಅವಧಿಯ ಸದಸ್ಯ ರಾಷ್ಟ್ರವಾಗಿ ಭಾರತವು ಆಯಕಟ್ಟಿನ ಸ್ಥಾನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಸಂಸ್ಥೆಯ ಅಂಗವಾದ ಭದ್ರತಾ ಮಂಡಳಿಯಲ್ಲಿ ಭಾರತ ಸ್ಥಾನ ಪಡೆದಿದೆ.

ಭಾರತವು, 2021 ಆಗಸ್ಟ್​ನಲ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ರಾಷ್ಟ್ರವಾಗಲಿದೆ. ಹಾಗೂ 2022ರ ಸಭೆಯಲ್ಲೂ ಭಾಗವಹಿಸಲಿದೆ. ಪ್ರತೀ ಸದಸ್ಯ ರಾಷ್ಟ್ರವು ಒಂದು ತಿಂಗಳ ಅವಧಿಗೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದೆ. ಇಂಗ್ಲಿಷ್ ವರ್ಣಮಾಲೆಯ ಅನುಸಾರ ಅಧ್ಯಕ್ಷ ಸ್ಥಾನ ಸಿಗಲಿದೆ. ಅದರಂತೆ, ಭಾರತಕ್ಕೆ ಈ ವರ್ಷದ ಆಗಸ್ಟ್​ನಲ್ಲಿ ಅಧ್ಯಕ್ಷ ಸ್ಥಾನ ಲಭಿಸಲಿದೆ.

ವಿಶ್ವ ಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ರಾಯಭಾರಿ ಟಿ.ಎಸ್. ತಿರುಮೂರ್ತಿ ಭಾರತದ ಧ್ವಜವನ್ನು ಭದ್ರತಾ ಮಂಡಳಿಯಲ್ಲಿ ಅಳವಡಿಸಿ, ಪ್ರಾತಿನಿಧಿಕ ಮಾತುಗಳನ್ನಾಡಿದರು. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯತ್ವವು ಭಾರತಕ್ಕೆ ಎಂಟನೇ ಬಾರಿಗೆ ಲಭ್ಯವಾಗುತ್ತಿದೆ. ಇಂಥಾ ಸಂತಸದ ಸಂದರ್ಭದಲ್ಲಿ ಭಾರತೀಯ ರಾಯಭಾರಿಯಾಗಿ ನಾನು ಈ ಸ್ಥಾನದಲ್ಲಿ ಇರುವುದು ಗೌರವಪೂರ್ಣ ವಿಷಯವಾಗಿದೆ ಎಂದು ಟಿ.ಎಸ್. ತಿರುಮೂರ್ತಿ ಹೆಮ್ಮೆಯಿಂದ ತಿಳಿಸಿದರು.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ

Published On - 11:24 am, Tue, 5 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್