ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, […]

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 24, 2020 | 6:57 PM

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ.

ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, ಇದು ಸುಮಾರು 2 ಕಿ.ಮೀ ಉದ್ದವಿದ್ದು, ಇದನ್ನು ಬಳಸಿ ಸಾರ್ವಜನಿಕರು ಕೇವಲ ಏಳು ನಿಮಿಷಗಳಲ್ಲಿ ಆಚಿನ ದಡವನ್ನು ತಲುಪಬಹುದಾಗಿದೆ. ಪ್ರತಿ ರೋಪ್​ವೇ ಬೋಗಿ 32 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಆದರೆ ಈಗ ಕೊರೊನಾ ಸೋಂಕಿನಿಂದಾಗಿ ಕೇವಲ 15 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪ್ರತಿಯೊಬ್ಬ ಪ್ರಯಾಣಿಕನೂ ಇದರಲ್ಲಿ ಓಡಾಡಲು ರಕ್ಷಣಾ ಸಾಧನ (safety gear) ಧರಿಸಬೇಕಾಗಿದೆ. ಸವಾರಿಯ ಒಂದು ಮಾರ್ಗಕ್ಕೆ 60 ರೂಪಾಯಿ ಮತ್ತು ದ್ವಿಮುಖ ಪ್ರಯಾಣಕ್ಕೆ 100 ರೂಪಾಯಿ ದರ ನಿಗದಿ ಮಾಡಲಾಗಿದೆ. ಜೊತೆಗೆ, ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್‌ಗಳನ್ನು ಸಹ ಪಡೆಯಲು ಅವಕಾಶವಿದೆ.

ರೋಪ್‌ವೇ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಲಿದ್ದು, ರೋಪ್‌ವೇ ಸೇವೆಯ ಮೇಲ್ವಿಚಾರಣೆಗಾಗಿ 58 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಒಟ್ಟಾರೆ, 56 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸಂಪೂರ್ಣ ಯೋಜನೆಯನ್ನು ನಿರ್ಮಿಸಲಾಗಿದೆ.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ