Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: Monkeypox: ಕೇರಳದಲ್ಲಿ ದೇಶದ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ಕೇರಳದಲ್ಲಿ ದೇಶದ ಎರಡನೇ ಮಂಕಿಪ್ಸ್ ಪ್ರಕರಣ ಪತ್ತೆಯಾಗಿದೆ.

Breaking News: Monkeypox: ಕೇರಳದಲ್ಲಿ ದೇಶದ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ
Monkeypox
Follow us
TV9 Web
| Updated By: ನಯನಾ ರಾಜೀವ್

Updated on:Jul 18, 2022 | 6:01 PM

ಕೇರಳದಲ್ಲಿ ದೇಶದ ಎರಡನೇ ಮಂಕಿಪ್ಸ್ ಪ್ರಕರಣ ಪತ್ತೆಯಾಗಿದೆ, ಕೇರಳದ ಆರೋಗ್ಯ ಸಚಿವೆ ವೀಣಾ ಚಾರ್ಜ್​ ಈ ಕುರಿತು ಮಾಹಿತಿ ನೀಡಿದ್ದಾರೆ.

ಕೇರಳ ಸರ್ಕಾರವು ಮಂಕಿಪಾಕ್ಸ್ ಹರಡದಂತೆ ತೀವ್ರ ನಿಗಾ ಇರಿಸಿದ್ದು, ಐದು ಜಿಲ್ಲೆಗಳಿಗೆ ಅಲರ್ಟ್​ ಘೋಷಿಸಲಾಗಿದೆ. ಒಂದೆರಡು ದಿನಗಳ ಹಿಂದಷ್ಟೇ ಯುಎಇಯಿಂದ ಬಂದಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ದೃಢಪಟ್ಟಿತ್ತು.

ದುಬೈನಿಂದ ಜುಲೈ 13 ರಂದು ಕೇರಳಕ್ಕೆ ಬಂದಿದ್ದ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿದೆ. ಅವರನ್ನು ಕಣ್ಣೂರಿನಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ಅವರ ಪ್ರಾಥಮಿಕ ಕಾಂಟ್ಯಾಕ್ಟ್​ನಲ್ಲಿದ್ದಂತಹವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದರು.

ಮಂಗಳೂರು ಮೂಲಕ ಕೇರಳಕ್ಕೆ ಬಂದ ಯುವಕನಿಗೆ ಮಂಕಿಪಾಕ್ಸ್  ತಗುಲಿದೆ, ದುಬೈನಿಂದ ಮಂಗಳೂರು ಏರ್​ಪೋರ್ಟ್​​ಗೆ ಯುವಕ ಆಗಮಿಸಿದ್ದ, ಏರ್​ಪೋರ್ಟ್​​ನಿಂದ ನೇರವಾಗಿ ಕಣ್ಣೂರಿಗೆ ತೆರಳಿದ್ದರು, ರೋಗ ಲಕ್ಷಣ ಪತ್ತೆ ಹಿನ್ನೆಲೆ ಮೆಡಿಕಲ್ ಕಾಲೇಜಿನಲ್ಲಿ ತಪಾಸಣೆ ನಡೆಸಲಾಗಿತ್ತು. ವೈರಾಲಜಿ ಲ್ಯಾಬ್​ಗೆ ಕಳುಹಿಸಿದ ಮಾದರಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದ ಪುಣೆಯ ವೈರಾಲಜಿ ಲ್ಯಾಬ್​ಗೆ ಕಳುಹಿಸಲಾಗಿತ್ತು.

ದುಬೈನಿಂದ ಆಗಮಿಸಿದ ಈ ವಿಮಾನದಲ್ಲಿ 191 ಪ್ರಯಾಣಿಕರಿದ್ದರು., ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 15, ಉಡುಪಿ ಜಿಲ್ಲೆಯ 6,, ಕಾಸರಗೋಡು 13, ಕಣ್ಣೂರು ಮೂಲದ ಒಬ್ಬ ಪ್ರಯಾಣಿಕ ಇದ್ದ, ರೋಗ ಲಕ್ಷಣಗಳು ಇದ್ದಲ್ಲಿ ಆಸ್ಪತ್ರೆಗೆ ದಾಖಲಾಗಲು ಸೂಚನೆ, ತಕ್ಷಣ ಆರೋಗ್ಯ ಇಲಾಖೆ ಅಥವಾ ಆಸ್ಪತ್ರೆಗೆ ದಾಖಲಾಗಲು ಸೂಚನೆ ನೀಡಲಾಗಿದೆ.

ಸುಮಾರು 60 ದೇಶಗಳಲ್ಲಿ ಜುಲೈ 13ರವರೆಗೆ 10,400ಕ್ಕೂ ಅಧಿಕ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದವು. ಮಂಕಿಪಾಕ್ಸ್ ವೈರಾಣು ಸಿಡುಬು ಉಂಟುಮಾಡುವ ವೈರಾಣುವಿಗೆ ಸಂಬಂಧಿಸಿದ್ದಾಗಿದ್ದು, ಸಿಡುಬು ವೈರಾಣುವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಆದರೆ ಇವೆರಡೂ ಪೋಕ್ಸ್ವಿರಿಡೆ ಎಂಬ ತಳಿಯ ಪೈಕಿ ಆರ್ಥೋಪಾಕ್ಸ್ ವೈರಸ್ ಕುಲಕ್ಕೆ ಸೇರಿದ್ದಾಗಿದ್ದು ಮಂಕಿಪಾಕ್ಸ್ ನ ಮೊದಲ ಪ್ರಕರಣವನ್ನು 1958 ರಲ್ಲಿ ಸಂಶೋಧನೆಗಾಗಿ ಹಿಡಿದಿಟ್ಟಿದ್ದ ಮಂಗಗಳಿಂದ ಪತ್ತೆ ಮಾಡಲಾಗಿತ್ತು.

1970 ರಲ್ಲಿ ಪಶ್ಚಿಮ ಆಫ್ರಿಕಾದಲ್ಲಿ ಮೊದಲ ಬಾರಿಗೆ ಮಾನವರಲ್ಲಿ ಈ ಖಾಯಿಲೆ ಪತ್ತೆಯಾಗಿತ್ತು. 2020 ರಲ್ಲಿ ಡಬ್ಲ್ಯುಹೆಚ್ಒ ನೀಡಿದ ಮಾಹಿತಿಯ ಪ್ರಕಾರ 4,594 ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, 171 ಸಾವು ಸಂಭವಿಸಿದೆ (ಮರಣ ಪ್ರಮಾಣ ಶೇ.3.7 ರಷ್ಟಿದೆ) ಈ ಪ್ರಣಗಳು ಪತ್ತೆಯಾದಲ್ಲಿ ಪಿಸಿಆರ್ ಪರೀಕ್ಷೆ ಸೌಲಭ್ಯಗಳು ಲಭ್ಯವಿಲ್ಲದ ಕಾರಣ ಇವುಗಳನ್ನು ಶಂಕಿತ ಪ್ರಕರಣಗಳೆಂದು ಗುರುತಿಸಲಾಗಿದೆ.

ಲಕ್ಷಣಗಳು

ಜ್ವರ, ತಲೆ ನೋವು, ಬೆನ್ನು ನೋವು, ಸ್ನಾಯು ನೋವು, ಚಳಿ ಹಾಗೂ ಬಳಲಿಕೆ, ಜ್ವರದೊಂದಿಗೆ ದೇಹದ ಬೇರೆ ಭಾಗಗಳಿಗೆ ಹರಡುವುದಕ್ಕೂ ಮುನ್ನ, ಮುಖ, ಕೈ ಕಾಲುಗಳಲ್ಲಿ ದದ್ದು ಹೊರಹೊಮ್ಮುತ್ತದೆ. ಬಳಿಕ ಬಾಯಿಯ ಒಳಗೆ, ಕಾರ್ನಿಯಾ, ಜನನಾಂಗಗಳಲ್ಲೂ ಕಾಣಿಸಿಕೊಳ್ಳಬಹುದಾಗಿದೆ.

Published On - 4:04 pm, Mon, 18 July 22

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ