AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕತೆ ಮುಳುಗಿಸುವ ಗ್ಯಾರಂಟಿ ನೀಡುತ್ತಿದ್ದಾರೆ; ಕಾಂಗ್ರೆಸ್ ಖಾತರಿಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ

PM Modi on Congress Guarantees; ಭ್ರಷ್ಟಾಚಾರ, ನಿರುದ್ಯೋಗ, ತುಷ್ಟಿಕರಣ, ಭಯೋತ್ಪಾದನೆಯ ಗ್ಯಾರಂಟಿಯನ್ನು ಕಾಂಗ್ರೆಸ್​ನವರು ನೀಡುತ್ತಿದ್ದಾರೆ. ಇವರು ಯಾವತ್ತಿಗೂ ಭಾರತವನ್ನು ಮೂರನೇ ಬಲಿಷ್ಠ ಆರ್ಥಿಕತೆ ಮಾಡುವ ಗ್ಯಾರಂಟಿ ನೀಡುವುದಿಲ್ಲ ಎಂದು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟೀಕಾ ಪ್ರಹಾರ ನಡೆಸಿದರು. ಆ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದರು.

ಭಾರತದ ಆರ್ಥಿಕತೆ ಮುಳುಗಿಸುವ ಗ್ಯಾರಂಟಿ ನೀಡುತ್ತಿದ್ದಾರೆ; ಕಾಂಗ್ರೆಸ್ ಖಾತರಿಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ
ಲೋಕಸಭೆಯಲ್ಲಿ ಪ್ರಧಾನಿ ಮೋದಿImage Credit source: ANI
TV9 Web
| Edited By: |

Updated on:Aug 10, 2023 | 8:06 PM

Share

ನವದೆಹಲಿ: ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಸಭೆಯಲ್ಲಿ ವಾಗ್ದಾಳಿ ನಡೆಸಿದ್ದು, ಭಾರತದ ಆರ್ಥಿಕತೆ ಮುಳುಗಿಸುವ ಖಾತರಿಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ (No-Confidence motion) ಲೋಕಸಭೆಯಲ್ಲಿ ಗುರುವಾರ ಉತ್ತರಿಸಿ ಮಾತನಾಡಿದ ಅವರು, ಭ್ರಷ್ಟಾಚಾರ, ನಿರುದ್ಯೋಗ, ತುಷ್ಟಿಕರಣ, ಭಯೋತ್ಪಾದನೆಯ ಗ್ಯಾರಂಟಿಯನ್ನು ಕಾಂಗ್ರೆಸ್​ನವರು ನೀಡುತ್ತಿದ್ದಾರೆ. ಇವರು ಯಾವತ್ತಿಗೂ ಭಾರತವನ್ನು ಮೂರನೇ ಬಲಿಷ್ಠ ಆರ್ಥಿಕತೆ ಮಾಡುವ ಗ್ಯಾರಂಟಿ ನೀಡುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು. ಆ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮೋದಿ ಪರೋಕ್ಷವಾಗಿ ಪ್ರಸ್ತಾಪಿಸಿದರು.

ಮಣಿಪುರದ ಘಟನೆ ಬಗ್ಗೆ ಬುಧವಾರ ಗೃಹ ಸಚಿವ ಅಮಿತ್ ಶಾ ವಿಸ್ತಾರವಾಗಿ ಎಲ್ಲವನ್ನೂ ಹೇಳಿದ್ದಾರೆ. ಅಮಿತ್ ಶಾ ಮಾತಿನ ಬಳಿಕ ವಿಪಕ್ಷಗಳು ಎಷ್ಟು ಸುಳ್ಳು ಹೇಳಿವೆ ಎಂಬುದು ಬಯಲಾಗಿದೆ. ಮಣಿಪುರದಲ್ಲಿ ಹಿಂಸಾಚಾರ ಶುರುವಾದಗಿನಿಂದ ಬಹಳಷ್ಟು ಜನರು ತಮ್ಮವರನ್ನು ಕಳೆದುಕೊಂಡಿದ್ದಾರೆ. ಮಹಿಳೆಯರ ಜೊತೆಗೆ ಕೆಟ್ಟದಾಗಿ ನಡೆದುಕೊಳ್ಳಲಾಗಿದೆ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ಸರ್ಕಾರ ಮಾಡಲಿದೆ. ಮಾತುಕತೆ ನಡೆಯುತ್ತಿದೆ, ಶಾಂತಿ ಮರುಕಳಿಸಲಿದೆ ಎಂದು ಪ್ರಧಾನಿ ಹೇಳಿದರು.

ದೇಶ ನಿಮ್ಮ ಜೊತೆಗೆ ಇದೆ, ಸದನ ನಿಮ್ಮ ಜೊತೆಗಿದೆ. ಎಲ್ಲರೂ ಸೇರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೊಣ ಎಂದು ಮಣಿಪುರ ಜನರಲ್ಲಿ ಮೋದಿ ಮನವಿ ಮಾಡಿದರು.

ಮಣಿಪುರ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ. ಮಣಿಪುರದ ಬಗ್ಗೆ ಚರ್ಚಿಸಲು ವಿಪಕ್ಷ ನಾಯಕರಿಗೆ ಆಸಕ್ತಿ ಇಲ್ಲ. ಇಡೀ ದೇಶ ಮಣಿಪುರದ ಮಹಿಳೆಯರು, ಹೆಣ್ಮಕ್ಕಳ ಜೊತೆ ಇದೆ. ಭಾರತಕ್ಕೆ ಸೇರಿದ ದ್ವೀಪ ಪ್ರದೇಶವನ್ನು ಶ್ರೀಲಂಕಾಗೆ ನೀಡಲಾಗಿದೆ. ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ಶ್ರೀಲಂಕಾಗೆ ನೀಡಲಾಗಿತ್ತು. ಮಣಿಪುರದಲ್ಲಿ ಹಿಂಸಾಚಾರ ನಡೆಸಿದವರ ವಿರುದ್ಧ ಕ್ರಮ ಖಚಿತ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ದೇಶವೇ ನಿಮ್ಮ ಜತೆಗಿದೆ: ಮಣಿಪುರದ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಆಶ್ವಾಸನೆ ನೀಡಿದ ಮೋದಿ

ಪ್ರಜಾಪ್ರಭುತ್ವ, ಸಂವಿಧಾನ ಹತ್ಯೆ ಬಗ್ಗೆ ಮಾತನಾಡುವ ಜನರು ಇಂದು ಭಾರತ ಮಾತೆಯ ಹತ್ಯೆಯ ಬಗ್ಗೆ ಮಾತನಾಡುತ್ತಿದ್ದಾರೆ. ಅಗಸ್ಟ್ 14 ದೇಶ ವಿಭಜನೆಯ ದಿನ. ಭಾರತ‌ಮಾತೆಯನ್ನು ಮೂರು ಭಾಗಗಳಾಗಿ ಒಡೆದವರು ಇವರೇ. ಇವರು ಯಾವ ಬಾಯಿಯಿಂದ ಮಾತನಾಡುವ ಧೈರ್ಯ ಮಾಡುತ್ತಾರೆ ಎಂದು ಮೋದಿ ಕಿಡಿಕಾರಿದರು.

ಜೀವನದ ಕಣಕಣವನ್ನೂ ದೇಶಕ್ಕಾಗಿ ಮೀಸಲಿಟ್ಟಿದ್ದೇನೆ; ಮೋದಿ

ನನ್ನ ಜೀವನದ ಪ್ರತಿ ಕಣಕಣವನ್ನೂ ದೇಶಕ್ಕಾಗಿ ಮೀಸಲಿಟ್ಟಿದ್ದೇನೆ. ದೇಶದ ಜನರ ಅಭಿವೃದ್ಧಿಗಾಗಿಯೇ ನಾವು ಇರೋದು. ಇದು ನಮ್ಮ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕಾಂಗ್ರೆಸ್‌ನಿಂದ ದೇಶಕ್ಕೆ ಸಿಕ್ಕಿರುವುದು ಬರೀ ನಿರಾಶೆ ಮಾತ್ರ. ಅವಿಶ್ವಾಸ ನಿರ್ಣಯ ಮಂಡನೆಗೂ ಮುನ್ನವೇ ಸಿದ್ಧರಾಗಿ ಬನ್ನಿ ಎಂದು ಪ್ರಧಾನಿ ಅವರು ಕಾಂಗ್ರೆಸ್‌ ಹಾಗೂ ಇತರ ವಿಪಕ್ಷ ನಾಯಕರ ಕಾಲೆಳೆದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Thu, 10 August 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?