ಭಾರತದಲ್ಲಿ ಒಮಿಕ್ರಾನ್ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೆ ಏರಿಕೆಯಾಗುತ್ತಿವೆ. ಇದೀಗ ದೆಹಲಿಯಲ್ಲಿ 5ನೇ ಕೇಸ್ ಪತ್ತೆಯಾಗಿದೆ. ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್ ಪ್ರಕರಣ ಕಾಣಿಸಿಕೊಂಡಿದೆ. ಸೋಂಕಿತನನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಟಾಂಜಾನಿಯದಿಂದ ಬಂದವರಾಗಿದ್ದರು. ಹಾಗೇ, ಇನ್ನೂ 17 ಮಂದಿಯಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್ ಸೋಂಕು ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಕರ್ನಾಟಕದ ಬೆಂಗಳೂರಿನಲ್ಲಿ. ಇಲ್ಲಿ ಇಬ್ಬರಲ್ಲಿ ವೈರಸ್ ದೃಢಪಟ್ಟ ಮರುದಿನ ಗುಜರಾತ್ 75ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿತ್ತು. ಅವರು ಜಿಂಬಾಬ್ವೆಯಿಂದ ಗುಜರಾತ್ನ ಜಾಮ್ನಗರಕ್ಕೆ ಬಂದವರಾಗಿದ್ದರು. ಹಾಗೇ, ನಿನ್ನೆ ಮಹಾರಾಷ್ಟ್ರದ ದೊಂಬಿವ್ಲಿಯ 33ವರ್ಷದ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್ ದೃಢಪಟ್ಟಿತ್ತು. ಅವರ ಜತೆಗೆ ಬಂದವರನ್ನೆಲ್ಲ ಟ್ರೇಸ್ ಮಾಡಿ ತಪಾಸಣೆಗೆ ಒಳಪಡಿಸಲಾಗಿದೆ. ಅವರು ದಕ್ಷಿಣ ಆಫ್ರಿಕಾದ ಕೇಪ್ಟೌನ್ನಿಂದ ದುಬೈ ಮಾರ್ಗವಾಗಿ ಮುಂಬೈಗೆ ಬಂದಿಳಿದಿದ್ದರು. ಇಂದು 5ನೇ ಕೇಸ್ ದೆಹಲಿಯಲ್ಲಿ ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.
ಒಮಿಕ್ರಾನ್ ಈಗಾಗಲೇ 30ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಮುನ್ನೆಚ್ಚರಿಕೆ ವಹಿಸಿದೆ. ಈ ಸೋಂಕು ಅಷ್ಟೊಂದು ಮಾರಣಾಂತಿಕವಲ್ಲದೆ ಇದ್ದರೂ, ಮೂರನೇ ಅಲೆ ಉಂಟು ಮಾಡುವಷ್ಟು ಪ್ರಸರಣ ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಮಧ್ಯೆ ಭಾರತದಲ್ಲೂ ಕೂಡ ಒಮಿಕ್ರಾನ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್
Published On - 11:49 am, Sun, 5 December 21