ಭಾರತದ ಕ್ಷಿಪಣಿ ವ್ಯವಸ್ಥೆ ಅತ್ಯಂತ ವಿಶ್ವಾಸಾರ್ಹ, ಸುರಕ್ಷಿತ: ರಾಜ್ಯಸಭೆಯಲ್ಲಿ ರಾಜನಾಥ ಸಿಂಗ್

ದಿನನಿತ್ಯದ ನಿರ್ವಹಣೆ ಮತ್ತು ತಪಾಸಣೆಯ ಸಮಯದಲ್ಲಿ, ಆಕಸ್ಮಿಕವಾಗಿ ರಾತ್ರಿ 7 ಗಂಟೆಗೆ ಕ್ಷಿಪಣಿ ಹಾರಿದೆ. ನಂತರ ಕ್ಷಿಪಣಿ ಪಾಕಿಸ್ತಾನದ ಭೂಪ್ರದೇಶದೊಳಗೆ ಬಂದಿಳಿದಿದೆ ಎಂದು ತಿಳಿದುಬಂದಿದೆ. ಈ ಘಟನೆಗೆ ವಿಷಾದವಿದೆ ಆದರೆ, ಅಪಘಾತದಿಂದ ಯಾರಿಗೂ ಗಾಯವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ.

ಭಾರತದ ಕ್ಷಿಪಣಿ ವ್ಯವಸ್ಥೆ ಅತ್ಯಂತ ವಿಶ್ವಾಸಾರ್ಹ, ಸುರಕ್ಷಿತ: ರಾಜ್ಯಸಭೆಯಲ್ಲಿ ರಾಜನಾಥ ಸಿಂಗ್
ರಾಜನಾಥ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 15, 2022 | 4:03 PM

ದೆಹಲಿ: ಮಾರ್ಚ್ 9 ರಂದು ಪಾಕಿಸ್ತಾನದ (Pakistan) ನೆಲಕ್ಕೆ ಹಾರಿದ ಭಾರತದ ನಿರಾಯುಧ ಸೂಪರ್-ಸಾನಿಕ್ ಕ್ಷಿಪಣಿ (missile) ‘ಆಕಸ್ಮಿಕವಾಗಿ’ ಉಡಾವಣೆಯಾದ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಮಂಗಳವಾರ ಸಂಸತ್​ಗೆ ತಿಳಿಸಿದರು. ಭಾರತದ ಕ್ಷಿಪಣಿ ವ್ಯವಸ್ಥೆಗಳು ವಿಶ್ವಾಸಾರ್ಹ ಮತ್ತು ಸುರಕ್ಷಿತವಾಗಿದೆ ಎಂದು ಸದನಕ್ಕೆ ಭರವಸೆ ನೀಡಿದ ಸಿಂಗ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ. ಮಂಗಳವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ ಸಿಂಗ್, “ದಿನನಿತ್ಯದ ನಿರ್ವಹಣೆ ಮತ್ತು ತಪಾಸಣೆಯ ಸಮಯದಲ್ಲಿ, ಆಕಸ್ಮಿಕವಾಗಿ ರಾತ್ರಿ 7 ಗಂಟೆಗೆ ಕ್ಷಿಪಣಿ ಹಾರಿದೆ. ನಂತರ ಕ್ಷಿಪಣಿ ಪಾಕಿಸ್ತಾನದ ಭೂಪ್ರದೇಶದೊಳಗೆ ಬಂದಿಳಿದಿದೆ ಎಂದು ತಿಳಿದುಬಂದಿದೆ. ಈ ಘಟನೆಗೆ ವಿಷಾದವಿದೆ ಆದರೆ, ಅಪಘಾತದಿಂದ ಯಾರಿಗೂ ಗಾಯವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದಿದ್ದಾರೆ. ಸರ್ಕಾರವು “ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ” ಮತ್ತು “ಔಪಚಾರಿಕ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ”. ಇದು “ಹೇಳಲಾದ ಘಟನೆಯ ನಿಖರವಾದ ಕಾರಣವನ್ನು ನಿರ್ಧರಿಸುತ್ತದೆ” ಎಂದು ಸಿಂಗ್ ಸದನಕ್ಕೆ ತಿಳಿಸಿದರು. “ಈ ಘಟನೆಯ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಳು, ನಿರ್ವಹಣೆ ಮತ್ತು ತಪಾಸಣೆಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳ ಪರಿಶೀಲನೆಯನ್ನು ನಡೆಸಲಾಗುತ್ತಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಮ್ಮ ಶಸ್ತ್ರಾಸ್ತ್ರ ವ್ಯವಸ್ಥೆಗಳ ಸುರಕ್ಷತೆ ಮತ್ತು ಭದ್ರತೆಗೆ ನಾವು ಹೆಚ್ಚಿನ ಆದ್ಯತೆಯನ್ನು ನೀಡುತ್ತೇವೆ. ಯಾವುದೇ ಲೋಪ ಕಂಡುಬಂದಲ್ಲಿ ತಕ್ಷಣ ಸರಿಪಡಿಸಲಾಗುವುದು,” ಎಂದರು. “ಕ್ಷಿಪಣಿ ವ್ಯವಸ್ಥೆಯು ಅತ್ಯಂತ ವಿಶ್ವಾಸಾರ್ಹ ಮತ್ತು ಸುರಕ್ಷಿತವಾಗಿದೆ” ಎಂದು ಅವರು ಸದನಕ್ಕೆ ಭರವಸೆ ನೀಡಿದರು.

“ಇದಲ್ಲದೆ ನಮ್ಮ ಸುರಕ್ಷತಾ ಕಾರ್ಯವಿಧಾನಗಳು ಮತ್ತು ಪ್ರೋಟೋಕಾಲ್‌ಗಳು ಅತ್ಯುನ್ನತ ಕ್ರಮದಲ್ಲಿವೆ ಮತ್ತು ಕಾಲಕಾಲಕ್ಕೆ ಪರಿಶೀಲಿಸಲಾಗುತ್ತದೆ. ನಮ್ಮ ಸಶಸ್ತ್ರ ಪಡೆಗಳು ಉತ್ತಮ ತರಬೇತಿ ಪಡೆದಿವೆ ಮತ್ತು ಶಿಸ್ತುಬದ್ಧವಾಗಿವೆ ಮತ್ತು ಅಂತಹ ವ್ಯವಸ್ಥೆಗಳನ್ನು ನಿರ್ವಹಿಸುವಲ್ಲಿ ಉತ್ತಮ ಅನುಭವವನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.

ಈ ಘಟನೆಯನ್ನು ಮಾರ್ಚ್ 10 ರಂದು ಪಾಕಿಸ್ತಾನಿ ಮಿಲಿಟರಿ ಸಾರ್ವಜನಿಕರ ಗಮನಕ್ಕೆ ತಂದಿತು. ಹಿಂದಿನ ಸಂಜೆ ಭಾರತೀಯ ಕ್ಷಿಪಣಿಯು ಪಾಕಿಸ್ತಾನದ ಭೂಪ್ರದೇಶದೊಳಗೆ 124 ಕಿ.ಮೀ ದೂರದಲ್ಲಿ ಬಂದಿಳಿದಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಪಾಕ್ ಹೇಳಿತ್ತು. ಕ್ಷಿಪಣಿಯು ಸಿರ್ಸಾದಿಂದ ಉಡಾವಣೆಗೊಂಡಿತು ಮತ್ತು ಭಾರತದ ಮಹಾಜನ್ ಫೈರಿಂಗ್ ಫೀಲ್ಡ್ ಕಡೆಗೆ ನೈರುತ್ಯಕ್ಕೆ ಚಲಿಸಿದು ಇದ್ದಕ್ಕಿದ್ದಂತೆ ವಾಯುವ್ಯಕ್ಕೆ ತಿರುಗಿ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿ ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಮಿಯಾನ್ ಚನ್ನು ಎಂಬಲ್ಲಿ ಇಳಿಯಿತು.

ಕ್ಷಿಪಣಿಯು ಸೂಪರ್-ಸಾನಿಕ್ ಆಗಿದ್ದು, ಶಬ್ದಕ್ಕಿಂತ 2.5 ಪಟ್ಟು 3 ಪಟ್ಟು ವೇಗದಲ್ಲಿ ಚಲಿಸುತ್ತದೆ, 40,000 ಅಡಿ ಎತ್ತರದಲ್ಲಿ ಪ್ರಯಾಣಿಸುತ್ತಿದೆ ಮತ್ತು ಪ್ರಯಾಣಿಕರ ವಿಮಾನಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಪಾಕಿಸ್ತಾನಿ ಮಿಲಿಟರಿ ಹೇಳಿದೆ. ಕ್ಷಿಪಣಿಯಿಂದ ಯಾರಿಗೂ ಗಾಯವಾಗಲಿಲ್ಲ, ಆದರೆ ಅದು ಬಿದ್ದ ಸ್ಥಳದಲ್ಲಿ ಗೋಡೆಗೆ ಹಾನಿ ಆಗಿದೆ.

ಮಾರ್ಚ್ 11 ರಂದು ಪಾಕಿಸ್ತಾನವು ಭಾರತದ ರಾಯಭಾರಿಗೆ ಕರೆ ಮಾಡಿ ಎರಡೂ ದೇಶಗಳು ಈ ಘಟನೆಯನ್ನು ಜಂಟಿಯಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿತ್ತು.

ಮಾರ್ಚ್ 11 ರಂದು ಮೊದಲ ಬಾರಿಗೆ ಘಟನೆಯನ್ನು ಒಪ್ಪಿಕೊಂಡ ರಕ್ಷಣಾ ಸಚಿವಾಲಯವು “ವಾಡಿಕೆಯ ನಿರ್ವಹಣೆಯ ಸಂದರ್ಭದಲ್ಲಿ, ತಾಂತ್ರಿಕ ದೋಷವು ಆಕಸ್ಮಿಕವಾಗಿ ಕ್ಷಿಪಣಿ ಹಾರಾಟಕ್ಕೆ ಕಾರಣವಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಸಿಂಗ್ ಮಂಗಳವಾರ ಹೇಳಿದಂತೆ, ಸರ್ಕಾರವು “ಗಂಭೀರ ದೃಷ್ಟಿಕೋನವನ್ನು ತೆಗೆದುಕೊಂಡಿದೆ ಮತ್ತು ಉನ್ನತ ಮಟ್ಟದ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದೆ” ಎಂದು ಆಗ ಹೇಳಿಕೆ ನೀಡಿತ್ತು. ಘಟನೆಯು “ತೀವ್ರವಾಗಿ ವಿಷಾದನೀಯವಾಗಿದೆ, ಆದರೆ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ” ಎಂದು ಅದು ಹೇಳಿತ್ತು.

ಇದನ್ನೂ ಓದಿ: Hijab: ಹಿಜಾಬ್ ಇಲ್ಲದೆ ನಾವು ಕಾಲೇಜಿಗೆ ಹೋಗುವುದಿಲ್ಲ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಉಡುಪಿ ವಿದ್ಯಾರ್ಥಿನಿಯರ ಸುದ್ದಿಗೋಷ್ಠಿ

Published On - 4:00 pm, Tue, 15 March 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್