AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indigo Offers | ಇಂಡಿಗೋ ಪ್ರಯಾಣಿಕರಿಗೆ ಭರ್ಜರಿ ಆಫರ್; ಕೇವಲ 915 ರೂ.ಗೆ ವಿಮಾನದ ಟಿಕೆಟ್!

Indigo Flight Ticket Sale: 2021ರ ಸೆಪ್ಟೆಂಬರ್ 1 ಮತ್ತು 2022ರ ಮಾರ್ಚ್ 22ರವರೆಗೆ ಇಂಡಿಗೋದಲ್ಲಿ ಪ್ರಯಾಣ ಮಾಡುವ ಅದೃಷ್ಟಶಾಲಿ ಪ್ರಯಾಣಿಕರಿಗೆ 915 ರೂ.ಗೆ ಟಿಕೆಟ್ ಲಭ್ಯವಾಗಲಿದೆ

Indigo Offers | ಇಂಡಿಗೋ ಪ್ರಯಾಣಿಕರಿಗೆ ಭರ್ಜರಿ ಆಫರ್; ಕೇವಲ 915 ರೂ.ಗೆ ವಿಮಾನದ ಟಿಕೆಟ್!
ಸಂಗ್ರಹ ಚಿತ್ರ
TV9 Web
| Edited By: |

Updated on: Aug 04, 2021 | 7:36 PM

Share

ನವದೆಹಲಿ: ಇಂಡಿಗೋ ವಿಮಾನದ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಒಂದು ಇಲ್ಲಿದೆ. 15ನೇ ವರ್ಷದ ಸಂಭ್ರಮದಲ್ಲಿರುವ ಇಂಡಿಗೋ ಏರ್​ಲೈನ್ಸ್​ ತನ್ನ ಪ್ರಯಾಣಿಕರಿಗೆ ಭರ್ಜರಿ ಆಫರ್ ಒಂದನ್ನು ಘೋಷಿಸಿದೆ. ಕೇವಲ 915 ರೂ.ಗೆ ಟಿಕೆಟ್ ಬುಕ್ ಮಾಡುವ ಅವಕಾಶ ನೀಡಿದೆ. 2021ರ ಸೆಪ್ಟೆಂಬರ್ 1 ಮತ್ತು 2022ರ ಮಾರ್ಚ್ 22ರವರೆಗೆ ಇಂಡಿಗೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಈ ಟಿಕೆಟ್ ಅನ್ನು ಖರೀದಿಸಬಹುದು. ತನ್ನ 15ನೇ ವರ್ಷದ ವಾರ್ಷಿಕೋತ್ಸವದ ನೆನಪಿಗಾಗಿ ಮೂರು ದಿನಗಳ ಕಾಲ ಭರ್ಜರಿ ಸೇಲ್ ಹಾಕಿದೆ.

ಇಂದಿನಿಂದ ಆಗಸ್ಟ್ 6ರವರೆಗೆ ಈ ರಿಯಾಯಿತಿ ದರದ ಟಿಕೆಟ್ ಅನ್ನು ಇಂಡಿಗೋ ಮಾರಾಟ ಮಾಡಲಿದೆ. ಅದೃಷ್ಟಶಾಲಿ ಪ್ರಯಾಣಿಕರಿಗೆ 915 ರೂ. ಟಿಕೆಟ್ ಲಭ್ಯವಾಗಲಿದೆ. ಹೆಚ್ಚುವರಿಯಾಗಿ, ಫಾಸ್ಟ್ ಫಾರ್ವರ್ಡ್, 6 ಇ-ಫ್ಲೆಕ್ಸ್, 6-ಇ ಸೇರಿದಂತೆ 6E ಆಡ್-ಆನ್​ಗಳು ಬ್ಯಾಗ್​ಪೋರ್ಟ್ ಅನ್ನು 315 ರೂ.ಗಳಲ್ಲಿ ನೀಡಲಾಗುವುದು. ಈ ಆಫರ್ ಡೊಮೆಸ್ಟಿಕ್ ವಿಮಾನ ಪ್ರಯಾಣಕ್ಕೆ ಮಾತ್ರ ಅನ್ವಯವಾಗಲಿದೆ. ಪ್ರಯಾಣಿಕರು ಎಲ್ಲಿಂದ ಎಲ್ಲಿಗೆ ಪ್ರಯಾಣಿಸುತ್ತಾರೆ, ಯಾವ ಕ್ಲಾಸ್​ನಲ್ಲಿ ಪ್ರಯಾಣಿಸುತ್ತಾರೆ ಎಂಬುದರ ಆಧಾರದಲ್ಲಿ ಬೆಲೆಯಲ್ಲೂ ಬದಲಾವಣೆಯಾಗಲಿದೆ.

ಏರ್​ಲೈನ್ಸ್ ವೆಬ್​ಸೈಟ್ ಅಥವಾ ಮೊಬೈಲ್ ಆ್ಯಪ್ ಮೂಲಕ ಇಂಡಿಗೋ ವಿಮಾನದ ಟಿಕೆಟ್ ಬುಕ್ ಮಾಡಿದರೆ ಶೇ. 5ರಷ್ಟು ಕ್ಯಾಶ್​ಬ್ಯಾಕ್ ಕೂಡ ಸಿಗಲಿದೆ. ಹಾಗೇ ಹೆಚ್​ಎಸ್​ಬಿಸಿ ಕ್ರೆಡಿಟ್ ಕಾರ್ಡ್ ಮೂಲಕ ಟಿಕೆಟ್ ಬುಕ್ ಮಾಡಿದರೆ ಶೇ. 5ರಷ್ಟು ಕ್ಯಾಶ್​ಬ್ಯಾಕ್ ಸಿಗಲಿದೆ. ಈ ಆಫರ್ ಗರಿಷ್ಟ 30,000 ರೂ.ವರೆಗಿನ ಟಿಕೆಟ್ ಬುಕಿಂಗ್​ಗೆ ಕ್ಯಾಶ್​ಬ್ಯಾಕ್ ಸಿಗಲಿದೆ ಎಂದು ಇಂಡಿಗೋ ವಿಮಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ

Air India Flight: ವಿಮಾನದ ಕಿಟಕಿಯಲ್ಲಿ ಬಿರುಕು; ಸೌದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್​ ತುರ್ತು ಭೂಸ್ಪರ್ಶ

(Indigo airfare sale Indigo Special Offers Flight Ticket from 915 Rupees in sale on 15th birthday)

Follow Us
TV9 Web
TV9 Web

TV9 Kannada

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ