AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ, ಪಾಕ್ ಕಡೆಯಿಂದ ಹರಡಲಾಗುತ್ತಿರುವ ಸುಳ್ಳು ಪ್ರಚಾರಗಳನ್ನು ಭಾರತೀಯ ರಕ್ಷಣಾ ಮತ್ತು ವಿದೇಶಾಂಗ ಇಲಾಖೆಗಳು ಖಂಡಿಸಿವೆ. ಭಾರತದ ವಾಯುನೆಲೆಗಳು ಸುರಕ್ಷಿತವಾಗಿವೆ ಎಂದು ದೃಢಪಡಿಸಲಾಗಿದೆ. ಪಾಕಿಸ್ತಾನದ 5 ವಾಯುನೆಲೆಗಳು ಮತ್ತು 2 ರಾಡಾರ್ ಬೇಸ್‌ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿರುವುದು ಇದೀಗ ಅಧಿಕೃತವಾಗಿ ದೃಢಪಟ್ಟಿದೆ.

ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ
ಪತ್ರಿಕಾಗೋಷ್ಠಿಯಲ್ಲಿ ವ್ಯೋಮಿಕಾ ಸಿಂಗ್, ವಿಕ್ರಮ್ ಮಿಸ್ರಿ ಹಾಗೂ ಸೋಫಿಯಾ ಖುರೇಷಿ
Ganapathi Sharma
|

Updated on:May 10, 2025 | 1:24 PM

Share

ನವದೆಹಲಿ, ಮೇ 10: ಭಾರತ ಹಾಗೂ ಪಾಕಿಸ್ತಾನ ನಡುವಣ ದಾಳಿ, ಪ್ರತಿ ದಾಳಿ ತೀವ್ರಗೊಂಡಿರುವ ಸಂದರ್ಭದಲ್ಲೇ ಅನೇಕ ಸುಳ್ಳು ಸುದ್ದಿಗಳೂ ಹರಿದಾಡುತ್ತಿವೆ. ಅದರಲ್ಲಿಯೂ ಪಾಕಿಸ್ತಾನ (Pakistan) ಕಡೆಯಿಂದ, ಭಾರತದಲ್ಲಿ ಅಸ್ಥಿರತೆ ಸೃಷ್ಟಿಸುವ ದುರುದ್ದೇಶದಿಂದ ಅನೇಕ ಸುಳ್ಳಿನ ಸರಮಾಲೆಯನ್ನೇ ಹರಿಯಬಿಡಲಾಗುತ್ತಿದೆ. ಅವುಗಳಿಗೆಲ್ಲ ಭಾರತ (India) ರಕ್ಷಣಾ ಇಲಾಖೆ (India Defence Ministry) ಹಾಗೂ ವಿದೇಶಾಂಗ ಇಲಾಖೆಗಳು ತೆರೆ ಎಳೆದಿವೆ. ಪಾಕ್ ವಿರುದ್ಧದ ಭಾರತೀಯ ಸೇನಾ (Indian Army) ಕಾರ್ಯಾಚರಣೆ ಬಗ್ಗೆ ಈವರೆಗೆ ನಡೆದ ವಿದ್ಯಮಾನಗಳ ಬಗ್ಗೆ ಉಭಯ ಇಲಾಖೆಗಳು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದವು.

ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ದಾಳಿ ಸಂಬಂಧ ಮಾಹಿತಿ ನೀಡಿದ ನಂತರ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ವಿವರವಾದ ಮಾಹಿತಿ ನೀಡಿದರು. ಪಾಕ್ ಸುಳ್ಳುಗಳನ್ನು ಬಯಲಿಗೆಳೆದರು.

ಲೈವ್ ವಿಡಿಯೋ ಇಲ್ಲಿ ನೋಡಿ

ಭಾರತದ ಎಲ್ಲ ವಾಯುನೆಲೆಗಳು ಸುರಕ್ಷಿತ

ಭಾರತದ ವಾಯುನೆಲೆಗಳನ್ನು ಧ್ವಂಸ ಮಾಡಲಾಗಿದೆ ಎಂಬ ಪಾಕಿಸ್ತಾನದ ಸುದ್ದಿಗಳು ಸುಳ್ಳು ಎಂದ ಮಿಸ್ರಿ, ಭಾರತದ ಎಲ್ಲ ವಾಯುನೆಲೆಗಳು ಸುರಕ್ಷಿತವಾಗಿವೆ ಎಂದು ದೃಢಪಡಿಸಿದರು. ಆದರೆ, ಪಾಕಿಸ್ತಾನವು ನಾಗರಿಕರನ್ನು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ ಎಂಬುದನ್ನು ಒಪ್ಪಿಕೊಂಡ ಅವರು, ಪಾಕಿಸ್ತಾನದ ಎಲ್ಲ ದಾಳಿಗಳನ್ನು ತಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ
Image
ಸಾವಿರಾರು ಮಿಸೇಲ್ ಮೂಲಕ ಭಾರತದಿಂದ ಪಾಕ್ ಮೇಲೆ ದಾಳಿ?, ಸತ್ಯಾಂಶ ಇಲ್ಲಿದೆ
Image
ಭಾರತದ ಯುದ್ಧ ವಿಮಾನ ಪಾಕ್ ಮೇಲೆ ಬಾಂಬ್ ಹಾಕಿದೆಯೆಂದು ಸುಳ್ಳು ಹೇಳಿಕೆ ವೈರಲ್
Image
ಪಾಕ್​ನ F17 ಜೆಟ್ ಅನ್ನು ಹೊಡೆದುರುಳಿಸಿದ ಭಾರತೀಯ ಸೇನೆ?, ನಿಜಾಂಶ ಇಲ್ಲಿದೆ
Image
ಎಲ್‌ಒಸಿಯಲ್ಲಿ ಪಾಕಿಸ್ತಾನ ರಫೇಲ್ ಅನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆ?

ಪಾಕಿಸ್ತಾನದ 5 ವಾಯುನೆಲೆ, 2 ರಾಡಾರ್ ಬೇಸ್ ಧ್ವಂಸ

ಪಾಕಿಸ್ತಾನದ 5 ವಾಯುನೆಲೆಗಳನ್ನು ಹಾಗೂ 2 ರಾಡಾರ್ ಬೇಸ್​ಗಳನ್ನು ಭಾರತೀಯ ಸೇಣೆ ಧ್ವಂಸಗೊಳಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು.

ಸೇನಾ ಕಾರ್ಯಾಚರಣೆಗೆ ಭಾರತದಲ್ಲೇ ಆಕ್ಷೇಪ ವ್ಯಕ್ತವಾಗಿದೆಯೇ?

ಪಾಕಿಸ್ತಾನ ವಿರುದ್ಧದ ಸೇನಾ ಕಾರ್ಯಾಚರಣೆಗೆ ಭಾರತ ಸರ್ಕಾರದ ವಿರುದ್ಧ ಸ್ವದೇಶದಲ್ಲೇ ಆಕ್ಷೇಪಗಳು ವ್ಯಕ್ತವಾಗಿವೆ ಎಂಬ ಶತ್ರು ರಾಷ್ಟ್ರದ ಆರೋಪಗಳಿಗೆ ಮಿಸ್ರಿ ತಿರುಗೇಟು ನೀಡಿದರು. ನಮ್ಮದು ಪಾಕಿಸ್ತಾನದ ರೀತಿಯ ದೇಶವಲ್ಲ. ಜಗತ್ತಿನಲ್ಲೇ ಬಲುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಅಭಿಪ್ರಾಯ ಸ್ವಾತಂತ್ರ್ಯಕ್ಕೆ ನಾವು ಬೆಲೆ ಕೊಡುತ್ತೇವೆ. ಆದಾಗ್ಯೂ, ಭಯೋತ್ಪಾದಕರ ಪೋಷಕ ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆಗೆ ನಮ್ಮ ದೇಶದಲ್ಲಿ ವಿರೋಧ ವ್ಯಕ್ತವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಭಾರತೀಯ ಸೇನೆ ಸೂಕ್ತ ತಿರುಗೇಟು ನೀಡುತ್ತಿದೆ: ಮಿಸ್ರಿ

ಪಾಕಿಸ್ತಾನದ ದಾಳಿ ಯತ್ನಗಳಿಗೆ ಭಾರತೀಯ ಸೇನೆ ಸೂಕ್ತ ತಿರುಗೇಟು ನೀಡುತ್ತಿದೆ ಮತ್ತು ನೀಡಲಿದೆ. ಪಾಕಿಸ್ತಾನದ ಸೇನಾ ಸೆಂಟರ್​ ಮೇಲೆಯೂ ದಾಳಿ ಮಾಡಲಾಗಿದೆ ಎಂದು ಮಿಸ್ರಿ ತಿಳಿಸಿದರು.

ಭಾರತದ 26 ಸ್ಥಳಗಳ ಮೇಲೆ ಕ್ಷಿಪಣಿ ದಾಳಿಗೆ ಪಾಕಿಸ್ತಾನ ಯತ್ನ

ಭಾರತದ 26 ಸ್ಥಳಗಳ ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿಗೆ ಪ್ರಯತ್ನಿಸಿತ್ತು. ಆಸ್ಪತ್ರೆ, ಶಾಲೆಗಳ ಮೇಲೆ ದಾಳಿ ನಡೆಸಲು ಯತ್ನಿಸಿತ್ತು. ಅದನ್ನು ತಡೆದು, ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು. ಉದಮ್‌ಪುರ, ಭುಜ್, ಬಟಿಂಡಾ, ಪಠಾಣ್‌ಕೋಟ್ ಸೇರಿದಂತೆ 5 ಸ್ಥಳಗಳಲ್ಲಿ ಉಪಕರಣಗಳಿಗೆ ಸ್ವಲ್ಪ ಹಾನಿಯಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಒಂದಲ್ಲ.. ಎರಡಲ್ಲ..: ಭಾರತ- ಪಾಕಿಸ್ತಾನ ಕುರಿತು ಹರಿದಾಡುತ್ತಿದೆ ನೂರಾರು ಸುಳ್ಳು ಸುದ್ದಿಗಳು

ಶ್ರೀನಗರ, ಅವಂತಿಪುರದಲ್ಲಿ ಆಸ್ಪತ್ರೆ, ಶಾಲೆಯನ್ನು ಗುರಿಯಾಗಿಸಿ ದಾಳಿ ನಡೆದಿದ್ದು, ಅದನ್ನು ಹಿಮ್ಮೆಟ್ಟಿಸಿದ್ದೇವೆ. ಪಾಕಿಸ್ತಾನ ವಾಯು ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಅವರು ಹೇಳಿದರು. ಭಾರತ ಉದ್ವಿಗ್ನತೆಯನ್ನು ಬಯಸುವುದಿಲ್ಲ, ಹಾಗೆಂದು ದಾಳಿ ಮಾಡಿದಾಗ ಸುಮ್ಮನಿರುವುದೂ ಇಲ್ಲ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Sat, 10 May 25

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?