ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರವೆಂಬ ಹಣೆಪಟ್ಟಿ

ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರ ಎನ್ನುವ ಹಣೆ ಪಟ್ಟಿ ಸಿಕ್ಕಿದೆ. ಕಲುಷಿತ ಗಾಳಿಯಿಂದ ಅಸ್ತಮಾ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಮತ್ತು ಮಧುಮೇಹ ಸೇರಿದಂತೆ ಅಸ್ತಿತ್ವದಲ್ಲಿರುವ ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರವೆಂಬ ಹಣೆಪಟ್ಟಿ
ದೆಹಲಿ ವಾಯುಮಾಲಿನ್ಯ
Follow us
ನಯನಾ ರಾಜೀವ್
|

Updated on: Mar 19, 2024 | 8:05 AM

ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎನಿಸಿಕೊಂಡಿದೆ. ಹೊಸ ವರದಿಯ ಪ್ರಕಾರ, ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದೆ, ಆದರೆ ದೆಹಲಿಯು ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟ ಹೊಂದಿರುವ ನಗರ ಎನ್ನುವ ಕುಖ್ಯಾತಿಗೆ ಪಾತ್ರವಾಗಿದೆ.

ದೇಶದಲ್ಲಿ ಅದೆಷ್ಟೋ ನಗರಗಳು ಮಾಲಿನ್ಯದಲ್ಲಿ ಮುಳುಗಿ ಹೋಗಿವೆ. ಆದರೂ ರಾಜಧಾನಿ ದೆಹಲಿ ಎಲ್ಲಾ ನಗರಗಳನ್ನೂ ಮೀರಿಸಿ ಮುನ್ನುಗ್ಗುತ್ತಿದೆ. ಅಲ್ಲಿ ವಾಸ ಮಾಡುವ ಜನಗಳಿಗೆ ಉಸಿರು ಬಿಗಿಹಿಡಿದು ಬದುಕುವ ಪರಿಸ್ಥಿತಿ ಇದೆ.

ಸಾಮಾನ್ಯವಾಗಿ ಚಳಿಗಾಲದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯನ್ನ ನರಕ ಎಂದು ಕರೆಯುವುದು ಮಾಮೂಲು. ಏಕೆಂದರೆ ಅಲ್ಲಿ ಹೊಗೆ, ಮಂಜು ದೆಹಲಿ ಜನರನ್ನ ಇನ್ನಿಲ್ಲದ ರೀತಿ ಬಾಧಿಸುತ್ತದೆ.

ಮತ್ತಷ್ಟು ಓದಿ: Bangalore Air Quality: ಭಾರತದ ಅತ್ಯಂತ ಕಲುಷಿತ ನಗರಗಳಲ್ಲಿ ಬೆಂಗಳೂರು ನಗರಕ್ಕೆ 6ನೇ ಸ್ಥಾನ

ದೆಹಲಿ ನಿವಾಸಿಗಳ ಪೈಕಿ ಬಹುತೇಕರು ಚಳಿಗಾಲ ಬಂದಾಗ ದಕ್ಷಿಣ ಭಾರತ ಅಥವಾ ಈಶಾನ್ಯ ಭಾರತದ ಕಡೆ ಪ್ರಯಾಣ ಬೆಳೆಸುತ್ತಾರೆ. ಪ್ರತಿ ಘನ ಮೀಟರ್‌ಗೆ ಸರಾಸರಿ 54.4 ಮೈಕ್ರೋಗ್ರಾಂಗಳಷ್ಟು PM2.5 ಸಾಂದ್ರತೆಯೊಂದಿಗೆ, ಬಾಂಗ್ಲಾದೇಶ (ಪ್ರತಿ ಘನ ಮೀಟರ್‌ಗೆ 79.9 ಮೈಕ್ರೊಗ್ರಾಂ) ಮತ್ತು ಪಾಕಿಸ್ತಾನ (73.7 ಮೈಕ್ರೋಗ್ರಾಂ ಪ್ರತಿ ಘನ ಮೀಟರ್) ನಂತರ 2023 ರಲ್ಲಿ 134 ದೇಶಗಳಲ್ಲಿ ಭಾರತವು ಮೂರನೇ-ಕೆಟ್ಟ ಗಾಳಿಯ ಗುಣಮಟ್ಟವನ್ನು ಹೊಂದಿತ್ತು.

ಸ್ವಿಸ್ ಸಂಸ್ಥೆ IQAir 2023ನೇ ಸಾಲಿನ ವಿಶ್ವ ವಾಯು ಗುಣಮಟ್ಟ ವರದಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಈ ಎಲ್ಲಾ ಅಂಶಗಳಿವೆ. 2022 ರಲ್ಲಿ, ಪ್ರತಿ ಘನ ಮೀಟರ್‌ಗೆ ಸರಾಸರಿ 53.3 ಮೈಕ್ರೋಗ್ರಾಂಗಳಷ್ಟು PM2.5 ಸಾಂದ್ರತೆಯೊಂದಿಗೆ ಭಾರತವು ಎಂಟನೇ ಅತ್ಯಂತ ಕಲುಷಿತ ರಾಷ್ಟ್ರವಾಗಿತ್ತು.

ಬೇಗುಸರಾಯ್ ಪ್ರತಿ ಘನ ಮೀಟರ್‌ಗೆ ಸರಾಸರಿ 118.9 ಮೈಕ್ರೋಗ್ರಾಂಗಳಷ್ಟು PM2.5 ಸಾಂದ್ರತೆಯೊಂದಿಗೆ ಜಾಗತಿಕವಾಗಿ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿದೆ. ನಗರವು 2022 ರ ಶ್ರೇಯಾಂಕದಲ್ಲಿ ಕಾಣಿಸಿಕೊಂಡಿಲ್ಲ.

ಪಿಎಂ2.5 ವಾಯುಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಅಸ್ತಮಾ, ಕ್ಯಾನ್ಸರ್, ಪಾರ್ಶ್ವವಾಯು ಮತ್ತು ಶ್ವಾಸಕೋಶದ ಕಾಯಿಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ತಲೆದೋರುತ್ತವೆ. ಮಾನಸಿಕ ಸಮಸ್ಯೆಗಳನ್ನು ಕೂಡ ಉಂಟು ಮಾಡುವ ಸಾಧ್ಯತೆ ಇರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ