ಭಾರತದ ಅತ್ಯಂತ ಶ್ರೀಮಂತ ಶಾಸಕರು: ಡಿಕೆ ಶಿವಕುಮಾರ್ ನಂ.2, ಟಾಪ್ 10ರಲ್ಲಿ ಕರ್ನಾಟಕದ ನಾಲ್ವರಿಗೆ ಸ್ಥಾನ
India's richest MLA: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಭಾರತದ ಅತ್ಯಂತ ಶ್ರೀಮಂತ ಹಾಗೂ ಬಡ ಶಾಸಕರು ಯಾರು ಎನ್ನುವ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಮುಂಬೈನ ಘಾಟ್ಕೋಪರ್ ಪೂರ್ವದ ಬಿಜೆಪಿ ಶಾಸಕ ಪರಾಗ್ ಶಾ ಭಾರತದ ಅತ್ಯಂತ ಶ್ರೀಮಂತ ಶಾಸಕರಾಗಿದ್ದಾರೆ. ಇವರ ಆಸ್ತಿಯ ಮೌಲ್ಯ ಸುಮಾರು 3400 ಕೋಟಿ ರೂ. ಅವರ ನಂತರ ಕರ್ನಾಟಕದ ಕನಕಪುರದ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರ ಆಸ್ತಿ 1,413 ಕೋಟಿ ರೂ.ಗಳಿಗಿಂತ ಹೆಚ್ಚು. ಅತಿ ಕಡಿಮೆ ಆಸ್ತಿ ಹೊಂದಿರುವ ಶಾಸಕರು ಯಾರು ಎಂಬುದನ್ನು ತಿಳಿಯಿರಿ.

ನವದೆಹಲಿ, ಮಾರ್ಚ್ 20: ಭಾರತದ ಅತ್ಯಂತ ಶ್ರೀಮಂತ ಹಾಗೂ ಬಡ ಶಾಸಕರು ಯಾರು ಎನ್ನುವ ವರದಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದೆ. ಎಡಿಆರ್ ವರದಿಯ ಪ್ರಕಾರ, ಮುಂಬೈನ ಘಾಟ್ಕೋಪರ್ ಪೂರ್ವದ ಬಿಜೆಪಿ ಶಾಸಕ ಪರಾಗ್ ಶಾ ಭಾರತದ ಅತ್ಯಂತ ಶ್ರೀಮಂತ ಶಾಸಕ. ಇವರ ಆಸ್ತಿಯ ಮೌಲ್ಯ ಸುಮಾರು 3400 ಕೋಟಿ ರೂ. ಅವರ ನಂತರ ಕರ್ನಾಟಕದ ಕನಕಪುರದ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರ ಆಸ್ತಿ 1,413 ಕೋಟಿ ರೂ.ಗಳಿಗಿಂತ ಹೆಚ್ಚು. ಅತಿ ಕಡಿಮೆ ಆಸ್ತಿ ಹೊಂದಿರುವ ಶಾಸಕರು ಯಾರು ಎಂಬುದನ್ನು ತಿಳಿಯಿರಿ.
ಪರಾಗ್ ಶಾ ಅತ್ಯಂತ ಶ್ರೀಮಂತ ಶಾಸಕ
ಎಡಿಆರ್ ವರದಿಯು ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವ ಮೊದಲು ಸಲ್ಲಿಸಿದ ಅಫಿಡವಿಟ್‌ಗಳಲ್ಲಿರುವ ಮಾಹಿತಿಯನ್ನೇ ಇದು ಹೇಳುತ್ತದೆ. ಈ ಸಂಶೋಧನೆಯು 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ 4092 ಶಾಸಕರನ್ನು ಒಳಗೊಂಡಿದೆ. ಈ ವರದಿಯ ಪ್ರಕಾರ, ಬಿಜೆಪಿಯ ಪರಾಗ್ ಶಾ ಅತ್ಯಂತ ಶ್ರೀಮಂತ ಶಾಸಕ. ಪಶ್ಚಿಮ ಬಂಗಾಳದ ನಿರ್ಮಲ್ ಕುಮಾರ್ ಧಾರಾ ಅತಿ ಕಡಿಮೆ ಆಸ್ತಿ ಹೊಂದಿರುವ ಶಾಸಕರಾಗಿದ್ದಾರೆ. ಅವರ ಬಳಿ ಕೇವಲ 1700 ರೂ. ಇದೆ. ರ್ಮಲ್ ಕುಮಾರ್ ಧಾರಾ ಪಶ್ಚಿಮ ಬಂಗಾಳದ ಇಂಡಸ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.
ಕರ್ನಾಟಕದ ಶಾಸಕರು ಹೊಂದಿರುವ ಆಸ್ತಿ ಎಷ್ಟಿದೆ?
ಕರ್ನಾಟಕದ ಶಾಸಕರು ಒಟ್ಟಾರೆಯಾಗಿ 14,179 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು, ಇದು ದೇಶದಲ್ಲೇ ಅತಿ ಹೆಚ್ಚು. ಮಹಾರಾಷ್ಟ್ರ ಶಾಸಕರ ಆಸ್ತಿ 12,424 ಕೋಟಿ ರೂ. ಆಂಧ್ರಪ್ರದೇಶದ ಶಾಸಕರು 11,323 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅತ್ಯಂತ ಕಡಿಮೆ ಸಂಪತ್ತು ಹೊಂದಿರುವ ರಾಜ್ಯಗಳಲ್ಲಿ ತ್ರಿಪುರ, ಮಣಿಪುರ ಮತ್ತು ಪುದುಚೇರಿ ಸೇರಿವೆ.
ತ್ರಿಪುರಾ ಶಾಸಕರ ಒಟ್ಟು ಆಸ್ತಿ ಮೌಲ್ಯ 90 ಕೋಟಿ ರೂ.
ತ್ರಿಪುರಾ ಶಾಸಕರು 90 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಮಣಿಪುರ ಶಾಸಕರು 222 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಪುದುಚೇರಿ ಶಾಸಕರು 297 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಕರ್ನಾಟಕದ ಸ್ವತಂತ್ರ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಅವರ ಆಸ್ತಿ 1,267 ಕೋಟಿ ರೂ. ಕರ್ನಾಟಕದ ಕಾಂಗ್ರೆಸ್ ಶಾಸಕ ಪ್ರಿಯಕೃಷ್ಣ ಅವರ ಆಸ್ತಿ 1,156 ಕೋಟಿ ರೂ. ಇದೆ. ವಿಶೇಷವೇನೆಂದರೆ ಟಾಪ್ 10ರಲ್ಲಿ ಕರ್ನಾಟಕದ ನಾಲ್ವರು ಶಾಸಕರು ಸ್ಥಾನ ಪಡೆದಿದ್ದಾರೆ.
ಮತ್ತಷ್ಟು ಓದಿ: India’s Richest MLA: ಡಿಕೆ ಶಿವಕುಮಾರ್ ಭಾರತದ ಅತಿ ಶ್ರೀಮಂತ ಶಾಸಕ; ಅತಿಹೆಚ್ಚು ಬಿಲಿಯನೇರ್ ಶಾಸಕರು ಕರ್ನಾಟಕದವರೇ
ಶ್ರೀಮಂತ ಶಾಸಕರ ಪಟ್ಟಿಯಲ್ಲಿರುವ ಹೆಸರುಗಳು ಇವು
ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಹಲವು ದೊಡ್ಡ ಹೆಸರುಗಳಿವೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಆಸ್ತಿ 931 ಕೋಟಿ ರೂ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಆಸ್ತಿ 757 ಕೋಟಿ ರೂ. ಇದೆ.
ಈ ರಾಜ್ಯದ ಏಳು ಶಾಸಕರು ಟಾಪ್ 20 ಶ್ರೀಮಂತ ಶಾಸಕರಲ್ಲಿ ಸೇರಿದ್ದಾರೆ. ಇವರಲ್ಲಿ ಐಟಿ ಸಚಿವ ನಾರಾ ಲೋಕೇಶ್ ಮತ್ತು ಹಿಂದೂಪುರ ಶಾಸಕ ಎನ್. ಬಾಲಕೃಷ್ಣ ಕೂಡ ಸೇರಿದ್ದಾರೆ. ರಾಜ್ಯಗಳ ಪ್ರಕಾರ ಶಾಸಕರ ಆಸ್ತಿಯಲ್ಲಿ ಬಹಳಷ್ಟು ವ್ಯತ್ಯಾಸವಿದೆ. ಸರಾಸರಿ ಸಂಪತ್ತಿನ ವಿಷಯದಲ್ಲಿ ಆಂಧ್ರಪ್ರದೇಶ ಮುಂಚೂಣಿಯಲ್ಲಿದೆ. ಇಲ್ಲಿನ ಪ್ರತಿ ಶಾಸಕರ ಸರಾಸರಿ ಆಸ್ತಿ 65.07 ಕೋಟಿ ರೂ. ಇದೆ.
ತ್ರಿಪುರಾದಲ್ಲಿ ಶಾಸಕರ ಸರಾಸರಿ ಆಸ್ತಿ ಅತ್ಯಂತ ಕಡಿಮೆ
ಕರ್ನಾಟಕದಲ್ಲಿ ಈ ಪ್ರಮಾಣ 63.58 ಕೋಟಿ ರೂ. ಮಹಾರಾಷ್ಟ್ರದಲ್ಲಿ ಇದು 43.44 ಕೋಟಿ ರೂ. ತ್ರಿಪುರಾದಲ್ಲಿ ಅತ್ಯಂತ ಕಡಿಮೆ ಸರಾಸರಿ ಸಂಪತ್ತು ಇದೆ. ಇಲ್ಲಿನ ಪ್ರತಿ ಶಾಸಕರ ಸರಾಸರಿ ಆಸ್ತಿ 1.51 ಕೋಟಿ ರೂ. 4,092 ಶಾಸಕರ ಒಟ್ಟು ಆಸ್ತಿ 73,348 ಕೋಟಿ ರೂ. ಇದು 2023-24ನೇ ಸಾಲಿನ ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯದ ಒಟ್ಟು ವಾರ್ಷಿಕ ಬಜೆಟ್‌ಗಿಂತ ಹೆಚ್ಚಾಗಿದೆ.
ಬಿಜೆಪಿ ಶಾಸಕರು ಅತಿ ಹೆಚ್ಚು ಆಸ್ತಿ ಹೊಂದಿದ್ದಾರೆ
ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಬಿಜೆಪಿ ಶಾಸಕರು ಅತಿ ಹೆಚ್ಚು ಆಸ್ತಿ ಹೊಂದಿದ್ದಾರೆ. ಅವರ ಬಳಿ 26,270 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ. ಕಾಂಗ್ರೆಸ್ ಶಾಸಕರು 17,357 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಟಿಡಿಪಿ ಶಾಸಕರು 9,108 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಶಿವಸೇನಾ ಶಾಸಕರು 1,758 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಎಎಪಿ ಶಾಸಕರು ಸರಾಸರಿ ಪ್ರತಿ ಶಾಸಕರ ಆಸ್ತಿ 7.33 ಕೋಟಿ ರೂ. ಇದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ