ವಾಹನ ಸವಾರರಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಆತಂಕ ಬೇಡ

ಜಾಗತಿಕ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆ ಕಡಿಮೆ. ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ ತಡೆಯಲು ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ದೇಶದಲ್ಲಿ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದ್ದು, ಇಂಧನ ಭದ್ರತೆಯಲ್ಲಿ ಭಾರತ ಸದೃಢವಾಗಿದೆ ಎಂದು ಸರ್ಕಾರ ತಿಳಿಸಿದೆ.

ವಾಹನ ಸವಾರರಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಆತಂಕ ಬೇಡ
ಸಾಂದರ್ಭಿಕ ಚಿತ್ರ
Image Credit source: Tv9 kannada

Updated on: Mar 09, 2026 | 9:27 PM

ದೆಹಲಿ, ಮಾ.9: ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದ ಬೆನ್ನಲ್ಲೇ, ಜಾಗತಿಕ ರಾಜಕೀಯ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಸರ್ಕಾರಿ ಮೂಲಗಳು ಭರವಸೆ ನೀಡಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಸ್ಪಷ್ಟಪಡಿಸಲಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ $130 (ಅಮೆರಿಕನ್ ಡಾಲರ್) ದಾಟದ ಹೊರತು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಸದ್ಯ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು $100 ಆಸುಪಾಸಿನಲ್ಲಿರಬಹುದು ಎಂದು ಅಂದಾಜಿಸಲಾಗಿದೆ.

ಇಲ್ಲಿದೆ ನೋಡಿ ಪೋಸ್ಟ್​;

ದೇಶದ ಯಾವುದೇ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನದ ಕೊರತೆ ಉಂಟಾಗುವುದಿಲ್ಲ. ನಮ್ಮಲ್ಲಿ ಬೇಕಾದಷ್ಟು ದಾಸ್ತಾನು ಲಭ್ಯವಿದೆ. ಸಂಘರ್ಷ ಪೀಡಿತ ಹಾರ್ಮುಜ್ ಜಲಸಂಧಿಯ (Strait of Hormuz) ಹೊರಗಿನ ಪರ್ಯಾಯ ಮಾರ್ಗಗಳ ಮೂಲಕ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಭಾರತ ವೇಗಗೊಳಿಸಿದೆ. ಇದು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲಿದೆ.

ಇದನ್ನೂ ಓದಿ: ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್​​​ನಲ್ಲಿ ಮಹತ್ವದ ಬದಲಾವಣೆ

ಭಾರತವು ವಿಮಾನ ಇಂಧನದ (ATF) ಉತ್ಪಾದಕ ಮತ್ತು ರಫ್ತುದಾರ ರಾಷ್ಟ್ರವಾಗಿದೆ. ನಮ್ಮಲ್ಲಿ ಎಟಿಎಫ್‌ನ ಸಾಕಷ್ಟು ದಾಸ್ತಾನು ಇರುವುದರಿಂದ ವಿಮಾನಯಾನ ಕ್ಷೇತ್ರದಲ್ಲಿ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಇಂಧನ ಭದ್ರತೆಯ ವಿಷಯದಲ್ಲಿ ಭಾರತವು ಇತರ ದೇಶಗಳಿಗಿಂತ ಉತ್ತಮ ಸ್ಥಿತಿಯಲ್ಲಿದೆ. ಇಂಧನ ದಾಸ್ತಾನು ಪಡೆಯಲು ಅನೇಕ ರಾಷ್ಟ್ರಗಳು ಈಗ ಭಾರತವನ್ನು ಸಂಪರ್ಕಿಸುತ್ತಿವೆ.ಯಾವುದೇ ರೀತಿಯ ಪ್ಯಾನಿಕ್ ಬೈಯಿಂಗ್ (ಭೀತಿಯಿಂದ ಹೆಚ್ಚಿನ ಇಂಧನ ಸಂಗ್ರಹಿಸುವುದು) ಮಾಡುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us