AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ! ನೆರೆ ರಾಷ್ಟ್ರದ ನಿದ್ದೆಗೆಡಿಸಿದ ಭಾರತದ 9 ನಿರ್ಧಾರಗಳು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧಕ್ಕಿಂತಲೂ ಹೆಚ್ಚು ಪರಿಣಾಮಕಾರಿಯಾದ 9 ತಂತ್ರಗಳನ್ನು ಅನುಸರಿಸಿದೆ. ಭಾರತದ ದಿಟ್ಟ ಕ್ರಮಗಳು ಪಾಕಿಸ್ತಾನದ ಮೇಲೆ ಆರ್ಥಿಕ ಮತ್ತು ರಾಜಕೀಯ ಒತ್ತಡ ಹೇರಿದೆ. ಭಾರತದ ನಿರ್ಧಾರಗಳು ಪಾಕಿಸ್ತಾನದ ಉಗ್ರಗಾಮಿಗಳನ್ನು ಪೋಷಿಸುವ ನೀತಿಗೆ ತೀವ್ರ ಹೊಡೆತ ನೀಡಿವೆ. ಹಾಗಾದರೆ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಲು ಭಾರತ ಕೈಗೊಂಡ ಆ 9 ನಿರ್ಧಾರಗಳು ಯಾವುವು? ಇಲ್ಲಿದೆ ಮಾಹಿತಿ.

ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ! ನೆರೆ ರಾಷ್ಟ್ರದ ನಿದ್ದೆಗೆಡಿಸಿದ ಭಾರತದ 9 ನಿರ್ಧಾರಗಳು
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತ
Ganapathi Sharma
|

Updated on:May 03, 2025 | 10:17 AM

Share

ನವದೆಹಲಿ, ಮೇ 3: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ (Pahalgam Attack) ಬಳಿಕ ಭಾರತ ಮತ್ತು ಪಾಕಿಸ್ತಾನದ (Pakistan) ನಡುವೆ ಯುದ್ಧ ಭೀತಿ ಆವರಿಸಿದೆ. ಯಾವುದೇ ಕ್ಷಣದಲ್ಲಾದರೂ ಭಾರತೀಯ ಸೇನೆ ಪ್ರತೀಕಾರಕ್ಕೆ ಮುಂದಾಗಬಹುದು ಎಂಬ ಭೀತಿ ಪಾಕಿಸ್ತಾನವನ್ನು ಆವರಿಸಿದೆ. ಹೀಗಾಗಿ, ಸಂಭಾವ್ಯ ಯುದ್ಧ ಎದುರಿಸಲು ಪಾಕಿಸ್ತಾನ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ, ಇತ್ತ ಭಾರತ ಯುದ್ಧ ಮಾಡುವುದು ಬಿಡಿ; ಅದಕ್ಕೂ ಮೊದಲೇ ರಾಜತಾಂತ್ರಿಕ ನಿರ್ಧಾರಗಳು ಹಾಗೂ ಇತರ ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ.

ಭಾರತ ಈಗಾಗಲೇ ಕೈಗೊಂಡಿರುವ ಕೆಲವು ಕ್ರಮಗಳು ಪಾಕಿಸ್ತಾನವನ್ನು ಆರ್ಥಿಕವಾಗಿ ಮತ್ತು ಇತರ ಕೆಲವು ಆಯಾಮಗಳಲ್ಲಿ ಪ್ರಪಾತಕ್ಕೆ ತಳ್ಳಿದೆ. ಆ ಮೂಲಕ, ಉಗ್ರಗಾಮಿಗಳನ್ನು ಪೋಷಿಸುವ ಪಾಕಿಸ್ತಾನ ಸೇನೆ ಹಾಗೂ ಗುಪ್ತಚರ ಸಂಸ್ಥೆ ಐಎಸ್‌ಐಯ ಊಹೆಗೂ ನಿಲುಕದ ತಿರುಗೇಟನ್ನು ಭಾರತ ನೀಡುತ್ತಿದೆ.

ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ 9 ಕ್ರಮಗಳು

  1. ಅಟ್ಟಾರಿ-ವಾಘಾ ಗಡಿ ಬಂದ್.
  2. ಭಾರತೀಯ ರಾಜತಾಂತ್ರಿಕರ ವಾಪಸ್ ಕರೆಸಿಕೊಂಡಿರುವುದು.
  3. ಪಾಕಿಸ್ತಾನಿ ಹೈಕಮಿಷನ್‌ ಸಿಬ್ಬಂದಿ ಸಂಖ್ಯೆಯಲ್ಲಿ ಕಡಿತ.
  4. ಸಾರ್ಕ್ ವೀಸಾ ವಿನಾಯಿತಿ ನಿಷೇಧ.
  5. ಸಿಂಧೂ ನದಿ ನೀರು ಒಪ್ಪಂದ ರದ್ದು.
  6. ಪಾಕಿಸ್ತಾನದ ಡಿಜಿಟಲ್ ಮಾಧ್ಯಮ ವೇದಿಕೆಗಳಿಗೆ ನಿಷೇಧ.
  7. ಉಗ್ರರ ಹಾಗೂ ಭಯೋತ್ಪಾದಕರನ್ನು ಪೋಷಿಸುವವರ ವಿರುದ್ಧ ಯಾವುದೇ ರೀತಿಯ ಕಾರ್ಯಾಚರಣೆಗೆ ಭಾರತೀಯ ಸೇನೆಗೆ ಸಂಪೂರ್ಣ ಪರಮಾಧಿಕಾರ.
  8. ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿ ದಾಳಿ.
  9. ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯು ಪ್ರದೇಶ ನಿರ್ಬಂಧ.

ಯುದ್ಧ ಮಾಡದೆಯೇ ಪಾಕಿಸ್ತಾನದ ನಾಶ!

ಒಂದೆಡೆ ಪಾಕಿಸ್ತಾನ ಯುದ್ಧ ಭೀತಿಯಲ್ಲಿದ್ದರೆ, ಭಾರತ ಸರ್ಕಾರ ಮಾತ್ರ ಯುದ್ಧ ಮಾಡದೆಯೇ ಶತ್ರು ದೇಶದ ನಾಶಕ್ಕೆ ದಿಟ್ಟ ಹೆಜ್ಜೆ ಇಡುತ್ತಿದೆ. ಪಾಕಿಸ್ತಾನಿ ಚಿಂತಕರು ಭಾರತದ ಈ ಕ್ರಮಗಳ ನಿರೀಕ್ಷಿಸಿಯೇ ಇರಲಿಲ್ಲ. ಈಗ ಪಾಕಿಸ್ತಾನದ ಮೇಲೆ ಹೆಚ್ಚುತ್ತಿರುವ ಹೊರೆ ಅವರನ್ನು ಜಾಗೃತಗೊಳಿಸಿದೆ. ಗಡಿಯನ್ನು ಮುಚ್ಚಿ ವೀಸಾಗಳನ್ನು ಸ್ಥಗಿತಗೊಳಿಸುವ ನಿರ್ಧಾರವು ಭಾರತದಲ್ಲಿರುವ ಪಾಕಿಸ್ತಾನಿ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಚಿಕಿತ್ಸೆಗಾಗಿ ಭಾರತಕ್ಕೆ ಬರಲು ಬಯಸುವವರಿಗೂ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ
Image
ಯುದ್ಧದ ಭಯ; ಆಹಾರ ಸಂಗ್ರಹಿಸಿಟ್ಟುಕೊಳ್ಳಲು ಗಡಿಯ ಜನರಿಗೆ ಪಾಕಿಸ್ತಾನ ಸೂಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಇದನ್ನೂ ಓದಿ: ಭಾರತದಿಂದ ವೈಮಾನಿಕ ದಾಳಿ ಭೀತಿ; ಪಾಕಿಸ್ತಾನದಿಂದ ಗಡಿಯಲ್ಲಿ ತುರ್ತು ಸೈರನ್ ಅಳವಡಿಕೆ

ಭಾರತದ ವಾಯು ಪ್ರದೇಶದಲ್ಲಿ ಪಾಕಿಸ್ತಾನದ ವಿಮಾನಗಳ ಸಂಚಾರಕ್ಕೆ ನಿಷೇಧ ಹೇರಿದ್ದು ಮತ್ತು ಪಾಕಿಸ್ತಾನದ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳು ಹಾರಾಟ ನಡೆಸದೇ ಇರುವುದರಿಂದ ಆ ದೇಶಕ್ಕೆ ಭಾರಿ ನಷ್ಟವಾಗಲಿದೆ. ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸುವುದಕ್ಕಾಗಿ ಭಾರತವು ಪ್ರತಿದಿನ ಸುಮಾರು 1.15 ಕೋಟಿ ರೂ.ಗಳನ್ನು ಪಾವತಿಸುತ್ತಿತ್ತು. ಆದರೆ ಪಾಕಿಸ್ತಾನಕ್ಕೆ ಈಗ ಆ ಮೊತ್ತ ದೊರೆಯವುದಿಲ್ಲ. ಮತ್ತೊಂದೆಡೆ, ಭಾರತದ ವಾಯು ಪ್ರದೇಶದಲ್ಲಿ ಸಂಚಾರಕ್ಕೆ ಅವಕಾಶ ಇಲ್ಲದಿರುವುದರಿಂದ ಪಾಕಿಸ್ತಾನ ವಿಮಾನಗಳು ಸುತ್ತಿಬಳಸಿ ಸಂಚರಿಸಬೇಕಾಗಿದ್ದು, ಇಂಧನ ವೆಚ್ಚ ಹೆಚ್ಚಾಗಿ ನಷ್ಟವಾಗಲಿದೆ.

ಇದನ್ನೂ ಓದಿ: ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Sat, 3 May 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?