AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ

Omicron Cases In India: ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್​ ಸೋಂಕು ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಕರ್ನಾಟಕದ ಬೆಂಗಳೂರಿನಲ್ಲಿ. ಇಲ್ಲಿ ಇಬ್ಬರಲ್ಲಿ ವೈರಸ್ ದೃಢಪಟ್ಟ ಮರುದಿನ ಗುಜರಾತ್​​ 75ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್​ ಪತ್ತೆಯಾಗಿತ್ತು

Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 05, 2021 | 12:10 PM

Share

ಭಾರತದಲ್ಲಿ ಒಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೆ ಏರಿಕೆಯಾಗುತ್ತಿವೆ. ಇದೀಗ ದೆಹಲಿಯಲ್ಲಿ 5ನೇ ಕೇಸ್​ ಪತ್ತೆಯಾಗಿದೆ. ದೆಹಲಿಯಲ್ಲಿ ಮೊದಲನೇ  ಒಮಿಕ್ರಾನ್​ ಪ್ರಕರಣ ಕಾಣಿಸಿಕೊಂಡಿದೆ. ಸೋಂಕಿತನನ್ನು ಎಲ್​​ಎನ್​​ಜೆಪಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಟಾಂಜಾನಿಯದಿಂದ ಬಂದವರಾಗಿದ್ದರು. ಹಾಗೇ, ಇನ್ನೂ 17 ಮಂದಿಯಲ್ಲಿ ಕೊವಿಡ್​ 19 ಸೋಂಕು ಕಾಣಿಸಿಕೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ತಿಳಿಸಿದ್ದಾರೆ. 

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್​ ಸೋಂಕು ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಕರ್ನಾಟಕದ ಬೆಂಗಳೂರಿನಲ್ಲಿ. ಇಲ್ಲಿ ಇಬ್ಬರಲ್ಲಿ ವೈರಸ್ ದೃಢಪಟ್ಟ ಮರುದಿನ ಗುಜರಾತ್​​ 75ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್​ ಪತ್ತೆಯಾಗಿತ್ತು. ಅವರು ಜಿಂಬಾಬ್ವೆಯಿಂದ ಗುಜರಾತ್​ನ ಜಾಮ್​ನಗರಕ್ಕೆ ಬಂದವರಾಗಿದ್ದರು. ಹಾಗೇ, ನಿನ್ನೆ ಮಹಾರಾಷ್ಟ್ರದ ದೊಂಬಿವ್ಲಿಯ 33ವರ್ಷದ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್​ ದೃಢಪಟ್ಟಿತ್ತು. ಅವರ ಜತೆಗೆ ಬಂದವರನ್ನೆಲ್ಲ ಟ್ರೇಸ್​ ಮಾಡಿ ತಪಾಸಣೆಗೆ ಒಳಪಡಿಸಲಾಗಿದೆ. ಅವರು ದಕ್ಷಿಣ ಆಫ್ರಿಕಾದ ಕೇಪ್​ಟೌನ್​​ನಿಂದ ದುಬೈ ಮಾರ್ಗವಾಗಿ ಮುಂಬೈಗೆ ಬಂದಿಳಿದಿದ್ದರು. ಇಂದು 5ನೇ ಕೇಸ್​ ದೆಹಲಿಯಲ್ಲಿ ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.

ಒಮಿಕ್ರಾನ್​ ಈಗಾಗಲೇ 30ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಮುನ್ನೆಚ್ಚರಿಕೆ ವಹಿಸಿದೆ. ಈ ಸೋಂಕು ಅಷ್ಟೊಂದು ಮಾರಣಾಂತಿಕವಲ್ಲದೆ ಇದ್ದರೂ, ಮೂರನೇ ಅಲೆ ಉಂಟು ಮಾಡುವಷ್ಟು ಪ್ರಸರಣ ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಮಧ್ಯೆ ಭಾರತದಲ್ಲೂ ಕೂಡ ಒಮಿಕ್ರಾನ್​ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್

Published On - 11:49 am, Sun, 5 December 21

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ