AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೂ ಸಮೋಸಾ, ಜಿಲೇಬಿ, ಪಕೋಡ ಇಷ್ಟಾನಾ? ತಿಂಡಿ ಪ್ರಿಯರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ

ಏಮ್ಸ್ ನಾಗ್ಪುರದಿಂದ ಪ್ರಾರಂಭಿಸಿ ಆರೋಗ್ಯ ಸಚಿವಾಲಯವು ಸಮೋಸಾ ಮತ್ತು ಜಿಲೇಬಿಗಳಂತಹ ಹೆಚ್ಚಿನ ಕೊಬ್ಬು ಮತ್ತು ಹೆಚ್ಚಿನ ಸಕ್ಕರೆ ಅಂಶವಿರುವ ಆಹಾರಗಳಿಗೆ ಆರೋಗ್ಯ ಅಲರ್ಟ್ ಹೊರಡಿಸುತ್ತಿದೆ. ಬೊಜ್ಜುತನವನ್ನು ನಿಗ್ರಹಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮೇಲೆ ಎಚ್ಚರಿಕೆ ಸ್ಟಿಕರ್ ಅಥವಾ ಫಲಕಗಳನ್ನು ಹಾಕುವ ವಿಧಾನದಂತೆ ದೇಶದ ಎಲ್ಲಾ ಸರ್ಕಾರಿ ಕ್ಯಾಂಟೀನ್‌ಗಳು ಮತ್ತು ರೆಸ್ಟೋರೆಂಟ್‌ಗಳ ಗೋಡೆಗಳ ಮೇಲೆ ಸಮೋಸಾ ಮತ್ತು ಜಿಲೇಬಿ ಕುರಿತು ಆರೋಗ್ಯದ ಎಚ್ಚರಿಕೆ ಫಲಕಗಳನ್ನು ಹಾಕುವುದು ಕಡ್ಡಾಯವಾಗಲಿದೆ.

ನಿಮಗೂ ಸಮೋಸಾ, ಜಿಲೇಬಿ, ಪಕೋಡ ಇಷ್ಟಾನಾ? ತಿಂಡಿ ಪ್ರಿಯರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ
Jalebi, Samosa
ಸುಷ್ಮಾ ಚಕ್ರೆ
|

Updated on:Jul 14, 2025 | 5:25 PM

Share

ನವದೆಹಲಿ, ಜುಲೈ 14: ನಾವು ಬಹಳ ಇಷ್ಟಪಟ್ಟು ತಿನ್ನುವ ಕೆಲವು ಆಹಾರಗಳು ನಮಗೇ ಗೊತ್ತಿಲ್ಲದಂತೆ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರತೊಡಗುತ್ತವೆ. ಅನಾರೋಗ್ಯಕರ ಆಹಾರದ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಕ್ರಮದಲ್ಲಿ ಕೇಂದ್ರ ಸರ್ಕಾರ ಸಮೋಸಾ (Samosa) , ಜಿಲೇಬಿ (Jalebi), ಪಕೋಡಾ, ವಡಾ ಪಾವ್ (Vada Pav) ಮತ್ತು ಬಿಸ್ಕತ್ತುಗಳಂತಹ ಜನಪ್ರಿಯ ತಿಂಡಿಗಳ ಬಗ್ಗೆ ಜನರಿಗೆ ಅದರ ಆರೋಗ್ಯ ಸಮಸ್ಯೆಗಳನ್ನು ತಿಳಿಸಬೇಕೆಂಬ ಕಾರಣದಿಂದ ಶೀಘ್ರದಲ್ಲೇ ಸಿಗರೇಟ್ ರೀತಿಯ ಆರೋಗ್ಯ ಅಲರ್ಟ್​ಗಳನ್ನು (Health Alert) ನೀಡಲಿದೆ. ಹೇಗೆ ತಂಬಾಕು ಉತ್ಪನ್ನಗಳ ಮೇಲೆ ಆರೋಗ್ಯಕ್ಕೆ ಅಪಾಯಕಾರಿ ಎಂಬ ಅಲರ್ಟ್ ಇರುತ್ತದೆಯೋ ಅದೇರೀತಿ ಈ ಎಲ್ಲ ತಿಂಡಿಗಳ ಬಗ್ಗೆ ಸರ್ಕಾರಿ ಕ್ಯಾಂಟೀನ್ ಮತ್ತು ರೆಸ್ಟೋರೆಂಟ್​​ಗಳಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕುವುದು ಕಡ್ಡಾಯ ಎಂದು ಭಾರತ ಸರ್ಕಾರ ಘೋಷಿಸಿದೆ.

ಜೀವನಶೈಲಿಯ ಕಾಯಿಲೆಗಳಿಗೆ ನಿಕಟ ಸಂಬಂಧ ಹೊಂದಿರುವ ಈ ಆಹಾರಗಳಲ್ಲಿ ಎಣ್ಣೆ, ಸಕ್ಕರೆ ಮತ್ತು ಟ್ರಾನ್ಸ್ ಕೊಬ್ಬಿನ ಹೆಚ್ಚಿನ ಮಟ್ಟ ಇರುತ್ತದೆ. ಈ ಅಭಿಯಾನವನ್ನು ಮೊದಲು ನಾಗ್ಪುರದಲ್ಲಿ ಪ್ರಾರಂಭಿಸಲಾಗುತ್ತಿದೆ. ಅಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS ನಾಗ್ಪುರ) ಈ ಉಪಕ್ರಮದ ಆರಂಭಿಕ ಸ್ಥಳವಾಗಿ ಕಾರ್ಯನಿರ್ವಹಿಸುತ್ತದೆ. ಈ ಕ್ಯಾಂಪಸ್‌ನಲ್ಲಿರುವ ಕೆಫೆಟೇರಿಯಾಗಳು ಮತ್ತು ಸಾರ್ವಜನಿಕ ಊಟದ ಸ್ಥಳಗಳು, ಫುಡ್ ಕೌಂಟರ್‌ಗಳ ಪಕ್ಕದಲ್ಲಿ ಈ ಎಚ್ಚರಿಕೆ ಫಲಕಗಳನ್ನು ಪ್ರದರ್ಶಿಸಲಾಗುತ್ತದೆ.

ಭಾರತವು ದಿನದಿಂದ ದಿನಕ್ಕೆ ಆರೋಗ್ಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೊಜ್ಜು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗಗಳು ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರವು ಜನರು ತಮ್ಮ ತಟ್ಟೆಯಲ್ಲಿ ಏನಿದೆ ಎಂಬುದರತ್ತ ಗಮನ ಹರಿಸಬೇಕೆಂದು ಒತ್ತಾಯಿಸುತ್ತಿದೆ. ಕರಿದ ಮತ್ತು ಸಕ್ಕರೆ ತಿಂಡಿಗಳ ಸೇವನೆಯು ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿದೆ. 2050ರ ವೇಳೆಗೆ ಅಂದಾಜು 440 ಮಿಲಿಯನ್ ಭಾರತೀಯರು ಅಧಿಕ ತೂಕ ಅಥವಾ ಬೊಜ್ಜು ಹೊಂದಿರಬಹುದು ಎಂದು ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ಪ್ರಕಟವಾದ ಜಾಗತಿಕ ವಿಶ್ಲೇಷಣೆ ಅಂದಾಜಿಸಿದೆ. ಹೀಗಾಗಿ, ಜನರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಇದನ್ನೂ ಓದಿ: Heart Health: ಹೃದಯದ ಆರೋಗ್ಯಕ್ಕೂ ಬೇಕು ಕಾಳಜಿ !

AIIMS ನಾಗ್ಪುರದಂತಹ ಸರ್ಕಾರಿ ಸ್ಥಳಗಳ ರೆಸ್ಟೋರೆಂಟ್, ಕ್ಯಾಂಟೀನ್​ಗಳಲ್ಲಿ ದೊಡ್ಡದಾದ ಎಚ್ಚರಿಕೆ ಪೋಸ್ಟರ್‌ಗಳು, ಸಕ್ಕರೆ, ಕೊಬ್ಬು ಮತ್ತು ಟ್ರಾನ್ಸ್ ಕೊಬ್ಬಿನ ಅಂಶದ ಬಗ್ಗೆ ಸ್ಪಷ್ಟ ಮಾಹಿತಿ, ಪದೇ ಪದೇ ಅದರ ಸೇವನೆಯಿಂದ ಉಂಟಾಗುವ ದೀರ್ಘಕಾಲೀನ ಆರೋಗ್ಯ ಅಪಾಯಗಳನ್ನು ವಿವರಿಸುವ ಸಂದೇಶಗಳನ್ನು ಹಾಕಲಾಗುವುದು. ಈ ಎಚ್ಚರಿಕೆಗಳನ್ನು ಸಿಗರೇಟ್ ಪ್ಯಾಕೇಜಿಂಗ್‌ನಲ್ಲಿನ ಎಚ್ಚರಿಕೆಗಳಂತೆಯೇ ನೇರ ಮತ್ತು ಪ್ರಭಾವಶಾಲಿಯಾಗಿ ವಿನ್ಯಾಸಗೊಳಿಸಲಾಗಿದೆ. ಹಾಗಂತ ಈ ಜಿಲೇಬಿ, ಪಕೋಡದಂತಹ ತಿಂಡಿಗಳನ್ನು ಸರ್ಕಾರ ನಿಷೇಧಿಸಿಲ್ಲ. ಅದರ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಸಮೋಸಾ ಮತ್ತು ಜಿಲೇಬಿಗಳು ಇನ್ನೂ ಲಭ್ಯವಿರುತ್ತವೆ. ಆದರೆ ಗ್ರಾಹಕರು ಏನು ತಿನ್ನುತ್ತಿದ್ದಾರೆ ಎಂಬುದರ ಕುರಿತು ಅವರಿಗೆ ತಿಳಿಸುವ ಉದ್ದೇಶದಿಂದ ಫಲಕಗಳನ್ನು ಹಾಕಲಾಗುವುದು. ಈ ಆಹಾರಗಳ ಮೇಲೆ ನಿರ್ಬಂಧವಲ್ಲ, ಇವುಗಳ ಮಿತವಾದ ಸೇವನೆಯನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಎಚ್ಚರಿಕೆ ಲೇಬಲ್ ಅಭಿಯಾನವು ಮುಂಬರುವ ತಿಂಗಳುಗಳಲ್ಲಿ ಇತರ ನಗರಗಳು ಮತ್ತು ಸಂಸ್ಥೆಗಳಿಗೆ ವಿಸ್ತರಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಾವೆಲ್ಲರೂ ಒಗ್ಗೂಡಿ ‘ಫಿಟ್ ಇಂಡಿಯಾ’ನಿರ್ಮಿಸೋಣ” ಪ್ರಧಾನಿ ಮೋದಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಬಂದಿರುವ ಆದೇಶದಲ್ಲಿ ಸಮೋಸಾ ಮತ್ತು ಜಿಲೇಬಿಯಂತಹ ಆಹಾರ ಪದಾರ್ಥಗಳ ಬಳಿ ಈಗ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದು ಉಲ್ಲೇಖಿಸಲಾಗಿದೆ ಎಂದು ನಾಗ್ಪುರದ ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಅಮರ್ ಆಮ್ಲೆ ಹೇಳಿದ್ದಾರೆ. ಇದರ ಹಿಂದಿನ ಉದ್ದೇಶವೆಂದರೆ ಜನರು ತಮ್ಮ ಆರೋಗ್ಯದ ಬಗ್ಗೆ ತಿಳಿದಿರಬೇಕು ಎಂಬುದು. ಸಮೋಸಾ ಮತ್ತು ಜಿಲೇಬಿ ತಿನ್ನುವಾಗ ಜನರು ತಾವು ತಿನ್ನುವ ಆಹಾರದಲ್ಲಿ ಎಷ್ಟು ಸಕ್ಕರೆ, ಎಣ್ಣೆ ಮತ್ತು ಕೊಬ್ಬು ಇದೆ ಎಂದು ತಿಳಿದುಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಫಿಟ್ ಇಂಡಿಯಾದ ಉಪಕ್ರಮವನ್ನು ತೆಗೆದುಕೊಂಡಿದ್ದಾರೆ, ಇದರ ಅಡಿಯಲ್ಲಿ ಆರೋಗ್ಯ ಸಚಿವಾಲಯದ ಪರವಾಗಿ ಸರ್ಕಾರವು ಬಹಳ ದೊಡ್ಡ ಹೆಜ್ಜೆಯನ್ನು ತೆಗೆದುಕೊಂಡಿದೆ ಎಂದು ಡಾ. ಅಮರ್ ಆಮ್ಲೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:24 pm, Mon, 14 July 25

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ