Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು

ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ. 

Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು
ಏರ್ ಇಂಡಿಯಾ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 08, 2023 | 1:19 PM

ದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ​​​ಏರ್ ಇಂಡಿಯಾ (Air India) ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ರಷ್ಯಾದ ಮಗದನ್‌ಗೆ ತಿರುಗಿಸಲಾಗಿತ್ತು. ನಂತರ ರಷ್ಯಾದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿತ್ತು. ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI173 ಎಂಜಿನ್‌ನಲ್ಲಿ ತಾಂತ್ರಿಕ ದೋಷವನ್ನು ಪತ್ತೆ ಮಾಡಿ ಅಭಿವೃದ್ಧಿಪಡಿಸಲಾಗಿತ್ತು. 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಹೇಳಿದರು. ವಿಮಾನದ ತಾಂತ್ರಿಕ ದೋಷದ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದರು, ನಂತರ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದು, ಇದೀಗ ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ.

ಇದನ್ನೂ ಓದಿ:Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನದಲ್ಲಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ ಹಲವು ಪ್ರಯಾಣಿಕರು ಭಾಷೆಯ ಸಮಸ್ಯೆ ಎದುರಿಸುತ್ತಿದ್ದು ಪರಿಚಯವಿಲ್ಲದ ಊರಲ್ಲಿ ಆಹಾರ, ಉಳಿದುಕೊಳ್ಳಲು ಸರಿಯಾದ ಜಾಗವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ರಷ್ಯಾದಿಂದ ಎನ್‌ಡಿಟಿವಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ವಿಮಾನದಲ್ಲಿದ್ದ ಪ್ರಯಾಣಿಕ ಗಗನ್, ಪರಿಸ್ಥಿತಿಯನ್ನು ಸವಾಲಿನದ್ದು ಎಂದು ಅಲ್ಲಿನ ಸೌಲಭ್ಯಗಳ ಕೊರತೆಯನ್ನು ವಿವರಿಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್